ಬಿಜೆಪಿ ಕಾರ್ಯಕರ್ತ ಶಿವಕುಮಾರ ಪೂಜಾರಿ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ: ಗೃಹ ಸಚಿವ ಪರಮೇಶ್ವರ್

Date:

ಕಲಬುರಗಿ ಜಿಲ್ಲೆಯ ಬಿಜೆಪಿ ಕಾರ್ಯಕರ್ತ ಶಿವಕುಮಾರ ಪೂಜಾರಿ ಆತ್ಮಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ತಿಳಿಸಿದರು.

ತುಮಕೂರಿನಲ್ಲಿ ಶುಕ್ರವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಶಿವಕುಮಾರ ಪೂಜಾರಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಪಾತ್ರ ಇದೆ ಎಂದು ಕೆಲವರು ಆರೋಪ ಮಾಡುತ್ತಿದ್ದಾರೆ. ಅದನ್ನು ಪರಿಶೀಲಿಸಿ, ಖಚಿತ ಪಡಿಸಿಕೊಳ್ಳಬೇಕಿದೆ. ಆರೋಪ ಮಾಡುತ್ತಿರುವವರ ಹೇಳಿಕೆ ಪಡೆದುಕೊಂಡು ಪರಿಶೀಲಿಸಬೇಕಿದೆ. ಅದಕ್ಕಾಗಿ ಸಿಐಡಿ ತನಿಖೆ ನಡೆಸಲಾಗುತ್ತಿದೆ” ಎಂದು ಹೇಳಿದರು.

“ತನಿಖಾ ವರದಿ ಬಂದ ನಂತರ ಸತ್ಯಾಂಶ ಹೊರ ಬರಲಿದೆ. ಇದರಲ್ಲಿ ಯಾರು ಭಾಗಿಯಾಗಿದ್ದಾರೆ, ಯಾರೆಲ್ಲ ಕೈವಾಡ ಇದೆ ಎಂಬುದು ಗೊತ್ತಾಗಲಿದೆ. ಎಲ್ಲ ಆಯಾಮದಲ್ಲೂ ತನಿಖೆ ನಡೆಸಲಾಗುತ್ತದೆ. ವರದಿ ಬಂದ ನಂತರ ಸತ್ಯಾಂಶ ಗೊತ್ತಾಗಲಿದೆ. ವರದಿ ಆಧಾರದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಪ್ರತಿಪಕ್ಷಗಳ ಆರೋಪಗಳಿಗೆ ಉತ್ತರ ಕೊಡಲು ಆಗುವುದಿಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...