ಸಂಸದ ಬೊಮ್ಮಾಯಿ ಸರ್ವಸಂಪನ್ನರೇನಲ್ಲ: ಸಚಿವ ದಿನೇಶ್ ಗುಂಡೂರಾವ್‌ ಟೀಕೆ

Date:

ಮಾಜಿ ಸಿಎಂ ಮತ್ತು ಸಂಸದ ಬಸವರಾಜ ಬೊಮ್ಮಾಯಿ ಅವರು ಸರ್ವಸಂಪನ್ನರಂತೆ ಈಗ ಮಾತನಾಡುತ್ತಿದ್ದಾರೆ. ನಮ್ಮ ಸರ್ಕಾರ ಜನರ ಬಾಯಿಗೆ‌ ಮಣ್ಣು ಹಾಕುತ್ತಿದೆ ಎನ್ನುವ ಬೊಮ್ಮಾಯಿಯವರಿಗೆ ಕನಿಷ್ಠ ಪಕ್ಷ ಆತ್ಮಸಾಕ್ಷಿ ಇದ್ದಿದರೆ ಈ ರೀತಿಯ ಮಾತು ಆಡುತ್ತಿರಲಿಲ್ಲ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಕುಟುಕಿದ್ದಾರೆ.

“ಬೊಮ್ಮಾಯಿಯವರೆ, ನೀವು ಮುಖ್ಯಮಂತ್ರಿಯಾಗಿ ಏನು ಕಡಿದು ಕಟ್ಟೆ ಹಾಕಿದ್ದೀರಿ? ಎಂದು ಕೇಳಿದರೆ ನೀವು ಉತ್ತರ ಕೊಡಲು ತಡಕಾಡುವಿರಿ‌. ಮುಖ್ಯಮಂತ್ರಿಯಾಗಿದ್ದಾಗ ನೀವು ಈ ರಾಜ್ಯಕ್ಕೆ ಕೊಟ್ಟ ಕೊಡುಗೆಯೇನು? ಉತ್ತರಿಸಿ” ಎಂದು ಎಕ್ಸ್‌ ತಾಣದಲ್ಲಿ ಅಗ್ರಹಿಸಿದ್ದಾರೆ.

“ಬೊಮ್ಮಾಯಿಯವರೆ, 2023ರಲ್ಲಿ‌ ನೀವು ಮರಳಿ ಅಧಿಕಾರಕ್ಕೆ ಬರುವುದಿಲ್ಲ ಎಂಬ ಸತ್ಯ ಗೊತ್ತಿತ್ತು. ಹಾಗಾಗಿ ಅಧಿಕಾರ ಬಿಡುವ ಮುನ್ನ ಬಜೆಟ್ ವೆಚ್ಚಕ್ಕಿಂತ 7 ಪಟ್ಟು ವೆಚ್ಚದ ಕಾಮಗಾರಿಗಳಿಗೆ ಅನುಮೋದನೆ ನೀಡಿದಿರಿ. ಆ ಕಾಮಗಾರಿ ಕೈಗೊಂಡ ಗುತ್ತಿಗೆದಾರರಿಗೆ ಹಣ ಪಾವತಿ ಯಾರು ಮಾಡಬೇಕು? ನಿಮ್ಮ ಸ್ವಂತ ಖಜಾನೆಯಿಂದ ಕೊಡುವಂತೆ ಅಪ್ರಸ್ತುತ ಕಾಮಗಾರಿಗಳಿಗೆ ಅನುಮೋದನೆ ಕೊಟ್ಟಾಗ ಪ್ರಜ್ಞೆ ಇರಲಿಲ್ಲವೆ? ಇದು ಜನರ ಬಾಯಿಗೆ ಮಣ್ಣು ಹಾಕುವ ಕೆಲಸವಲ್ಲವೆ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬೊಮ್ಮಾಯಿಯವರೆ, ನೀವು ಮುಖ್ಯಮಂತ್ರಿಯಾಗಿದ್ದಾಗ ಎಂದಾದರೂ ಕೇಂದ್ರ ಸರ್ಕಾರದ ತೆರಿಗೆ ಅನ್ಯಾಯದ ಬಗ್ಗೆ ಎದೆಯೆತ್ತಿ ಮಾತಾಡಿದ್ದೀರಾ? ಹೋಗಲಿ‌ ಮೋದಿ ಸರ್ಕಾರದಿಂದ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ಬಗ್ಗೆ ಒಮ್ಮೆಯಾದರೂ ಬಾಯಿ ಬಿಟ್ಟಿದ್ದೀರಾ? ಮೋದಿಯವರ ಮುಂದೆ ನಡು ಬಗ್ಗಿಸಿ ನಿಂತಿದ್ದೆ ನಿಮ್ಮ ಸಾಧನೆಯಲ್ಲವೆ? ಇದು ಜನರ ಬಾಯಿಗೆ ಮಣ್ಣು ಹಾಕುವ ಕೆಲಸವಲ್ಲವೆ?” ಎಂದು ಲೇವಡಿ ಮಾಡಿದ್ದಾರೆ.

“ಬೊಮ್ಮಾಯಿಯವರೆ, ಗ್ಯಾರಂಟಿ ಯೋಜನೆಗಳಿಗೆ ನಮ್ಮ ಸರ್ಕಾರ 58 ಸಾವಿರ ಕೋಟಿ ಮೀಸಲಿರಿಸಿದೆ. ಈ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಎಷ್ಟೋ ಮನೆಗಳ ದೀಪ ಉರಿಯುತ್ತಿದೆ ಎಂಬ ಅರಿವು ನಿಮಗರಲಿ. ನಿಮ್ಮ ನೇತೃತ್ವದ ಸರ್ಕಾರವಿದ್ದಾಗ ಯಾವುದಾದರೂ ಒಂದೇ ಒಂದು ಜನಪರ ಕಾರ್ಯಕ್ರಮ ಮಾಡಿದ ಉದಾಹರಣೆ ಇದೆಯೆ? ರಾಜ್ಯದ ಖಜಾನೆ ಲೂಟಿ ಹೊಡದಿದ್ದೆ ನಿಮ್ಮ ಸರ್ಕಾರದ ಹೆಗ್ಗಳಿಕೆಯಲ್ಲವೆ?

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...