ಅಮಿತ್ ಶಾ ಮಗ, ಐಸಿಸಿ ಅಧ್ಯಕ್ಷ ಜಯ್ ಶಾ ವಿರುದ್ಧ ಬಿಜೆಪಿಗರು ಪ್ರತಿಭಟಿಸಲಿ, ಸರ್ಕಾರದ ವಿರುದ್ಧವಲ್ಲ: ಬಿ ಕೆ ಹರಿಪ್ರಸಾದ್‌

Date:

ಬಿಜೆಪಿಗರು ಮಾಡಬೇಕಾಗಿರುವ ಹೋರಾಟ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಗ ಬಿಸಿಸಿಐ ಮುಖ್ಯಸ್ಥರಾಗಿದ್ದ, ಐಸಿಸಿಯ ಅಧ್ಯಕ್ಷ ಜಯ್ ಶಾ ವಿರುದ್ಧವೇ ಹೊರತು ರಾಜ್ಯ ಸರ್ಕಾರದ ವಿರುದ್ಧವಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಕಿಡಿಕಾರಿದ್ದಾರೆ.

ಎಕ್ಸ್‌ ತಾಣದಲ್ಲಿ ಬಿಜೆಪಿ ವಿರುದ್ಧ ಹಾರಿಹಾಯ್ದಿರುವ ಅವರು, ” ಐಪಿಎಲ್ ನಡೆಸಿ ಸಾವಿರಾರು ಕೋಟಿ ಲಾಭ ಪಡೆಯುವ ಬಿಸಿಸಿಐ ಮತ್ತು ಐಸಿಸಿ ಈಗ ಬಾಯ್ಮಿಚ್ಚಿಕೊಂಡಿರುವುದು ಯಾಕೆ” ಎಂದು ಪ್ರಶ್ನಿಸಿದ್ದಾರೆ.

“ಅಮಾಯಕ ಜನರನ್ನು ಪ್ರಚೋದಿಸುವುದು, ನಂತರ ಆಗುವ ಅನಾಹುತಗಳಿಂದ ಲಾಭ ಪಡೆಯುವ ಸಂಚು ರೂಪಿಸುವುದು ಬಿಜೆಪಿಯ ಚುನಾವಣಾ ರಾಜಕೀಯದ ಕಾರ್ಯಕ್ರಮ. ಅದರ ಭಾಗವೇ ಆರ್‌ಸಿಬಿ ಸಂಭ್ರಮಾಚರಣೆಯ ಸಂದರ್ಭದ ಘಟನೆಗಳು ಸಾಕ್ಷಿ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಮುಂಜಾಗ್ರತಾ ಕ್ರಮಗಳನ್ನೇ ಬಿಜೆಪಿ ಮತ್ತು ಜೆಡಿಎಸ್ ವಿರೋಧಿಸಿ ಜನರನ್ನು ಸರ್ಕಾರದ ವಿರುದ್ಧ ಪ್ರಚೋದಿಸಿತ್ತು. ಆದರೆ ಈಗ ಬಿಜೆಪಿ ಮತ್ತು ಜೆಡಿಎಸ್ ರಾಜ್ಯಾದ್ಯಂತ ಹೋರಾಟ ಮಾಡುವುದಾಗಿ ಘೋಷಣೆ ಮಾಡಿರುವುದು ಹಾಸ್ಯಾಸ್ಪದ. ಬಿಜೆಪಿಗರು ಇಂತಹ ಕೀಳು ಮಟ್ಟದ ರಾಜಕೀಯವನ್ನು ನಿಲ್ಲಿಸಬೇಕು” ಎಂದು ವಾಗ್ದಾಳಿ ನಡೆಸಿದ್ದಾರೆ.

“ಲಾಭ ಮಾತ್ರ ಬೇಕು ಪರಿಹಾರ ಬೇಡವೇ? ಬಿಜೆಪಿ ಮತ್ತು ಎನ್ಡಿಯ ಫಲಾನುಭವಿ ಜೆಡಿಎಸ್ ಪಕ್ಷ ಕೂಡಲೇ ಗೃಹ ಸಚಿವ ಅಮಿತ್ ವಿರುದ್ಧ ಹೋರಾಟ ನಡೆಸಿ ಐಸಿಸಿ ಅಧ್ಯಕ್ಷ ಜಯ್ ಶಾ ಅವರ ಬಳಿ ಮೃತರ ಕುಟುಂಬಗಳಿಗೆ ತಲಾ 5 ಕೋಟಿ ರೂಪಾಯಿಗಳ ಪರಿಹಾರವನ್ನು ಕೊಡಿಸಲು ಒತ್ತಾಯಿಸಲಿ” ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...