ಕರ್ನಾಟಕದಲ್ಲಿ ಕನ್ನಡಿಗರಿಗೆ ಉದ್ಯೋಗ; ಮೀಸಲಾತಿ ವಿರೋಧಿಸಿದ ‘ಫೋನ್‌ಪೇ’ ವಿರುದ್ಧ ಬಾಯ್‌ಕಾಟ್ ಅಭಿಯಾನ

Date:

ಕರ್ನಾಟಕದಲ್ಲಿ ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಸಂಚಿವ ಸಂಪುಟದಲ್ಲಿ ಅಂಗೀಕರಿಸಿದ್ದ ಮಸೂದೆಯನ್ನು ಸದ್ಯ, ಸದನದಲ್ಲಿ ಮಂಡಿಸಲು ಸರ್ಕಾರ ಹಿಂದೇಟು ಹಾಕುತ್ತಿದೆ. ಈ ನಡುವೆ, ಉದ್ಯೋಗ ಮೀಸಲಾತಿಗೆ ಖಾಸಗಿ ಸಂಸ್ಥೆಗಳು ವಿರೋಧ ವ್ಯಕ್ತಪಡಿಸಿವೆ.

ಉದ್ಯೋಗ ಮೀಸಲಾತಿಯನ್ನು ಖಂಡಿಸುವ ಭರದಲ್ಲಿ ಫೋನ್‌ಪೇ ಸಿಇಒ ಸಮೀರ್ ನಿಗಮ್, “ನಾವು ಯಾವುದೇ ರಾಜ್ಯದಲ್ಲಿ 15 ವರ್ಷಕ್ಕಿಂತ ಹೆಚ್ಚು ವಾಸಿಸಿಲ್ಲ. ನಾನು ಕಂಪನಿಗಳನ್ನು ನಿರ್ಮಿಸಿದ್ದು, ಭಾರತದಾದ್ಯಂತ 25000+ ಉದ್ಯೋಗಗಳನ್ನು ಸೃಷ್ಟಿಸಿದ್ದೇನೆ! ನನ್ನ ಮಕ್ಕಳು ತಮ್ಮ ತವರು ನಗರದಲ್ಲಿ ಉದ್ಯೋಗಕ್ಕೆ ಅರ್ಹರಲ್ಲವೇ?” ಎಂದು ಹೇಳುವ ಮೂಲಕ ವಿವಾದ ಸೃಷ್ಠಿಸಿದ್ದಾರೆ.

ಅವರ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕನ್ನಡಿಗರು, ಸಾಮಾಜಿಕ ಜಾಲತಾಣದಲ್ಲಿ ‘ಬಾಯ್‌ಕಾಟ್ ಫೋನ್‌ಪೇ’ ಅಭಿಯಾನ ನಡೆಸುತ್ತಿದ್ದಾರೆ. ಅಲ್ಲದೆ, ಕಾಯ್ದೆ ಜಾರಿಗೆ ತರುವುದಾಗಿ ಹೇಳಿ, ಮಸೂದೆಯನ್ನು ತಡೆಹಿಡಿದಿರುವ ಸರ್ಕಾರ ವಿರುದ್ಧವೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಣಧೀರ ಪಡೆಯ ಮುಖಂಡ ಹರೀಶ್ ಭೈರಪ್ಪ ಅವರು, “ಕನ್ನಡಿಗರ ಅನ್ನ ತಿಂದು ದ್ರೋಹ ಬಗೆಯುವ ಈ ಫೋನ್ ಪೇ ಮಾಲೀಕನಿಗೆ ಸರಿಯಾಗಿ ಬುದ್ಧಿ ಕಲಿಸೋಣ. ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಕೊಡುವುದನ್ನು ವಿರೋಧಿಸುತ್ತಾನಂತೆ , ಇವನ App ಅನ್ನು ನನ್ನ ಜೀವಮಾನದಲ್ಲಿ ಉಪಯೋಗಿಸುವುದಿಲ್ಲ. ಕರ್ನಾಟಕದಿಂದ ಇವನನ್ನು ಓಡಿಸುವ ಕೆಲಸ ಮೊದಲು ಮಾಡೋಣ” ಎಂದು ಟ್ವೀಟ್‌ ಮಾಡಿದ್ದಾರೆ.

 

ಉದಯ್ ಕುಮಾರ್ ಆರ್ ಎಂಬವರು, “ಮೊದಲು ಫೋನ್ ಪೇ ಅಪ್ಲಿಕೇಷನ್ ಅಲ್ಲಿ ಅಕೌಂಟ್ ಡಿ ಆಕ್ಟಿವೇಟ್ ಮಾಡಿ ಆಮೇಲೆ ಪ್ಲೇ ಸ್ಟೋರ್ ಅಲ್ಲಿ 1* ರೇಟಿಂಗ್ ಕೊಟ್ಟು ಅನ್ ಇನ್ಸ್ಟಾಲ್ ಮಾಡಿ” ಎಂದು ಫೇನ್‌ಪೇ ವಿರುದ್ಧ ಕಿಡಿಕಾರಿದ್ದಾರೆ.

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...