ವಿಧಾನಸೌಧದಲ್ಲಿ ಭುವನೇಶ್ವರಿಯ ಕಂಚಿನ ಪುತ್ಥಳಿ ಅನಾವರಣ, ಕನ್ನಡ ಹೋರಾಟಗಾರರ ಕೇಸ್ ವಾಪಸ್

Date:

ವಿಧಾನಸೌಧದ ಆವರಣದಲ್ಲಿ ತಾಯಿ ಭುವನೇಶ್ವರಿಯ ವೈಭವದ ಕಂಚಿನ ಪುತ್ಥಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ (ಜ.27) ಅನಾವರಣಗೊಳಿಸಿದರು.

ಡಿಸಿಎಂ ಡಿ ಕೆ ಶಿವಕುಮಾರ್, ವಿಧಾನಸಭಾಧ್ಯಕ್ಷ ಯು ಟಿ ಖಾದರ್, ಸಚಿವರಾದ ರಾಮಲಿಂಗಾರೆಡ್ಡಿ, ಶಿವರಾಜ್ ತಂಗಡಗಿ, ಬೈರತಿ ಸುರೇಶ್, ದೆಹಲಿಯಲ್ಲಿ ವಿಶೇಷ ಪ್ರತಿನಿಧಿ ಟಿ ಬಿ ಜಯಚಂದ್ರ, ಶಾಸಕರಾದ ರಿಜ್ವಾನ್ ಅರ್ಶದ್, ಪೊನ್ನಣ್ಣ, ಸಲೀಮ್ ಅಹ್ಮದ್, ನಜೀರ್ ಅಹ್ಮದ್, ಡಿ ಟಿ ಶ್ರೀನಿವಾಸ್, ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ ಮಹೇಶ್ ಜೋಶಿ, ಮಾಜಿ ಸಚಿವ ಎಚ್ ಎಂ ರೇವಣ್ಣ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ ಪುರುಷೋತ್ತಮ ಬಿಳಿಮಲೆ ಮತ್ತಿತರರು ಭಾಗವಹಿಸಿದ್ದರು.

ಭುವನೇಶ್ವರಿಯ ಪುತ್ಥಳಿ ಅನಾವರಣದ ಬಳಿಕ ಮಾತನಾಡಿದ ಸಿದ್ದರಾಮಯ್ಯ, “ನಾವು ಎಲ್ಲ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್ನು ಮಾತ್ರ ಬಳಸಬೇಕು, ಬೆಳೆಸಬೇಕು, ಬೆಳಗಬೇಕು. ದೇವರಾಜ ಅರಸರು ಮುಖ್ಯಮಂತ್ರಿಯಾಗಿದ್ದಾಗ ಕರ್ನಾಟಕ ಎಂದು ನಾಮಕರಣ ಮಾಡಿದರು. 2023 ಕ್ಕೆ ಈ ನಾಮಕರಣ ಆಗಿ 50 ವರ್ಷ ತುಂಬಿದರೂ ಆಗಿನ ಬಿಜೆಪಿ ಸರ್ಕಾರ ಈ ಸುವರ್ಣೋತ್ಸವವನ್ನು ಬೇಕಂತಲೇ ಕೈಬಿಟ್ಟರು. ಆದರೆ ನಾವು ಅಧಿಕಾರಕ್ಕೆ ಬಂದು ಒಂದು ವರ್ಷ ಲೇಟಾದರೂ ಕರ್ನಾಟಕದ ಸುವರ್ಣೋತ್ಸವವನ್ನು ಆರಂಭಿಸಿ ಇಡೀ ವರ್ಷ ಆಚರಿಸಲು ನಿರ್ಧರಿಸಿದೆವು. ಕನ್ನಡ ಭಾಷೆ, ಸಂಸ್ಕೃತಿ ವಿಚಾರದಲ್ಲಿ ಇದು ನಮ್ಮ ಬದ್ಧತೆ” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕನ್ನಡ ಭಾಷೆ, ಸಂಸ್ಕೃತಿ, ಕಲೆಯನ್ನು ರಾಜ್ಯದ ಪ್ರತಿಯೊಬ್ಬರೂ ಅಭಿಮಾನ ಬೆಳೆಸಿಕೊಳ್ಳಬೇಕು. ಹೆಸರಾಯಿತು ಕರ್ನಾಟಕ-ಉಸಿರಾಗಲಿ ಕರ್ನಾಟಕ ಎನ್ನುವುದು ನಮ್ಮ ನಿಮ್ಮೆಲ್ಲರ ಅಭಿಮಾನವಾಗವಾಗಬೇಕು. ಆಗ ಮಾತ್ರ ಕನ್ನಡ ಸಾರ್ವಭೌಮ‌ಭಾಷೆಯಾಗುತ್ತದೆ. ನಾವು ಎಲ್ಲ ಭಾಷೆಗಳನ್ನು ಪ್ರೀತಿಸಬೇಕು. ಕನ್ನಡವನ್ನು ಬಳಸಬೇಕು, ಬೆಳೆಸಬೇಕು, ಬೆಳಗಬೇಕು. ನಾವು ನಮ್ಮ ಸಹೋದರ ಮತ್ತು ಇತರೆ ಭಾಷಿಕರ ಜೊತೆ ಕನ್ನಡದಲ್ಲಿ ಮಾತನಡುವ, ವ್ಯವಹರಿಸುವ ಸಂಸ್ಕೃತಿಯನ್ನು ಪಾಲಿಸಬೇಕು” ಎಂದರು.

ಕನ್ನಡಪರ ಹೋರಾಟಗಾರರ ಎಲ್ಲ ಕೇಸ್ ವಾಪಸ್

“ಕನ್ನಡಪರ ಹೋರಾಟಗಾರರ ಎಲ್ಲ ಕೇಸ್ ವಾಪಸ್ ಪಡೆಯಲಾಗುವುದು” ಎಂದು ಇದೇ ಸಂದರ್ಭದಲ್ಲಿ ಸಿ.ಎಂ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಸ್‌ಸಿಎಸ್‌ಪಿ / ಟಿಎಸ್‌ಪಿ ಅನುದಾನ ಬಳಕೆಯಾಗುತ್ತಿಲ್ಲವೇಕೆ?

WhatsApp Image 2025 01 27 at 7.19.22 PM

ಕನ್ನಡ ಧ್ವಜಾರೋಹಣ ಕಡ್ಡಾಯ: ಡಿಸಿಎಂ

ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲ್ಲ ಸಂಘ ಸಂಸ್ಥೆ (ಸರ್ಕಾರಿ ಹಾಗೂ ಖಾಸಗಿ) ಗಳಲ್ಲಿ ಕನ್ನಡ ಧ್ವಜಾರೋಹಣ ಮಾಡುವುದನ್ನು ಕಡ್ಡಾಯ ಮಾಡಿ ಆದೇಶ ಹೊರಡಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

“ನಮ್ಮ ಮಾತೃಭಾಷೆ, ಈ ನೆಲ, ಜಲ ಕಾಪಾಡಲು ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ. ಬೆಂಗಳೂರಿನಲ್ಲಿ 107 ಭಾಷೆ ಮಾತನಾಡುವ ಜನರಿದ್ದಾರೆ. ಕಳೆದ ವರ್ಷ ಎಲ್ಲ ಸಂಘ ಸಂಸ್ಥೆಗಳಲ್ಲೂ ನವೆಂಬರ್ 1 ರಂದು ಸರ್ಕಾರ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಕನ್ನಡದ ಧ್ವಜ ಹಾರಿಸುವಂತೆ ಮಾಡುವ ಪ್ರಯತ್ನಕ್ಕೆ ಮುಂದಾಗಿದ್ದೆ. ನಾನು ಸಂಪೂರ್ಣವಾಗಿ ಯಶಸ್ವಿಯಾಗಿಲ್ಲ, ಆದರೆ ಮುಂದಿನ ದಿನಗಳಲ್ಲಿ ಇದನ್ನು ಕಡ್ಡಾಯ ಮಾಡುವ ಆದೇಶವನ್ನು ಹೊರಡಿಸಲಾಗುವುದು. ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಅಥವಾ ಪಾಲಿಕೆ ವತಿಯಿಂದ ಎಲ್ಲಾ ಸಂಸ್ಥೆಗಳಿಗೂ ಕನ್ನಡ ಬಾವುಟ ಪೂರೈಸುವ ಕೆಲಸ ಮಾಡುತ್ತೇವೆ. ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಕನ್ನಡರಾಜ್ಯೋತ್ಸವದ ದಿನದಂದು ಸಾಂಸ್ಕೃತಿಕ ಕಾರ್ಯಕ್ರಮ ನಡೆಸುವಂತೆ ಸೂಚಿಸಲಾಗುವುದು. ಆಮೂಲಕ ಸಣ್ಣ ವಯಸ್ಸಿನಿಂದಲೇ ಮಕ್ಕಳಲ್ಲಿ ಕನ್ನಡದ ವೈಭವವನ್ನು ಬಿತ್ತುವ ಕೆಲಸ ಮಾಡಲಾಗುವುದು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...