ಬಿಜೆಪಿಯ ಆಂತರಿಕ ಕಲಹವೇ ಧರ್ಮಸ್ಥಳ ಪ್ರಕರಣಕ್ಕೆ ಕಾರಣ: ಡಿಸಿಎಂ ಡಿ.ಕೆ.ಶಿವಕುಮಾರ್

Date:

ಧರ್ಮಸ್ಥಳ ಪ್ರಕರಣಕ್ಕೆ ಬಿಜೆಪಿ ನಾಯಕರ ಆಂತರಿಕ ಕಲಹವೇ ಕಾರಣ ಎನ್ನುವ ಹೇಳಿಕೆಗೆ ನಾನು ಈಗಲೂ ಬದ್ಧನಾಗಿದ್ದೇನೆ. ಅದಕ್ಕೆ ಸಂಬಂಧಪಟ್ಟಂತೆ ಹೇಳಿಕೆಗಳು, ಮಾತುಗಳು ನಿಮ್ಮ (ಮಾಧ್ಯಮಗಳ) ಮುಂದಿವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ವಿಧಾನಸೌಧದ ಬಳಿ ಮಾಧ್ಯಮಗಳು ಧರ್ಮಸ್ಥಳ ಪ್ರಕರಣ ರದ್ದು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ಕುರಿತು ಕೇಳಿದಾಗ ಉತ್ತರಿಸಿದ ಅವರು, “ಧರ್ಮಸ್ಥಳ ಪ್ರಕರಣ ವಿಚಾರದಲ್ಲಿ ವ್ಯಕ್ತಿ, ಕುಟುಂಬ ಮತ್ತು ಸಂಸ್ಥೆಗೆ ಎಷ್ಟು ಹಾನಿ ಮಾಡಬೇಕೋ ಅದನ್ನು ಈಗಾಗಲೇ ಮಾಡಲಾಗಿದೆ. ಒಟ್ಟಿನಲ್ಲಿ ಧರ್ಮ ಮತ್ತು ನ್ಯಾಯ ಉಳಿಯಬೇಕು ಎಂಬುದು ನಮ್ಮ ಅಭಿಲಾಷೆ” ಎಂದರು.

ಮಾತು ಬಿಡದ ಮಂಜುನಾಥ, ಕಾಸು ಬಿಡದ ತಿಮ್ಮಪ್ಪ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ವೀರೇಂದ್ರ ಹೆಗ್ಗಡೆಯವರ ವ್ಯಕ್ತಿತ್ವವೇ ಬೇರೆ. ಆ ಸಂಸ್ಥೆಯ ಹೆಸರಿಗೆ ಹಾನಿಯಾಗುತ್ತಿದೆಯಲ್ಲ ಎಂದು ಬೇಸರವಾಗಿತ್ತು. “ಮಾತು ಬಿಡದ ಮಂಜುನಾಥ, ಕಾಸು ಬಿಡದ ತಿಮ್ಮಪ್ಪ”. ತಿರುಪತಿಯಲ್ಲಿ ಕಾಸಿನ ಹರಕೆ, ಧರ್ಮಸ್ಥಳದಲ್ಲಿ ಮಾತಿನ ಹರಕೆ ಕಟ್ಟಿಕೊಂಡರೆ ಬಿಡುವಂತಿಲ್ಲ. ಇಂತಹ ಪದ್ಧತಿಯಲ್ಲಿ ನಡೆದುಕೊಂಡು ಹೋಗುವ ಕಡೆ ಯಾವುದೇ ಸಮಸ್ಯೆ ಇಲ್ಲ ಎಂಬುದು ನನ್ನ ನಂಬಿಕೆ” ಎಂದು ಹೇಳಿದರು.

“ನನ್ನ ವೈಯಕ್ತಿಕ ಮಾಹಿತಿ ಪ್ರಕಾರ ಹಾಗೂ ಧರ್ಮಸ್ಥಳದಲ್ಲಿ ಯಾವ ಪದ್ಧತಿ ನಡೆಯುತ್ತಿದೆ, ಅಲ್ಲಿ ಯಾವ ಸಂಪ್ರದಾಯಗಳನ್ನು ಆಚರಿಸಲಾಗುತ್ತಿದೆ ಎನ್ನುವ ಬಗ್ಗೆ ನನ್ನ ಅನುಭವದ ಆಧಾರದಲ್ಲಿ ಮಾತನಾಡಿದ್ದೇನೆ” ಎಂದರು.

ಎಸ್ ಐಟಿ ವರದಿಯಲ್ಲಿ ಏನಿದೆ ಎಂದು ತಿಳಿದಿಲ್ಲ

“ಧರ್ಮಸ್ಥಳ ಪ್ರಕರಣದ ಕುರಿತಾಗಿ ಎಸ್ ಐಟಿ ಸರ್ಕಾರಕ್ಕೆ ವರದಿ ಸಲ್ಲಿಸಿದೆಯೇ, ಇಲ್ಲವೇ ಎನ್ನುವ ಬಗ್ಗೆ ನನಗೆ ಮಾಹಿತಿಯಿಲ್ಲ. ವರದಿಯನ್ನು ಶೀಘ್ರದಲ್ಲೇ ನೀಡಬೇಕು ಎಂದು ಗೃಹಸಚಿವರು ಹೇಳಿರುವ ಹೇಳಿಕೆಯನ್ನು ಗಮನಿಸಿದ್ದೇನೆ. ಎಸ್ ಐಟಿ ವರದಿ ಬಂದ ನಂತರ ಏನಿದೆ ಎಂಬುದನ್ನು ಗಮನಿಸೋಣ. ಅದರಲ್ಲಿ ಏನಿದೆ ಎಂಬುದು ನನಗೆ ತಿಳಿದಿಲ್ಲ. ಮಾಧ್ಯಮಗಳಲ್ಲಿ ಬಂದಷ್ಟು ಮಾಹಿತಿ ಮಾತ್ರ ನನಗೆ ತಿಳಿದಿದೆ. ನಾನು ಯಾವ ಅಧಿಕಾರಿಯ ಬಳಿಯೂ ಯಾವುದೇ ವರದಿ ಕೇಳಲು, ಮಾತನಾಡಲು ಹೋಗಿಲ್ಲ” ಎಂದು ತಿಳಿಸಿದರು.

“ಅವರು ಸಾವಿರಾರು ಅರ್ಜಿಗಳನ್ನು ನ್ಯಾಯಲಯಕ್ಕೆ ಹಾಕಿಕೊಂಡಿರಬಹುದು. ನಾನು, ನೀವು ಅಥವಾ ಬೇರೆಯವರು ಏನಾದರೂ ಅಪರಾಧ ಮಾಡಿದ್ದ ಸಂದರ್ಭದಲ್ಲಿ ತಪ್ಪಾಯಿತು ಎಂದು ಕ್ಷಮಾಪಣೆ ಕೇಳುವ ಅವಕಾಶ ಈ ದೇಶದ ಕಾನೂನಿನಲ್ಲಿ ಇದೆಯೇ ಎಂಬುದರ ಬಗ್ಗೆ ಮಾಧ್ಯಮಗಳು ವಿಮರ್ಶೆ ಮಾಡಬೇಕು” ಎಂದರು.

ನನ್ನ ಹಾಗೂ ಶಾಸಕರ ಬಗ್ಗೆಯೂ ಸಮೀಕ್ಷೆ ನಡೆಯುತ್ತದೆ

ಸಚಿವ ಸಂಪುಟ ಪುನಾರಚನೆ ಸಂಬಂಧ ಹೈಕಮಾಂಡ್ ಗೆ ಸಚಿವರು ಮೂರು ತಿಂಗಳ ವರದಿ ನೀಡಿದ್ದಾರೆ ಎನ್ನುವ ಬಗ್ಗೆ ಕೇಳಿದಾಗ, “ನನಗೆ ಇದರ ಬಗ್ಗೆ ಮಾಹಿತಿಯಿಲ್ಲ. ಬೇರೆ ವಿಚಾರ ಅಥವಾ ಸಚಿವರ ಬಗ್ಗೆ ವರದಿ ಕೇಳಿರುವುದು ನನಗೆ ಗೊತ್ತಿಲ್ಲ. ನನ್ನ ಹಾಗೂ ಶಾಸಕರ ಬಗ್ಗೆ ಪ್ರತಿ ತಿಂಗಳು ನಮ್ಮ ಪಕ್ಷದಲ್ಲಿ ಸಮೀಕ್ಷೆ ನಡೆಯುತ್ತಲೇ ಇರುತ್ತದೆ. ಕ್ಷೇತ್ರ, ಪಕ್ಷ, ಸರ್ಕಾರದಲ್ಲಿ ಏನು ಕೆಲಸ ಮಾಡುತ್ತಿದ್ದಾರೆ, ಹಾಗೂ ಏನೇನು ಚಟುವಟಿಕೆಗಳು ನಡೆಯಿತು ಎಂಬುದರ ಬಗ್ಗೆ ನಿಯಮಿತವಾಗಿ ಹೈಕಮಾಂಡ್ ಗೆ ವರದಿ ಹೋಗುತ್ತಿರುತ್ತದೆ. ಅವರ ಪಾಡಿಗೆ ವರದಿ ತರಿಸಿಕೊಳ್ಳುತ್ತಾರೆ. ನಾವು ಸಹ ಪಕ್ಷದ ಚಟುವಟಿಕೆಗಳು ಏನಿದೆ ಎಂದು ಪ್ರತಿ ತಿಂಗಳೂ ವರದಿ ಕಳುಹಿಸುತ್ತೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...