ಬಿಕ್ಲು ಶಿವ ಕೊಲೆ ಪ್ರಕರಣ: ಬಿಜೆಪಿ ಶಾಸಕ ಬೈರತಿ ಬಸವರಾಜ್‌ ಫೆ.26ವರೆಗೆ ನ್ಯಾಯಾಂಗ ಬಂಧನ

Date:

ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಬಿಜೆಪಿ ಶಾಸಕ ಬೈರತಿ ಬಸವರಾಜ್​​ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಆದೇಶ ಹೊರಡಿಸಿದೆ.

9 ದಿನಗಳ ಸಿಐಡಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆ ಬೈರತಿ ಅವರನ್ನು ಇಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮುಂದೆ ಹಾಜರು ಪಡಿಸಲಾಗಿತ್ತು. ಕೋರ್ಟ್ ಅವರನ್ನು ಫೆ.26ರವರೆಗೂ 5 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.

ಮುಖಕ್ಕೆ ಮಾಸ್ಕ್​ ಧರಿಸಿ ಜಡ್ಜ್ ಮುಂದೆ ಆರೋಪಿ ಬೈರತಿ ಬಸವರಾಜು ಹಾಜರಾದರು. ವಿಚಾರಣೆ ಆರಂಭವಾಗುತ್ತಿದ್ದಂತೆಯೇ ಮತ್ತೆ ಸಿಐಡಿ ಕಸ್ಟಡಿಗೆ ಅಧಿಕಾರಿಗಳು ಮನವಿ ಮಾಡಿದರು. ಇನ್ನೂ ತನಿಖೆಗೆ ಸಂಪೂರ್ಣ ಸಹಕಾರ ನೀಡಿಲ್ಲ. ಇನ್ನಷ್ಟು ತನಿಖೆ ಅಗತ್ಯ ಇದೆ ಎಂದು ವಕೀಲರು ವಾದ ಮಂಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ ಆರೋಪಿ ಪರ ವಕೀಲರು ಕೂಡ ಪ್ರತಿವಾದ ಮಾಡಿ, ಈಗಾಗಲೇ 9 ದಿನಗಳು ಕಸ್ಟಡಿಗೆ ನೀಡಲಾಗಿದೆ. ವೈದ್ಯಕೀಯ ವರದಿ ಆಧರಿಸಿ ಕಸ್ಟಡಿಗೆ ನೀಡಬಾರದು ಎಂದು ವಾದ ಮಂಡಿಸಿದರು.

ಅಂದಹಾಗೆ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬೈರತಿ ಬಸವರಾಜ್ ಐದನೇ ಆರೋಪಿಯಾಗಿದ್ದು, ವೈದ್ಯಕೀಯ ವರದಿ ಆಧರಿಸಿ ಜೈಲಿಗೆ ಕಳುಹಿಸುವಂತೆ ಬೈರತಿ ಪರ ವಕೀಲರು ಮನವಿ ಮಾಡಿದ್ದರು. ಸದ್ಯ ಫೆ.26ರವರೆಗೆ ಬೈರತಿ ಬಸವರಾಜ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಜಯದೇವ ಆಸ್ಪತ್ರೆಯಲ್ಲಿ ನೀಡಿರುವ ಡಯೆಟ್ ಪ್ಲಾನ್ ಅನ್ನು ಜೈಲಿನಲ್ಲಿ ಮುಂದುವರೆಸಲು ಕೋರ್ಟ್ ಸೂಚನೆ ನೀಡಿದೆ. ಜೈಲಿನಲ್ಲಿ ಕೂಡ ಡಯೆಟ್ ಪ್ಲಾನ್ ಪ್ರಕಾರವೇ ಊಟ ನೀಡಲು ನ್ಯಾಯಾಲಯ ಸೂಚಿಸಿದೆ.

ಫೆ.26 ರವರೆಗೂ ನ್ಯಾಯಾಂಗ ಬಂಧನದಲ್ಲೇ ಇರಬೇಕಿದೆ. ಫೆಬ್ರವರಿ 26 ರಂದು ಮತ್ತೆ ಜಡ್ಜ್ ಮುಂದೆ ಹಾಜರು ಪಡಿಸಬೇಕು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...