ಲೋಕಸಭಾ ಚುನಾವಣೆ ಹೊತ್ತಿಗೆ ಬಿಜೆಪಿಯಲ್ಲಿ ದೊಡ್ಡ ಬದಲಾವಣೆ: ಎಂ ಬಿ ಪಾಟೀಲ

Date:

  • ವಿ.ಸೋಮಣ್ಣರನ್ನು ಎರಡು ಕಡೆ ನಿಲ್ಲಿಸಿ ಬಲಿಪಶು ಮಾಡಿದರು: ಪಾಟೀಲ
  • ಬಿಜೆಪಿಯಲ್ಲಿನ ಅಸಮಾಧಾನಿತ ನಾಯಕರು ನಮ್ಮ ಸಂಪರ್ಕದಲ್ಲಿದ್ದಾರೆ

ಲೋಕಸಭಾ ಚುನಾವಣೆ ಹೊತ್ತಿಗೆ ಅಥವಾ ನಂತರ ಬಿಜೆಪಿಯೊಳಗೆ ದೇಶ ಮತ್ತು ರಾಜ್ಯದಲ್ಲಿ ಬಹಳಷ್ಟು ಬದಲಾವಣೆ ಆಗುತ್ತವೆ. ಸೋಮಣ್ಣ, ಸಿ ಟಿ ರವಿ, ಯತ್ನಾಳ್ ಸೇರಿ ಹಲವರು ಅಸಮಾಧಾನಗೊಂಡಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಎರಡು ಕಡೆ ವಿ.ಸೋಮಣ್ಣರನ್ನು ನಿಲ್ಲಿಸಿ ಬಲಿಪಶು ಮಾಡಿದರು ಎಂದು ಬೃಹತ್‌, ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದರು.

ವಿಜಯಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ ವೈ ವಿಜಯೇಂದ್ರ ನೇಮಕ ಬಳಿಕ ಬಿಜೆಪಿಯಲ್ಲಿ ಅಸಮಾಧಾನ ಹೊಗೆಯಾಡುತ್ತಿದೆ” ಎಂದರು.

“ಬಿಜೆಪಿಯಲ್ಲಿ ಅಸಮಾಧಾನ ಹೊಂದಿದ ಸಾಕಷ್ಟು ನಾಯಕರು ಸಿಎಂ, ಡಿಸಿಎಂ, ಸತೀಶ್ ಹಾಗೂ ನನ್ನನ್ನು ಸಂಪರ್ಕಿಸಿದ್ದಾರೆ. ಕಾದು ನೋಡಿ, ಬದಲಾವಣೆಗಳು ಖಚಿತ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಿ ಕೆ ಶಿವಕುಮಾರ್​ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್​ ವಿಚಾರವಾಗಿ ಪ್ರತಿಕ್ರಿಯಿಸಿ, “ಕಾನೂನಿನ ಪ್ರಕಾರವೇ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಅಡ್ವೊಕೇಟ್​ ಜನರಲ್ ಸಲಹೆ ಪಡೆದು ಅನುಮತಿ ಹಿಂಪಡೆಯಲಾಗಿದೆ. ಹಿಂದಿನ ಬಿಜೆಪಿ ಸಂಪುಟದಲ್ಲಿ ಈ ಬಗ್ಗೆ ಮೊದಲು ಅನುಮೋದನೆ ಪಡೆದಿತ್ತು. ಸಂಪುಟ ಒಪ್ಪಿಗೆ ಬಳಿಕ ಎಜಿ ಅಭಿಪ್ರಾಯ ಪಡೆದಿತ್ತು ಎಂಬ ಆರೋಪವಿದೆ. ಡಿ.ಕೆ ಶಿವಕುಮಾರ್​​ ವಿರುದ್ಧ ಷಡ್ಯಂತ್ರ ಹಣೆಯಲಾಗಿದೆ ಎಂಬ ಶಂಕೆ ಕೂಡ ಇದೆ. ಹೀಗಾಗಿ ಸಂಪುಟದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆಯಲಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದುಡಿವ ಜನರ ಮಹಾಧರಣಿ: ಶುರುವಾಗಲಿ ಜನಪರ್ಯಾಯ

ಲಿಂಗಾಯತ, ಒಕ್ಕಲಿಗರಿಂದ ಜಾತಿ ಗಣತಿ ವರದಿ ಮಂಡನೆಗೆ ವಿರೋಧ ವಿಚಾರವಾಗಿ ಪ್ರತಿಕ್ರಿಯಿಸಿ, “ಈ ಬಗ್ಗೆ ಸಿಎಂ ಜೊತೆ ಚರ್ಚಿಸಿದ ಬಳಿಕ ನನ್ನ ಅಧಿಕೃತ ನಿಲುವು ಸ್ಪಷ್ಟಪಡಿಸುತ್ತೇನೆ. ಇನ್ನುಳಿದಂತೆ ಜಾತಿ ಗಣತಿ ವರದಿ ಮಂಡನೆಯಿಂದ ಜಾತಿ‌ಗಳ ನಡುವೆ ಸಂಘರ್ಷ ವಿಚಾರ. ಅದು ಏನೇ ಇದ್ದರೂ ಪಕ್ಷ ಹಾಗೂ ಸರ್ಕಾರದ ಚೌಕಟ್ಟಿನಲ್ಲಿ ಮಾತನಾಡುತ್ತೇವೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...