ರಾಜ್ಯದಲ್ಲಿ 5, 8, 9, 11ನೇ ತರಗತಿಗೆ ಬೋರ್ಡ್‌ ಪರೀಕ್ಷೆ ನಡೆಸಲ್ಲ: ಸಚಿವ ಮಧು ಬಂಗಾರಪ್ಪ

Date:

ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಈ ಬಾರಿಯೂ 5, 8, 9 ಮತ್ತು 11ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ನಡೆಸದಿರಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಕಳೆದ ಏಪ್ರಿಲ್‌ನಲ್ಲಿ ಸುಪ್ರೀಂ ಕೋರ್ಟ್ ಬೋರ್ಡ್ ಪರೀಕ್ಷೆಗಳು ಶಿಕ್ಷಣ ಹಕ್ಕು ಕಾಯ್ದೆಗೆ ವಿರುದ್ಧವಾಗಿವೆ ಎಂದು ಹೇಳಿತ್ತು. ಅದಕ್ಕೂ ಮುನ್ನವೇ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ನಡೆಸಲು ಉದ್ದೇಶಿಸಿದ್ದ 5, 8, 9, 11ನೇ ತರಗತಿ ಬೋರ್ಡ್‌ ಪರೀಕ್ಷೆಗಳ ಸುತ್ತೋಲೆಯನ್ನು ರದ್ದು ಮಾಡಿ ಕರ್ನಾಟಕ ಹೈಕೋರ್ಟ್‌ ಆದೇಶ ಹೊರಡಿಸಿತ್ತು.

ಈ ಬಗ್ಗೆ ಶುಕ್ರವಾರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಮಧು ಬಂಗಾರಪ್ಪ, “ಈ ಬಾರಿಯೂ 5, 8, 9 ಮತ್ತು 11ನೇ ತರಗತಿಗಳ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆಯನ್ನು ನಡೆಸಲಾಗುವುದಿಲ್ಲ. 5, 8 ಮತ್ತು 9ನೇ ತರಗತಿಗಳ ವಿದ್ಯಾರ್ಥಿಗಳಿಗೆ ಮೌಲ್ಯಮಾಪನ-2 ನಡೆಸಲಾಗುತ್ತದೆ. ಆದರೆ 11ನೇ ತರಗತಿ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಗಳನ್ನು ಎದುರಿಸಬೇಕು” ಎಂದು ಮಾಹಿತಿ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಶಾಲೆಗಳಲ್ಲಿ ಕಲಿಕಾ ಫಲಿತಾಂಶ ಸುಧಾರಣೆಗೆ ‘ಶಿಕ್ಷ ಕೋಪೈಲಟ್’ ಯೋಜನೆ ಜಾರಿ: ಸಚಿವ ಮಧು ಬಂಗಾರಪ್ಪ

“ಹಿಂದೆ ನಾವು ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ವೆಬ್ ಸ್ಟ್ರೀಮಿಂಗ್ ಸೇರಿದಂತೆ ಹಲವು ಪರೀಕ್ಷಾ ಸುಧಾರಣೆಗಳನ್ನು ಪರಿಚಯಿಸಿದ್ದೇವೆ. ಬೋರ್ಡ್ ಪರೀಕ್ಷೆಗಳ ಸುತ್ತಲಿನ ಭಯ ಮತ್ತು ಆತಂಕವನ್ನು ಕಡಿಮೆ ಮಾಡಲು, ನಾವು 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆಗಳನ್ನು ಪರಿಚಯಿಸಿದೆವು. ಪ್ರಸ್ತುತ ಈ ಪ್ರಕರಣವು ಸುಪ್ರಿಂ ಕೋರ್ಟ್‌ನಲ್ಲಿದೆ. ಕೋರ್ಟ್‌ನ ಯಾವುದೇ ಅಂತಿಮ ತೀರ್ಪನ್ನು ನಾವು ಅನುಸರಿಸುತ್ತೇವೆ” ಎಂದು ತಿಳಿಸಿದರು.

2023-24 ಶೈಕ್ಷಣಿಕ ವರ್ಷದಲ್ಲಿ ಮೌಲ್ಯಮಾಪನ-2 ಪರೀಕ್ಷೆ ಬದಲಾಗಿ ಬೋರ್ಡ್ ಪರೀಕ್ಷೆ ಪರಿಚಯಿಸಲಾಗಿತ್ತು. ಖಾಸಗಿ ಶಾಲಾ ಸಂಘಗಳ ವಿರೋಧದ ನಡುವೆಯೂ ಈ ತರಗತಿಗಳಿಗೆ ಈ ವರ್ಷದ ಮಾರ್ಚ್‌ನಲ್ಲಿ ಪರೀಕ್ಷೆಗಳನ್ನು ನಡೆಸಲಾಗಿತ್ತು. ಆದರೆ ಅಷ್ಟರಲ್ಲಿ 5, 8, 9 ಮತ್ತು 11ನೇ ತರಗತಿಗೆ ಬೋರ್ಡ್ ಪರೀಕ್ಷೆ ಆದೇಶದ ವಿರುದ್ದ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು.

ಅರ್ಜಿಯನ್ನು ಪುರಸ್ಕರಿಸಿದ ಹೈಕೋರ್ಟ್ 5, 8, 9 ಮತ್ತು 11ನೇ ತರಗತಿಗೆ ಬೋರ್ಡ್ ಪರೀಕ್ಷೆ ಆದೇಶವನ್ನು ರದ್ದು ಮಾಡಿತ್ತು. ಈ ವಿವಾದಗಳ ಬಳಿಕ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ರಾಜ್ಯ ಸರ್ಕಾರ ತಡೆಹಿಡಿದಿದೆ. ಹಾಗೆಯೇ ರಾಜ್ಯವು ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...