ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅರೆಸ್ಟ್, ರೌಡಿ ಶೀಟರ್‌ ತೆರೆಯುವ ಬಗ್ಗೆ ನೋಟಿಸ್

Date:

ಸಾಮಾಜಿಕ ಜಾಲತಾಣದಲ್ಲಿ ಕೋಮು ವೈಷಮ್ಯದ ಪೋಸ್ಟ್ ಹಾಕಿದ ಆರೋಪದಡಿ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅರೆಸ್ಟ್ ಆಗಿದ್ದಾರೆ.

ಶಕುಂತಲಾ ನಟರಾಜ್ ವಿರುದ್ಧ ನವೆಂಬರ್ 24ರಂದು ಮೊ.ನಂ-191/2024 ಕಲಂ 299 ಬಿಎನ್ಎಸ್ ರೀತ್ಯಾ ಪ್ರಕರಣ ದಾಖಲಾಗಿದೆ. ಈ ಹಿನ್ನೆಲೆಯಲ್ಲಿ ತುಮಕೂರು ಜಯನಗರ ಪೊಲೀಸರು ಶಕುಂತಲಾರನ್ನು ಬಂಧಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಕೋಮು ವೈಷಮ್ಯದ ಪೋಸ್ಟ್ ಹಾಕಿದ ಹಿನ್ನೆಲೆ ಪೊಲೀಸ್ ಕಾನ್ಸ್‌ಟೇಬಲ್ ಉಮಾಶಂಕರ್ ದೂರು ನೀಡಿದ್ದರು. ಅದರಂತೆ ಕಲಂ 299 ಬಿಎನ್‌ಎಸ್ ಅಡಿ ಎಫ್‌ಐಆರ್ ದಾಖಲಾಗಿತ್ತು. ಬುಧವಾರ ಸಂಜೆ ಪೊಲೀಸರು ಶಕುಂತಲಾರನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಕುಂತಲಾ ಪೋಸ್ಟ್‌ನಲ್ಲಿ ಏನಿದೆ?

“ಯೋಗಿಜಿ ರಾಜ್ಯದಲ್ಲಿ ಕಲ್ಲು ತೂರಾಟ ನಡೆಸಿದ್ದರಿಂದ ‘ಅಲ್ಲಾ’ ಸಹಾಯಕ್ಕೆ ಬರಲಿಲ್ಲಾ. ಆದ್ದರಿಂದ ಜೀವ ಹೋಗಿದೆ ಅಷ್ಟೇ. ಮೇಲೆ ಹೋದಮೇಲೆ 72 ಜನ ಸುಂದರಿಯರು ಸಿಗುತ್ತಾರೆ” ಎಂದು ಬರೆದುಕೊಂಡಿದ್ದರು.

ತಮ್ಮ ವಿರುದ್ಧ ಎಫ್‌ಐಆರ್ ದಾಖಲಾಗಿರೋದನ್ನು ಖಂಡಿಸಿ ಶಕುಂತಲಾ ಮತ್ತೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಬಸನಗೌಡ ಯತ್ನಾಳ್, ಹೆದರಬೇಡಿ ನಿಮ್ಮೊಂದಿಗೆ ನಾವಿದ್ದೇವೆ ಎಂದು ಪ್ರತಿಕ್ರಿಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಭಾರತೀಯ ಜನತಾ ಪಕ್ಷಕ್ಕೆ ನೀತಿಯೂ ಇಲ್ಲ, ರೀತಿಯೂ ಇಲ್ಲ

ರೌಡಿ ಶೀಟ್‌ ತೆರೆಯುವ ಬಗ್ಗೆ ನೋಟಿಸ್

ಶಕುಂತಲಾ ನಟರಾಜ್‌ ಅವರಿಗೆ ರೌಡಿ ಶೀಟ್‌ ತೆರೆಯುವ ಬಗ್ಗೆ ನೋಟಿಸ್ ಕೂಡ ಪೊಲೀಸರು ನೀಡಿದ್ದಾರೆ. ನೋಟಿಸ್‌ನಲ್ಲಿ ದಿನಾಂಕ:10-10-2023 ರಂದು ರಾತ್ರಿ 20-14 ಗಂಟೆಗೆ ನಿಮ್ಮ ಟ್ವಿಟರ್‌ ಖಾತೆ ಮೂಲಕ “ಭಾರತದ ಬಾವುಟಕ್ಕಿಂತ ಬೇರೆ ಯಾವುದೇ ಬಾವುಟ ಎತ್ತರದಲ್ಲಿರಬಾರದು ಅನ್ನುವ ಸಾಮಾನ್ಯ ಜ್ಞಾನ ಇಲ್ಲವೇ ನಿಮ್ಮ ಮಾಲ್ ?@ DKShivakumar #BoucutlulumallBengaluru” ಎಂದು ಪೋಸ್ಟ್‌ ಮಾಡಿರುವ ವಿಚಾರದಲ್ಲಿ ಜಯನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಆದ್ದರಿಂದ ನೀವು ನಿಮ್ಮ ಟ್ವಿಟರ್ ಖಾತೆಯ ಮೂಲಕ ಜಾತಿ ಜಾತಿಗಳ ಮಧ್ಯೆ ವೈಮನಸ್ಸು ಹಾಗೂ ಕೋಮು ಸೌಹಾರ್ದತೆಗೆ ಧಕ್ಕೆಯಾಗುವಂತಹ ಪೋಸ್ಟರ್ ಗಳನ್ನು ಸಾಮಾಜಿಕ ಜಾಲತಾಣದಲಿ ಹಾಕಿ ಜನರ ಭಾವನೆಗಳನ್ನು ಕೆರಳಿಸುವಂತಹ ಚಟುವಟಿಕೆವುಳ್ಳವರಾಗಿರುವುದರಿಂದ ನಿಮ್ಮ ಮೇಲೆ ನಿಗಾ ವಹಿಸಲು ಏಕೆ ರೌಡಿ ಹಾಳೆಯನ್ನು ತೆರೆಯಬಾರದು ಎಂಬುದಕ್ಕೆ ಈ ನೋಟಿಸ್ ಜಾರಿಯಾದ ಏಳು ದಿನಗಳ ಒಳಗಾಗಿ ನಿಮ್ಮ ಉತ್ತರ ನೀಡಲು ಸೂಚಿಸಲಾಗಿದೆ.

ಶಕುಂತಲಾ ಅವರು ಈ ಹಿಂದೆ ಒಡಿಶಾ ರೈಲು ದುರಂತದ ಬಗ್ಗೆ ಮಸೀದಿಯ ತಿರುಚಿದ ಫೋಟೋ ಹಾಕಿ ವಿವಾದ ಸೃಷ್ಟಿದ್ದರು. ನಂತರ ಪೊಲೀಸರು ಈಕೆಯನ್ನು ಬಂಧಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...