ಬಿಜೆಪಿ ತನ್ನ ತಪ್ಪು ಮರೆಮಾಚಲು ಸುಳ್ಳು ಪ್ರಕರಣಗಳಲ್ಲಿ ಕಾಂಗ್ರೆಸ್ ನಾಯಕರನ್ನು ಸಿಲುಕಿಸುತ್ತಿದೆ: ಸಿದ್ದರಾಮಯ್ಯ

Date:

ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ ಕುತಂತ್ರಕ್ಕೆ ಉತ್ತರವಾಗಿ ನ್ಯಾಯಾಲಯದಲ್ಲಿ ನ್ಯಾಯ ದೊರೆತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವುದನ್ನು ಖಂಡಿಸಿ, ಈ ಪ್ರಕರಣದಲ್ಲಿ ED ಸಲ್ಲಿಸಿದ ಆರೋಪ ಪಟ್ಟಿಯನ್ನು ಸಾರಾಸಗಟಾಗಿ ತಿರಸ್ಕರಿಸಿದ ವಿಚಾರಣಾ ನ್ಯಾಯಾಲಯದ (ಟ್ರಯಲ್ ಕೋರ್ಟ್) ತೀರ್ಮಾನವನ್ನು ಬೆಂಬಲಿಸಿ ಎಂಎಲ್ ಎ ಹಾಗೂ ಎಂಎಲ್ ಸಿ ಗಳೊಂದಿಗೆ ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಬಿಜೆಪಿಯವರ ದ್ವೇಷದ ರಾಜಕಾರಣ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿಯವರ ದ್ವೇಷದ ರಾಜಕಾರಣ. ಕೇಂದ್ರ ಅಥವಾ ರಾಜ್ಯಗಳಾಗಲಿ, ಬಿಜೆಪಿ ಅಧಿಕಾರದಲ್ಲಿರುವ ಕಡೆಗಳೆಲ್ಲಾ ಕಾಂಗ್ರೆಸ್ ನವರನ್ನು ಗುರಿಯಾಗಿಸಿ, ಅವರನ್ನು ಅಪರಾಧಿಗಳಾಗಿ ಬಿಂಬಿಸಿ, ನ್ಯಾಯಾಲಯಕ್ಕೆ ಎಡತಾಕುವಂತೆ ಮಾಡುತ್ತಿದ್ದಾರೆ. ಇಂತಹ ಅಸತ್ಯವಾದ ವಿಚಾರವನ್ನು ಮುನ್ನಲೆಗೆ ತಂದು ಬಿಜೆಪಿಯು ದುರುದ್ದೇಶದಲ್ಲಿ ತೊಡಗಿದ್ದಾರೆ. ಬಿಜೆಪಿಯವರು ತಮ್ಮ ತಪ್ಪುಗಳನ್ನು ಮರೆಮಾಚಲು ಇಂತಹ ದುಷ್ಕೃತ್ಯಕ್ಕೆ ಕೈಹಾಕಿದ್ದಾರೆ. ಇಂದು ದೇಶದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ದೇಶದಲ್ಲಿ ಹಣದುಬ್ಬರ ಹೆಚ್ಚಿದ್ದು ನಿರುದ್ಯೋಗದ ಪ್ರಮಾಣ ಏರಿಕೆಯಾಗಿದೆ. ಜನರ ಮೇಲೆ ತೆರಿಗೆಗಳನ್ನು ಮನಬಂದಂತೆ ಹೇರಿ, ಭಾರತವನ್ನು ಸಾಲಗಾರ ದೇಶವನ್ನಾಗಿ ಮಾಡಲಾಗುತ್ತಿದೆ” ಆಕ್ರೋಶ ವ್ಯಕ್ತಪಡಿಸಿದರು.

ಸುಳ್ಳು ಪ್ರಕರಣಕ್ಕೆ ಮೊರೆ ಹೋಗುವ ಬಿಜೆಪಿ

“ಮನಮೋಹನ್ ಸಿಂಗ್ ಅವರು ದೇಶದ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ದೇಶದ ಸಾಲ ಸುಮಾರು 53.11 ಲಕ್ಷ ಕೋಟಿ ಆಗಿತ್ತು. ಆದರೆ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಸಾಲದ ಮೊತ್ತ ಸುಮಾರು 2 ಲಕ್ಷ ಕೋಟಿಯನ್ನೂ ಮೀರಿದೆ. ಪ್ರಧಾನಿ ಮೋದಿಯವರು ಅಧಿಕಾರಕ್ಕೆ ಬಂದು 11 ವರ್ಷಗಳಲ್ಲಿ ಈ ಸಾಲದ ಮೊತ್ತವು 148 ಲಕ್ಷ ಕೋಟಿ ಹೆಚ್ಚಾಗಿದೆ. ಬಿಜೆಪಿಯವರು ತಮ್ಮ ಈ ತಪ್ಪನ್ನು ಮರೆಮಾಚಲು ಇಂತಹ ಸುಳ್ಳು ಪ್ರಕರಣಗಳ ಮೊರೆಹೋಗುತ್ತಿದೆ” ಎಂದರು.

ಪ್ರತಿ ಖಾತೆಗೆ ಹಣ: ಪ್ರಧಾನಿ ಮೋದಿಯವರ ಸುಳ್ಳು ಭರವಸೆ

“ಮೋದಿಯವರು ಅಧಿಕಾರಕ್ಕೆ ಬಂದ ತಕ್ಷಣ, ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದ್ದು, ಪ್ರತಿವರ್ಷ 2 ಕೋಟಿ ಉದ್ಯೋಗವನ್ನು ಸೃಷ್ಟಿಸುವುದಾಗಿ ಘೋಷಿಸಿದ್ದರು. ವಿದೇಶದಲ್ಲಿನ ಕಪ್ಪುಹಣವನ್ನು ದೇಶಕ್ಕೆ ತಂದು ದೇಶದ ಪ್ರತಿಯೊಬ್ಬರ ಖಾತೆಗೂ 15 ಲಕ್ಷ ರೂ.ಗಳನ್ನು ನೀಡುವುದಾಗಿ ಹೇಳಿದರು. ಈ ಯಾವುದೇ ಭರವಸೆಗಳನ್ನು ಮೋದಿಯವರು ಈಡೇರಿಸಲಿಲ್ಲ. ಇತ್ತೀಚೆಗೆ ದೈನಂದಿನ ಬಳಕೆಯ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆಗಳು ಗಗನಕ್ಕೇರಿವೆ. ಬಿಜೆಪಿಯವರು ತಮ್ಮ ಇಂತಹ ತಪ್ಪುಗಳನ್ನು ಮರೆಮಾಚಲು , ಇಂತಹ ಸುಳ್ಳು ಪ್ರಕರಣಗಳಿಗೆ ಹೆಚ್ಚು ಒತ್ತು ನೀಡುವ ಮೂಲಕ, ದೇಶದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ” ಹರಿಹಾಯ್ದರು.

ಹೆಸರನ್ನು ಬದಲಾಯಿಸುವುದಷ್ಟೇ ಬಿಜೆಪಿ ಕಾಯಕ

“ಮಹಾತ್ಮಾಗಾಂಧಿ ಉದ್ಯೋಗ ಖಾತ್ರಿ ಯೋಜನೆ ಯನ್ನು ಬದಲಿಸಿ VB-G RaM Gಯೋಜನೆಯೆಂದು ಬದಲಿಸಿದ್ದಾರೆ. ರಾಜಭವನವನ್ನು ಇಂದು ಲೋಕಭವನ ಎಂದು ಬದಲಾಯಿಸಿದ್ದಾರೆ. ಇದು ಸರ್ಕಾರದ ಆಸ್ತಿಯಾಗಿದ್ದು, ಇದರ ಹೆಸರನ್ನು ಬದಲಾವಣೆ ಮಾಡಿದ್ದು ಸರಿಯಲ್ಲ. ಹೆಸರು ಬದಲಾಯಿಸುವ ಕಾರ್ಯದಲ್ಲಿ ನಿರತವಾಗಿದೆಯೇ ಹೊರತು ಬಡವರಿಗೆ ಅನುಕೂಲ ಕಲ್ಪಿಸುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿಲ್ಲ” ಆರೋಪಿಸಿದರು.

ಬಿಜೆಪಿಯವರಿಗೆ ಬಡವರ ಬಗ್ಗೆ ಕಾಳಜಿಯಿಲ್ಲ

“ಮಹಾತ್ಮಾಗಾಂಧಿ ಹಾಗೂ ಅಂಬೇಡ್ಕರ್ ರವರ ಚಿಂತನೆಗಳನ್ನು ಇಷ್ಟಪಡದ ಬಿಜೆಪಿಯವರಿಗೆ ಬಡವರನ್ನೂ ಕಂಡರೂ ಆಗುವುದಿಲ್ಲ. ದೇಶದ ಬಡವರಿಗೆಂದು ತಂದಿರುವ ಯಾವುದೇ ಯೋಜನೆಗಳಿಗೆ ಬಿಜೆಪಿಯವರ ಸಹಮತಿಯಿಲ್ಲ. ಬಡವರು, ದೀನದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರನ್ನು ಕಡೆಗಣಿಸುವ ಬಿಜೆಪಿಯವರು , ಕರ್ನಾಟಕದಲ್ಲಿ ಬಡವರಿಗಾಗಿ ತಂದ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸಿದರು. ಆದರೆ ಈ ಜನಪರ ಯೋಜನೆಯನ್ನು ದೇಶದೆಲ್ಲೆಡೆ ಬಿಜೆಪಿ ಅನುಸರಿಸುತ್ತಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...