ಇಂದಿನಿಂದ ಬೈಕ್ ಟ್ಯಾಕ್ಸಿಗಳ ಸೇವೆ ಸ್ಥಗಿತ, ರಾಹುಲ್​ ಗಾಂಧಿ, ಸಿದ್ದರಾಮಯ್ಯಗೆ ಅಸೋಸಿಯೇಷನ್ ಪತ್ರ

Date:

ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರದಿಂದ ಬೈಕ್ ಟ್ಯಾಕ್ಸಿಗಳ ಮೇಲಿನ ನಿಷೇಧ ಜಾರಿಗೆ ಬಂದಿದ್ದು, ಕರ್ನಾಟಕ ಹೈಕೋರ್ಟ್ ನಿರ್ದೇಶನದಂತೆ ಇಂದಿನಿಂದ ಬೈಕ್ ಟ್ಯಾಕ್ಸಿಗಳ ಸೇವೆ ಸ್ಥಗಿತಗೊಳ್ಳಲಿದೆ.

​​ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಬೈಕ್ ಟ್ಯಾಕ್ಸಿ ಅಸೋಸಿಯೇಷನ್ ಪತ್ರ ಬರೆದು, ನಿಷೇಧದಿಂದ ಗಿಗ್ ಕಾರ್ಮಿಕರಿಗೆ ಸಮಸ್ಯೆಯಾಗಿಲಿದ್ದು, ಅವರ ಜೀವನೋಪಾಯ ರಕ್ಷಿಸಲು ಮಧ್ಯಪ್ರವೇಶಿಸುವಂತೆ ಒತ್ತಾಯಿಸಿದೆ.

ನಿಷೇಧದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಒಂದು ಲಕ್ಷಕ್ಕೂ ಹೆಚ್ಚು ಗಿಗ್ ಕಾರ್ಮಿಕರು ಸಂಪೂರ್ಣ ಜೀವನೋಪಾಯದ ಹಕ್ಕನ್ನು ಕಳೆದುಕೊಳ್ಳುತ್ತಾರೆ ಎಂದು ಸಂಘ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬೈಕ್​ ಟ್ಯಾಕ್ಸಿಗಳ ವಿರುದ್ಧ ಆಟೋ ಮತ್ತು ಕ್ಯಾಬ್​ ಚಾಲಕರು ಆಕ್ರೋಶ ಹೊರಹಾಕಿದ್ದರು. ಬೈಕ್​ ಟ್ಯಾಕ್ಸಿ ಸವಾರರ ಮೇಲೆ ಹಲ್ಲೆ ಸಹ ನಡೆದಿತ್ತು. ಆಟೋಗಳ ವ್ಯಾಪಾರ ಡಲ್ ಆಗಿತ್ತು. 2021ರಲ್ಲಿ ಆರಂಭವಾಗಿದ್ದ ಬೈಕ್​ ಟ್ಯಾಕ್ಸಿಗೆ ಇದೀಗ ಹೈಕೋರ್ಟ್​ ಬ್ರೇಕ್​ ಹಾಕಿದೆ. ಕಡಿಮೆ ದರದಲ್ಲಿ ಜನರನ್ನು ಸ್ಥಳ ತಲುಪಿಸುತ್ತಿದ್ದ ಬೈಕ್​ ಸವಾರರ ಮೇಲೆ ಕೆಲ ಆರೋಪಗಳು ಕೂಡ ಕೇಳಿ ಬಂದಿದ್ದವು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿಮಾನಯಾನದ ವಿಶ್ವಾಸ ಕುಂದುತ್ತಿದೆ – ಗಂಭೀರ ಚಿಂತನೆ, ಕ್ರಮಗಳ ಅಗತ್ಯವಿದೆ!

ಏಪ್ರಿಲ್ 2 ರಂದು ನ್ಯಾಯಾಲಯ ಎಲ್ಲ ಬೈಕ್ ಟ್ಯಾಕ್ಸಿ ಸೇವೆಗಳನ್ನ 6 ವಾರಗಳ ಒಳಗೆ ನಿಲ್ಲಿಸುವಂತೆ ಹೈಕೋರ್ಟ್​​ ಆದೇಶಿಸಿತ್ತು. ನ್ಯಾಯಾಲಯ ನೀಡಿದ್ದ 6 ವಾರಗಳ ಗಡುವು ಮೇ ತಿಂಗಳಲ್ಲಿ ಮುಕ್ತಾಯಗೊಳ್ಳಬೇಕಿತ್ತು. ರಾಪಿಡೋ, ಓಲಾ ಮತ್ತು ಉಬರ್ ಸೇರಿದಂತೆ ಬೈಕ್ ಟ್ಯಾಕ್ಸಿ ನಿರ್ವಾಹಕರು ಆದೇಶ ವಿಸ್ತರಣೆ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದರು.

ಕೊಟ್ಟ ಗಡುವು ಕೂಡ ಜೂನ್​ 15ಕ್ಕೆ ಮುಗಿದಿದೆ. ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ಕೂಡ ನಿರಾಕರಿಸಲಾಗಿದೆ. ಬೈಕ್ ಟ್ಯಾಕ್ಸಿಗಳಿಗೆ ಹೊಸ ನಿಯಮಗಳನ್ನು ರೂಪಿಸದ ಕಾರಣ ಮತ್ತೆ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ಕೋರ್ಟ್​ ಹೇಳಿದೆ. ಮುಂದಿನ ವಿಚಾರಣೆ ಜೂನ್ 24ಕ್ಕೆ ನಿಗದಿಪಡಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...