ಪುನೀತ್ ಕೆರೆಹಳ್ಳಿ ಎಂಬ ಮತಾಂಧನಿಗೆ ಬಿಜೆಪಿಯಿಂದ ಕೋಮು ಗಲಭೆ ಸೃಷ್ಟಿಗೆ ಫತ್ವಾ ಬಂದಿದೆ: ಬಿ ಕೆ ಹರಿಪ್ರಸಾದ್‌ ಆರೋಪ

Date:

ರೌಡಿ ಶೀಟರ್ ಪುನೀತ್ ಕೆರೆಹಳ್ಳಿ ಎಂಬ ಮತಾಂಧನಿಗೆ ಬಿಜೆಪಿಯಿಂದ ಕೋಮು ಗಲಭೆ ನಡೆಸುವ ಫತ್ವಾ ಬಂದಿದೆ ಎಂದು ಸ್ವತಃ ತಾನೇ ಸೃಷ್ಟಿಸಿರುವ “ರಾಷ್ಟ್ರ ರಕ್ಷಣಾ ಪಡೆ” ಎಂಬ ವಾಟ್ಸಪ್ ಗ್ರೂಪಿನಲ್ಲಿ ಹೇಳಿಕೊಂಡಿದ್ದಾನೆ. ರಾಜ್ಯದ ಆಂತರಿಕ ಭದ್ರತೆಗೆ ಧಕ್ಕೆ ಉಂಟು ಮಾಡುತ್ತಿರುವವರ ಮೇಲೆ ರಾಷ್ಟ್ರದ್ರೋಹದ ಅಡಿಯಲ್ಲಿ ಕೇಸ್ ದಾಖಲಿಸಿ ತನಿಖೆ ನಡೆಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಆಗ್ರಹಿಸಿದ್ದಾರೆ.

ಈ ಕುರಿತು ಅವರು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿದ್ದು, “ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಕೋಮು ಗಲಭೆ ಸೃಷ್ಟಿಸಿ, ಧರ್ಮ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸಕ್ಕೆ ಬಿಜೆಪಿ ಪಕ್ಷ ತನ್ನ ಸಹೋದರ ಸಂಘಟನೆಗಳನ್ನು ಅಣಿಗೊಳಿಸುತ್ತಿರುವುದು ಬಹಿರಂಗವಾಗುತ್ತಿದೆ” ಎಂದಿದ್ದಾರೆ.

“ಕೋಮು ಗಲಭೆ ನಡೆಸಿ 2024ಕ್ಕೆ ‘ವಿಶ್ವಗುರು’ವನ್ನ ಮತ್ತೆ ಪ್ರಧಾನಿಯಾಗಬೇಕೆಂದು ಈ ಭಯೋತ್ಪಾದಕರ ತಂಡ ಕೆಲಸ ಮಾಡಲಿದೆಯಂತೆ. ರಾಜ್ಯದಲ್ಲಿ ಎಲ್ಲಿ? ಯಾವಾಗ? ಹೇಗಾದರೂ ಭಯೋತ್ಪಾದಕ ಕೃತ್ಯಗಳನ್ನ ನಡೆಸಲು ಸಂಚು ನಡೆಯುತ್ತಿರುವುದು ಸ್ಪಷ್ಟವಾಗುತ್ತಿದೆ. ಇಂತಹ ಸಮಾಜಘಾತಕರಿಗೆ ಇಡಿ ಬಿಜೆಪಿಯೇ ಬೆಂಬಲಕ್ಕೆ ನಿಂತಿರುವುದು ಜಗಜ್ಜಾಹೀರು. ಕೂಡಲೇ ಸರ್ಕಾರ ಇಂತಹ ಭಯೋತ್ಪಾದಕ ಶಕ್ತಿಗಳನ್ನ ಮಟ್ಟ ಹಾಕಬೇಕು” ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಲಾ ಸಿಬ್ಬಂದಿಗೆ ‘ನಡತೆ ಸರ್ಟಿಫಿಕೇಟ್‌ʼ ಮಕ್ಕಳೇ ಕೊಡುವಂತಾಗಬೇಕು

ಶ್ರೀರಾಮುಲು ಅವರೇ, ಮೊದಲು ನೀವು ಗಡಿಪಾರಿನಿಂದ ಪಾರಾಗಿ

ಶ್ರೀರಾಮುಲು ಅವರೇ, ನನ್ನನ್ನು ಗಡಿಪಾರು ಮಾಡಲು ಒತ್ತಾಯಿಸುವ ಬದಲು, ನೀವೇ ಗಡಿಪಾರಿನಿಂದ ಪಾರಾಗಿ ಮೊದಲು ಎಂದು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ತಿರುಗೇಟು ನೀಡಿದ್ದಾರೆ.

“ಚುನಾವಣೆಯಲ್ಲಿ ನೀವೇ ಘೋಷಿಸಿರುವಂತೆ ಗಂಭೀರ ಕ್ರಿಮಿನಲ್ ಪ್ರಕರಣಗಳನ್ನ ಎದುರಿಸುತ್ತಿದ್ದೀರಿ. ರಾಜ್ಯದ ಬೊಕ್ಕಸಕ್ಕೆ ದ್ರೋಹ ಮಾಡಿದ್ದೀರಿ. ಕಳ್ಳತನದಿಂದ ಗಣಿಗಾರಿಕೆ ನಡೆಸಿ, ಸರ್ಕಾರಕ್ಕೆ ತೆರಿಗೆ ನೀಡದೆ ವಂಚನೆ ಮಾಡಿರುವುದು ರಾಜದ್ರೋಹ ಅಲ್ಲವೇ” ಎಂದು ಪ್ರಶ್ನಿಸಿದ್ದಾರೆ.

“ಕೊಲೆ, ದೊಂಬಿ ಪ್ರಕರಣ ನಡೆಸಿದ ಕಾರಣಕ್ಕೆ ಗುಜರಾತಿಗೆ ಕಾಲಿಡಬಾರದು ಎಂದು ನಿಮ್ಮ ಕೇಂದ್ರ ಗೃಹ ಸಚಿವರಿಗೆ ನ್ಯಾಯಾಲಯ ಛೀಮಾರಿ ಹಾಕಿದ್ದು ನೆನಪಿದ್ಯಾ? ಇಂತಹ ಸರದಿಯ ಸಾಲಲ್ಲಿ ನಿಂತಿರುವ ನಿಮ್ಮ ಬಗ್ಗೆ ಕನಿಕರವಿದೆ!” ಎಂದು ಲೇವಡಿ ಮಾಡಿದ್ದಾರೆ.

“ಸಾರ್ವಜನಿಕ ಜೀವನದಲ್ಲಿ ಆಡುವ ಭಾಷೆ, ನಾಲಿಗೆ ಹಿಡಿತದಲ್ಲಿರಬೇಕು, ಬಿಜೆಪಿಯ ನಾಯಕರು ಎಚ್ಚರಿಕೆಯಿಂದ ಮಾತಾಡಿದರೆ ಒಳಿತು” ಎಂದು ಕಿವಿಮಾತು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...