ಸಿಎಂ, ಡಿಸಿಎಂ ಭೇಟಿಯಾದ ಬಯೋಕಾನ್ ಮುಖ್ಯಸ್ಥೆ ಕಿರಣ್ ಮಜುಂದಾರ್ ಶಾ

Date:

ಬಯೋಕಾನ್ ಸಂಸ್ಥಾಪಕಿ ಹಾಗೂ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ ಅವರು ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಪ್ರತ್ಯೇಕವಾಗಿ ಭೇಟಿಯಾಗಿ ಮಾತುಕತೆ ನಡೆಸಿದರು. ಬೆಂಗಳೂರು ನಗರದ ಕಸ ಸಮಸ್ಯೆಗಳ ಕುರಿತು ಇತ್ತೀಚೆಗೆ ಸರ್ಕಾರವನ್ನು ಟೀಕಿಸಿದ್ದು ವಿವಾದಕ್ಕೆ ಕಾರಣವಾಗಿತ್ತು. ಆದರೆ ಈ ಭೇಟಿಯು ಸಕಾರಾತ್ಮಕ ದಿಕ್ಕಿನಲ್ಲಿ ನಡೆದಿದೆ ಎಂದು ಹೇಳಲಾಗಿದೆ.

ಮೊದಲಿಗೆ ಅವರು ಬೆಂಗಳೂರಿನ ಕಾವೇರಿ ನಿವಾಸಕ್ಕೆ ಆಗಮಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ತಿಳಿಸಿದರು. ಈ ವೇಳೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಉಪಸ್ಥಿತರಿದ್ದರು. ಮುಖ್ಯಮಂತ್ರಿ ಹಾಗೂ ಕಿರಣ್ ಮಜುಂದಾರ್ ಶಾ ನಡುವಿನ ಸಂಭಾಷಣೆಯಲ್ಲಿ ರಾಜ್ಯದ ಉದ್ಯಮ ವಾತಾವರಣ, ನಾವೀನ್ಯತೆ, ಹಾಗೂ ಆರೋಗ್ಯ ಕ್ಷೇತ್ರದ ಬೆಳವಣಿಗೆ ಕುರಿತ ಚರ್ಚೆ ನಡೆದಿರುವುದಾಗಿ ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿಯವರನ್ನು ಭೇಟಿಯಾದ ಬಳಿಕ, ಕಿರಣ್ ಮಜುಂದಾರ್ ಶಾ ಅವರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸದಾಶಿವನಗರ ನಿವಾಸಕ್ಕೆ ತೆರಳಿ ಅವರನ್ನು ಕೂಡ ಭೇಟಿಯಾದರು. ದೀಪಾವಳಿ ಹಬ್ಬದ ಶುಭಾಶಯ ತಿಳಿಸಿದ ನಂತರ ಇಬ್ಬರೂ ಸುಮಾರು 40 ನಿಮಿಷಗಳ ಕಾಲ ಮಾತುಕತೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಸಂಘಪರಿವಾರದ ಹುನ್ನಾರಗಳನ್ನು ಅರಿತ ದಲಿತರು

ಭೇಟಿ ನಂತರ ಕಿರಣ್ ಮಜುಂದಾರ್ ಶಾ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಆದರೆ, ಡಿಕೆ ಶಿವಕುಮಾರ್ ಅವರು ತಮ್ಮ ಅಧಿಕೃತ ಎಕ್ಸ್‌ (X) ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದು,”ಇಂದು ನನ್ನ ನಿವಾಸದಲ್ಲಿ ಬಯೋಕಾನ್ ಸಂಸ್ಥಾಪಕಿ ಹಾಗೂ ಪ್ರಖ್ಯಾತ ಉದ್ಯಮಿ ಕಿರಣ್ ಮಜುಂದಾರ್ ಶಾ ಅವರನ್ನು ಭೇಟಿಯಾದೆ. ಬೆಂಗಳೂರಿನ ಬೆಳವಣಿಗೆ, ನಾವೀನ್ಯತೆ ಹಾಗೂ ಕರ್ನಾಟಕದ ಪ್ರಗತಿ ಕುರಿತಂತೆ ಸಾರ್ಥಕ ಚರ್ಚೆ ನಡೆಯಿತು” ಎಂದು ತಿಳಿಸಿದ್ದಾರೆ.

ಇತ್ತೀಚೆಗೆ ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆ ಹಾಗೂ ಮೂಲಸೌಕರ್ಯ ಕುರಿತು ಸರ್ಕಾರದ ವಿರುದ್ಧ ಟೀಕಿಸಿದ್ದ ಕಿರಣ್ ಮಜುಂದಾರ್ ಶಾ, ಈ ಭೇಟಿಯ ವೇಳೆ ನಗರದ ಅಭಿವೃದ್ಧಿ, ಮೂಲಸೌಕರ್ಯ ಸುಧಾರಣೆ ಮತ್ತು ಉದ್ಯಮಗಳಿಗೆ ಅಗತ್ಯವಾದ ಬೆಂಬಲ ಕುರಿತಂತೆ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...