ಬಿಜೆಪಿಯ ಇಂದಿನ ಸ್ಥಿತಿ ಬಗ್ಗೆ ಯೋಚಿಸಿ ಬೊಮ್ಮಾಯಿಗೆ ಹಾರ್ಟ್‌ ಅಟ್ಯಾಕ್‌ ಆಗಿದೆ: ಕೋನರೆಡ್ಡಿ ವಿವಾದಾತ್ಮಕ ಹೇಳಿಕೆ

Date:

  • ಬಿಜೆಪಿಯಲ್ಲಿ ಬೊಮ್ಮಾಯಿ ಅವರ ವರ್ಚಸ್ಸು ಕಡಿಮೆ ಆಗಿದೆ
  • ಕೋನರೆಡ್ಡಿಯ ಬಹಿರಂಗ ಹೇಳಿಕೆ ಬೆನ್ನಲ್ಲೆ ಆಕ್ಷೇಪ ವ್ಯಕ್ತ

“ಬಸವರಾಜ ಬೊಮ್ಮಾಯಿಗೆ ಹೃದಯಾಘಾತ ಆಗಿದ್ದು ಯಾಕೆ ಗೊತ್ತಾ? ಕರ್ನಾಟಕದಲ್ಲಿ ಹೊಸ ಸರ್ಕಾರ ಬಂದು ಐದು ತಿಂಗಳಾಯ್ತು. ಇನ್ನೂ ವಿರೋಧ ಪಕ್ಷದ ನಾಯಕನ ಆಯ್ಕೆ ಹಾಗೂ ರಾಜ್ಯಾಧ್ಯಕ್ಷರನ್ನು ಆಯ್ಕೆ ಮಾಡುಲು ಆಗಿಲ್ಲ ಎಂದು ಯೋಚನೆ ಮಾಡಿ ಮಾಡಿಯೇ ಹೃದಯಾಘಾತ ಆಗಿದೆ” ಎಂದು ಕಾಂಗ್ರೆಸ್‌ ಶಾಸಕ ಎನ್ ಎಚ್ ಕೋನರೆಡ್ಡಿ ಲೇವಡಿ ಮಾಡಿದರು.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, “ಕರ್ನಾಟಕದಲ್ಲಿ ಬಿಜೆಪಿಯ ಇಂದಿನ ಸ್ಥಿತಿ ಬಗ್ಗೆ ಚಿಂತೆ ಮಾಡಿ ಬೊಮ್ಮಾಯಿಗೆ ಹಾರ್ಟ್‌ ಅಟ್ಯಾಕ್‌ ಆಗಿದೆ. ಜತೆಗೆ ಅವರ ಪಕ್ಷದಲ್ಲಿ ಅವರ ವರ್ಚಸ್ಸು ಕಡಿಮೆ ಆಗಿದೆ ಎಂಬ ಯೋಚನೆಯಿಂದ ಹಾರ್ಟ್ ಅಟ್ಯಾಕ್ ಆಗಿದೆ” ಎಂದರು.

“ಬಿಜೆಪಿ ಅಧೋಗತಿಗೆ ಹೋಗಿರುವುದನ್ನು ನೋಡಿ ಚಿಂತೆ ಮಾಡಿ ಮಾಡಿ ಬೊಮ್ಮಾಯಿಗೆ ಸಾಕಾಗಿದೆ. ಹೆಚ್ಚು ಯೋಚನೆ ಮಾಡಿದ್ದರಿಂದ ಹೃದಯಾಘಾತವಾಗಿದೆ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೋನರೆಡ್ಡಿಯ ಬಹಿರಂಗ ಹೇಳಿಕೆ ಬೆನ್ನಲ್ಲೆ ಅದರ ಬಗ್ಗೆ ಆಕ್ಷೇಪ ವ್ಯಕ್ತವಾಗಿದೆ. “ಮಾಜಿ ಮುಖ್ಯಮಂತ್ರಿಯ ಅನಾರೋಗ್ಯದ ಕುರಿತು ಸೌಜನ್ಯವನ್ನೇ‌ ಮರೆತು ಕಾಂಗ್ರೆಸ್ ಶಾಸಕ ಮಾತನಾಡಿದ್ದಾರೆ” ಎಂಬ ಮಾತುಗಳು ರಾಜಕೀಯ ಅಂಗಳದಲ್ಲಿ ವ್ಯಕ್ತವಾಗುತ್ತಿವೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹುಲಿಯುಗುರು ಲಾಕೆಟ್‌ ; ಸಂತೋಷನಿಗೇನೋ ಸುಣ್ಣ, ಸೆಲೆಬ್ರಿಟಿಗಳಿಗೇಕೆ ಬೆಣ್ಣೆ?

ಇತ್ತೀಚೆಗಷ್ಟೇ ಬಸವರಾಜ ಬೊಮ್ಮಾಯಿ ಅವರು ತೆರೆದ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಮಂಡಿನೋವಿನ ಬಾಧೆ ಕಾಡುತ್ತಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿನ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದ ಅವರ ಆರೋಗ್ಯ ತಪಾಸಣೆ ನಡೆಸಿದಾಗ ಹೃದಯದ ಕವಾಟಗಳು ಮುಚ್ಚಿಕೊಂಡಿರುವುದು ಪತ್ತೆಯಾಗಿತ್ತು. ನಂತರ ಅವರು ತೆರೆದ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಕೆಲವು ದಿನಗಳ ಹಿಂದಷ್ಟೇ ಆಸ್ಪತ್ರೆಯಿಂದ ಮನೆಗೆ ಮರಳಿ ಇದೀಗ ಚೇತರಿಸಿಕೊಳ್ಳುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...