BREAKING NEWS | ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ನಿಧನ

Date:

ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕರಾದ ಶಾಮನೂರು ಶಿವಶಂಕರಪ್ಪ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.

ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಶಾಮನೂರು ಶಿವಶಂಕರಪ್ಪ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು (ಡಿಸೆಂಬರ್ 14) ಸಂಜೆ ಕೊನೆಯುಸಿರೆಳೆದಿದ್ದಾರೆ.

ಶಾಮನೂರು ಶಿವಶಂಕರಪ್ಪ ಅವರು 6 ಬಾರಿ ಶಾಸಕರಾಗಿದ್ದು, ಹಲವು ಮುಖ್ಯಮಂತ್ರಿ ಗಳ ಸಂಪುಟದಲ್ಲಿ ಸಚಿವರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತದಲ್ಲೇ ಹಿರಿಯ ಶಾಸಕ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಆದರೆ, ವಯೋಸಹಜ ಅನಾರೋಗ್ಯದ ಹಿನ್ನೆಲೆ ಕೆಲ ದಿನಗಳಿಂದ ಬೆಂಗಳೂರಿನ ಸ್ಪರ್ಶ ಆಸ್ಪತ್ರೆಗೆ ದಾಖಲಾಗಿಸಲಾಗಿತ್ತು. ಆಗಲೇ ಬೇರೆ ಬೇರೆ ಸುದ್ದಿ ಹರಿದಾಡಿದ್ದರಿಂದ ಈ ಬಗ್ಗೆ ಪುತ್ರ, ಸಚಿವ ಎಸ್​​ಎಸ್​ ಮಲ್ಲಿಕಾರ್ಜುನ ಆವರು ಪ್ರತಿಕ್ರಿಯಿಸಿ ತಮ್ಮ ತಂದೆ ಚೆನ್ನಾಗಿದ್ದಾರೆ. ಗುರು ಹಿರಿಯರ ಆಶೀರ್ವಾದದಿಂದ ಇನ್ನೊಂದು ವಾರದಲ್ಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್​​ ಆಗಲಿದ್ದಾರೆ ಎಂದು ಹೇಳಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.

1931ರ ಜೂನ್ 16ರಂದು ದಾವಣಗೆರೆಯ ಶಾಮನೂರಿನಲ್ಲಿ ಕಲ್ಲಪ್ಪ ಮತ್ತು ಸಾವಿತ್ರಮ್ಮ ಅವರ ಎರಡನೇ ಮಗನಾಗಿ ಜನಿಸಿದ ಶಿವಶಂಕರಪ್ಪ ಅವರು ಸರಕಾರಿ ಕಾಲೇಜು, ದಾವಣಗೆರೆಯಲ್ಲಿ ವಿದ್ಯಾಭ್ಯಾಸ ಪೂರೈಸಿದರು.

1969ರಲ್ಲಿ ಕಾಂಗ್ರೆಸ್‌ ಮೂಲಕ ರಾಜಕೀಯ ಸೇರಿ ಮೊಟ್ಟಮೊದಲಿಗೆ ದಾವಣಗೆರೆ ಮಹಾನಗರ ಪಾಲಿಕೆ ಸದಸ್ಯರಾದರು.
1971ರಲ್ಲಿ ಪಾಲಿಕೆ ಅಧ್ಯಕ್ಷರಾದರು. 1994ರಲ್ಲಿ ದಾವಣಗೆರೆಯಿಂದ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು. 1998-99ರಲ್ಲಿ ಲೋಕಸಭೆ ಸದಸ್ಯರಾಗಿ ಸೇವೆ ಸಲ್ಲಿಸಿದರು. 2004ರಿಂದ ದಾವಣಗೆರೆ ದಕ್ಷಿಣದಿಂದ ಆರು ಬಾರಿ ಶಾಸಕರಾಗಿ ಗೆದ್ದು, ಭಾರತದ ಅತ್ಯಂತ ವಯಸ್ಸಿನ ಶಾಸಕ ಎಂಬ ಹೆಗ್ಗಳಿಗೆ ಅವರಾಗಿತ್ತು. 2013-16ರಲ್ಲಿ ಸಿದ್ದರಾಮಯ್ಯ ಸರ್ಕಾರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದರು.

ಹಾಲಿ ಸಚಿವ ಎಸ್‌ ಎಸ್‌ ಮಲ್ಲಿಕಾರ್ಜುನ್‌ ಸೇರಿ ನಾಲ್ವರು ಮಕ್ಕಳನ್ನು ಅಗಲಿದ್ದಾರೆ. ಶಿವಶಂಕರಪ್ಪ ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...