ಲೈಂಗಿಕ ದೌರ್ಜನ್ಯ ಪ್ರಕರಣ: ಜುಲೈ 18ರವರೆಗೆ ನ್ಯಾಯಾಂಗ ಬಂಧನ, ಪರಪ್ಪನ ಅಗ್ರಹಾರದತ್ತ ಸೂರಜ್ ರೇವಣ್ಣ

Date:

ಇಬ್ಬರು ಯುವಕರಿಗೆ ಲೈಂಗಿಕ ದೌರ್ಜನ್ಯ ನೀಡಿರುವ ಆರೋಪದ ಮೇಲೆ ಬಂಧಿತನಾಗಿರುವ ಜೆಡಿಎಸ್‌ನ ವಿಧಾನ ಪರಿಷತ್‌ ಸದಸ್ಯ ಸೂರಜ್‌ ರೇವಣ್ಣ ಗೆ ಬೆಂಗಳೂರಿನ ಸಷೆನ್ಸ್‌ ನ್ಯಾಯಾಲಯ ಜುಲೈ 18ರವರೆಗೂ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

ಪ್ರಕರಣಗಳಿಗೆ ಸಂಬಂಧಿಸಿದಂತೆ ಜುಲೈ 1ರಂದು 42ನೇ ಹೆಚ್ಚುವರಿ ಮುಖ್ಯ ಮೆಟ್ರೊಪಾಲಿಟೆನ್‌ ಮ್ಯಾಜಿಸ್ಟ್ರೇಟ್‌ ಅವರು ಜುಲೈ 3ರವರೆಗೂ ಸಿಐಡಿ ಕಸ್ಟಡಿಗೆ ನೀಡಿದ್ದರು.

ಸಿಐಡಿ ತಂಡ ಕಳೆದ ವಾರ ಈತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿತ್ತು. ಈತನ ಡಿಎನ್‌ಎ ಮಾದರಿಗಳನ್ನು ಕೂಡ ಸಂಗ್ರಹಿಸಲಾಗಿತ್ತು. ಸೂರಜ್‌ನನ್ನು ಜೂನ್‌ 23ರಂದು ಬಂಧಿಸಲಾಗಿದ್ದು,ಪುರುಷತ್ವ ಪರೀಕ್ಷೆಗೊಳಪಡಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದೇ ರೀತಿ ಸಿಐಡಿ ತಂಡ ಶಾಸಕನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗ ಇಬ್ಬರು ಸಂತ್ರಸ್ತರ ಡಿಎನ್‌ಎ ಮಾದರಿಯನ್ನು ಕೂಡ ಸಂಗ್ರಹಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗಾಯ ನೆಕ್ಕಿಕೊಳ್ಳುತ್ತಿರುವ ಮೋದಿ ಎಚ್ಚರಿಕೆ- ಹೊಸ ದಮನ ದಾಳಿ ದಸ್ತಗಿರಿಗಳ ಮುನ್ಸೂಚನೆ

ಮೊದಲ ಪ್ರಕರಣದಲ್ಲಿ, ಹಾಸನ ಜಿಲ್ಲೆಯ ಯುವಕರೊಬ್ಬರು ಸೂರಜ್‌ ರೇವಣ್ಣ ಜೂನ್‌ 16ರಂದು ಫಾರ್ಮ್‌ಹೌಸ್‌ನಲ್ಲಿ ತನ್ನನ್ನು ಲೈಂಗಿಕವಾಗಿ ಕಿರುಕುಳ ನೀಡಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ದೂರು ನೀಡಿದ್ದಾರೆ.

ಎರಡನೇ ಪ್ರಕರಣದಲ್ಲಿ,36 ವರ್ಷದ ಯುವಕರೊಬ್ಬರು ದೂರು ನೀಡಿದ್ದು, ಕೋವಿಡ್‌ ಸಾಂಕ್ರಾಮಿಕ ಕಾಲದ ಅವಧಿಯಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯವೆಸಗಲಾಗಿದೆ ಎಂದು ಆರೋಪಿಸಿದ್ದಾನೆ.

ಇವೆರೆಡೂ ದೂರುಗಳ ಆಧಾರದ ಮೇಲೆ ಸೂರಜ್‌ ವಿರುದ್ಧ 377, 342, 506 ಸೆಕ್ಷನ್‌ಗಳು ಸೇರಿದಂತೆ ಐಪಿಸಿಯ ವಿವಿಧ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

ಸೂರಜ್‌ ರೇವಣ್ಣ ಸೋದರ ಜೆಡಿಎಸ್‌ನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣನನ್ನು ಕೂಡ ಹಲವು ಲೈಂಗಿಕ ಕಿರುಕುಳಗಳ ಆರೋಪದ ಮೇಲೆ ಬಂಧಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...