ಬೀದರ್‌ | ಹಣೆಗೆ ಪಿಸ್ತೂಲ್ ಇಟ್ಟು 3.50 ಕೋಟಿ ಸುಲಿಗೆ : ಜಿ.ಪಂ. ಮಾಜಿ ಸದಸ್ಯ ಸೇರಿ ಮೂವರ ಬಂಧನ

Date:

ಗಾಳಿಯಲ್ಲಿ ಗುಂಡು ಹಾರಿಸಿ ಉದ್ಯಮಿಯೊಬ್ಬರಿಂದ 3.50 ಕೋಟಿ ರೂಪಾಯಿ ದರೋಡೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಪಕ್ಕದ ಹಣಮಂತವಾಡಿ ಗ್ರಾಮದ ಬಳಿ ನಡೆದಿದೆ.

ಆಂಧ್ರಪ್ರದೇಶ ಮೂಲದ ಉದ್ಯಮಿ ಉಮಾಶಂಕರ್ ಎಂಬುವರು ತಮ್ಮ ಇಬ್ಬರು ಸ್ನೇಹಿತರೊಂದಿಗೆ 3.50 ಕೋಟಿ ರೂ. ನಗದು ಇಟ್ಟುಕೊಂಡು ನ.28 ರಂದು ರಾತ್ರಿ 8.50 ಸುಮಾರಿಗೆ ಬಸವಕಲ್ಯಾಣದ ರಾಷ್ಟ್ರೀಯ ಹೆದ್ದಾರಿ ಮಾರ್ಗದ ಮೂಲಕ ಮಹಾರಾಷ್ಟ್ರದ ಫಂಡರಪುರಕ್ಕೆ ಹೋಗುತ್ತಿದ್ದರು. ಹಾಲು ಖರೀದಿಸಿದ ರೈತರಿಗೆ ಹಣ ನೀಡಲು ಹೋಗುತ್ತಿದ್ದರು. ಈ ವೇಳೆ ನಾಲ್ವರು ದ್ವಿಚಕ್ರ ವಾಹನಗಳಲ್ಲಿ ಬಂದು, ಕಾರು ಅಡ್ಡಗಟ್ಟಿ ತಮ್ಮನ್ನು ಗುಂಡುರೆಡ್ಡಿ, ವಿಜಯರೆಡ್ಡಿ ಎಂದು ಹೇಳಿಕೊಂಡು ಗುಂಡುರೆಡ್ಡಿ ಎಂಬುವರು ಪಿಸ್ತೂಲ್ ತೆಗೆದು ಗಾಳಿಯಲ್ಲಿ ಎರಡು ಗುಂಡುಗಳನ್ನು ಹಾರಿಸಿದ್ದಾರೆ.

ಬಳಿಕ ಉದ್ಯಮಿ ಉಮಾಶಂಕರ ಅವರ ಹಣೆಗೆ ಪಿಸ್ತೂಲ್ ಇಟ್ಟು ಅವರ ಬಳಿಯಿದ್ದ 3.50 ಕೋಟಿ ಹಣವನ್ನು ದೋಚಿದ್ದಾರೆ. ಈ ಬಗ್ಗೆ ಬುಧವಾರ ಬೆಳಗ್ಗೆ ಉಮಾಶಂಕರ ಅವರು ಬಸವಕಲ್ಯಾಣ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಸುಲಿಗೆ, ಕೊಲೆಯತ್ನ, ಶಸ್ತ್ರಾಸ್ತ್ರ ಕಾಯ್ದೆ ಅಡಿ ಪ್ರಕರಣ ದಾಖಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹುಮನಾಬಾದ್‌ ಡಿವೈಎಸ್ಪಿ ಜೆ.ಎಸ್.ನ್ಯಾಮೆಗೌಡರ್‌, ಮಂಠಾಳ ಸಿಪಿಐ ಕೃಷ್ಣಕುಮಾರ ಪಾಟೀಲ್‌, ಬಸವಕಲ್ಯಾಣ ಪಿಎಸ್‌ಐ ವಾಸೀಂ ಪಟೇಲ್‌ ನೇತ್ರತ್ವದಲ್ಲಿ ತಂಡ ರಚಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ಈಗಲಾದರೂ ಚರ್ಚೆಗೆ ಬರುತ್ತದೆಯೇ ಪ್ರಾದೇಶಿಕ ಅಸಮಾನತೆ ಕೂಗು

ಪ್ರಕರಣ ಭೇದಿಸಿದ ತಂಡ 24 ಗಂಟೆಗಳಲ್ಲಿ ಆರೋಪಿಗಳಾದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ, ಕಾಂಗ್ರೆಸ್ ಮುಖಂಡ ಗುಂಡುರೆಡ್ಡಿ, ವಿಜಯ್ ರೆಡ್ಡಿ ಮತ್ತು ಸಂಜಯ ರೆಡ್ಡಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪರಾರಿಯಾಗಿರುವ ಒಬ್ಬನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಆರೋಪಿಗಳಿಂದ 2.62 ಕೋಟಿ ರೂ. ಹಾಗೂ ಕೃತ್ಯಕ್ಕೆ ಬಳಸಿದ ಪಿಸ್ತೂಲ್ ಜಪ್ತಿ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ‌ ಎಸ್.ಎಲ್. ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...