ಬೀದರ್ | ಮಸೀದಿ ಮೇಲೆ ಭಾಗವಾಧ್ವಜ ಹಾರಿಸಿದ ನಾಲ್ವರ ಬಂಧನ

Date:

ಮಸೀದಿಯೊಂದರ ಮೇಲೆ ಭಾಗವಾಧ್ವಜ ಹಾರಿಸಿ ನಾಪತ್ತೆಯಾಗಿದ್ದ ನಾಲ್ವರು ಕಿಡಿಗೇಡಿಗಳನ್ನು ಬಂಧಿಸುವಲ್ಲಿ ಬಸವಕಲ್ಯಾಣ ಗ್ರಾಮೀಣ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಸವಕಲ್ಯಾಣ ತಾಲೂಕಿನ ಧನ್ನೂರ (ಕೆ) ಗ್ರಾಮದ ಹೊರವಲಯದ ಜಾಮಿಯಾ ಮಸೀದಿ ಮೇಲೆ ಸೆಪ್ಟೆಂಬರ್ 20 ರಂದು ತಡರಾತ್ರಿ ಭಾಗವಾಧ್ವಜ ಹಾರಿಸಿ ಗ್ರಾಮದಲ್ಲಿ ಅಶಾಂತಿ ವಾತಾವರಣ ಉಂಟು ಮಾಡಿದ್ದರು.

ವಿಷಯ ತಿಳಿದು ಗ್ರಾಮಕ್ಕೆ ಭೇಟಿ ನೀಡಿದ ಡಿವೈಎಸ್ಪಿ ನ್ಯಾಮೇಗೌಡ , ಬಸವಕಲ್ಯಾಣ ಗ್ರಾಮೀಣ ಪೋಲಿಸ್ ಠಾಣೆ ಪಿಎಸ್ಐ ವಸೀಮ್ ಪಟೇಲ್ ನೇತೃತ್ವದ ಪೊಲೀಸ್ ತಂಡ ಗ್ರಾಮಸ್ಥರೊಂದಿಗೆ ಶಾಂತಿ ಸಭೆ ನಡೆಸಿ ಮಸೀದಿ ಮೇಲೆ ಹಾರಿಸಿದ ಭಾಗವಾಧ್ವಜ ತೆರವುಗೊಳಿಸಿ ಕಿಡಿಗೇಡಿಗಳನ್ನು ಬಂಧಿಸಲಾಗುವುದು ಎಂದು ತಿಳಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೀದರ್‌ | ಪಡಿತರದಲ್ಲಿ ಅಕ್ರಮ; 22 ನ್ಯಾಯಬೆಲೆ ಅಂಗಡಿಗಳ ಅಮಾನತು

ಈ ಕುರಿತು ಬಸವಕಲ್ಯಾಣ ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಎಸ್.ಪಿ. ಚನ್ನಬಸವಣ್ಣ ಎಸ್.ಎಲ್., ಡಿವೈಎಸ್ ಪಿ ನ್ಯಾಮೇಗೌಡ, ಸಿಪಿಐ ಅಲಿಸಾಬ್‌ ಅವರ ಮಾರ್ಗದರ್ಶನದಲ್ಲಿ ಗ್ರಾಮೀಣ ಪೋಲಿಸ್ ಠಾಣೆ ಪಿಎಸ್ಐ ವಸೀಮ್ ಪಟೇಲ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಮಸೀದಿ ಮೇಲೆ ಭಾಗವಾಧ್ವಜ ಹಾರಿಸಿದ ಅದೇ ಗ್ರಾಮದ ನಿವಾಸಿಗಳಾದ ಅಭಿಷೇಕ, ಕಲ್ಯಾಣಿ, ಸುಶೀಲ್ ಹಾಗೂ ವೀರೇಶ ಬಿರಾದಾರ ಎಂಬ ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...