ಬಿಎಸ್‌ವೈ, ಬೊಮ್ಮಾಯಿ ಅಧಿಕಾರದಲ್ಲಿದ್ದಾಗ ಯಾರ ಓಲೈಕೆ ಮಾಡಲು ಉರ್ದು ಜಾಹೀರಾತು ನೀಡಿದ್ದರು: ಸಿಎಂ ಸಿದ್ದರಾಮಯ್ಯ

Date:

ನೆಲ-ಜಲ-ಭಾಷೆಯ ಕಾಳಜಿಯ ಬಗ್ಗೆ ಬಿಜೆಪಿ ನಾಯಕರಿಂದ ಪಾಠ ಹೇಳಿಸಿಕೊಳ್ಳಬೇಕಾದ ದರಿದ್ರ ಸ್ಥಿತಿ ನಮಗೆ ಬಂದಿಲ್ಲ. ಕನ್ನಡ ಮತ್ತು ಕನ್ನಡಿಗರ ಹಿತ ಕಾಯುವ ವಿಚಾರ ಬಂದಾಗ ರಾಜಕೀಯ ಬದಿಗಿಟ್ಟು, ಹೋರಾಟದ ಮೊದಲ ಸಾಲಿನಲ್ಲಿ ನಿಂತವನು ನಾನು. ಇದಕ್ಕೆ ಇತಿಹಾಸ ಸಾಕ್ಷಿ. ಕನ್ನಡ ಕಾವಲು ಸಮಿತಿಯ ಅಧ್ಯಕ್ಷನಾಗಿಯೇ ರಾಜಕೀಯ ಜೀವನಕ್ಕೆ ಕಾಲಿರಿಸಿದ ನನಗೆ ಕನ್ನಡ ಬರಿ ಭಾಷೆಯಲ್ಲ, ಬದುಕು ಹೌದು. ಜೈ ಕರ್ನಾಟಕ, ಜೈ ಕನ್ನಡ..’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ಗುರುವಾರ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ‘ಉರ್ದು ಪತ್ರಿಕೆಯಲ್ಲಿ ಸರಕಾರದ ಜಾಹೀರಾತೊಂದು ಉರ್ದುಭಾಷೆಯಲ್ಲಿ ಪ್ರಕಟಗೊಂಡಿದ್ದನ್ನು ವಿರೋಧಿಸಿ ವಿಪಕ್ಷಗಳ ನಾಯಕರು ಆಡಿರುವ ವೀರಾವೇಶದ ಮಾತುಗಳನ್ನು ಆಲಿಸಿದೆ. ಹಿಂದೆ ತಾವೇ ಅಧಿಕಾರದಲ್ಲಿ ಇದ್ದಾಗ ಉರ್ದು ಭಾಷೆಯ ಜಾಹೀರಾತು ನೀಡಿ, ಈಗ ನಮ್ಮ ವಿರುದ್ಧ ಮುಗಿಬೀಳುವುದು ಆತ್ಮವಂಚನೆ ಮತ್ತು ಅಸಹ್ಯದ ಪರಮಾವಧಿ. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅಧಿಕಾರದಲ್ಲಿದ್ದಾಗ ಯಾರ ಓಲೈಕೆ ಮಾಡಲು ಉರ್ದು ಜಾಹೀರಾತು ನೀಡಿದ್ದರು? ಎಂದು ಹೇಳಿ ಪುಣ್ಯಕಟ್ಟಿಕೊಳ್ಳಿ’ ಎಂದು ಲೇವಡಿ ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಐಟಿ ಸಾಮ್ರಾಜ್ಯದಲ್ಲಿ ‘ಎಐ’ ಭೂಕಂಪ: ಭಾರತಕ್ಕೆ ಕಾದಿವೆಯೇ ಕರಾಳ ದಿನಗಳು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

‘ಸರಕಾರದ ಕಾರ್ಯಕ್ರಮಗಳು, ಯೋಜನೆಗಳ ಮಾಹಿತಿಯನ್ನು ಜನರಿಗೆ ತಲುಪಿಸುವ ಉದ್ದೇಶದಿಂದಲೇ ಸರಕಾರ ಜಾಹೀರಾತು ನೀಡುತ್ತದೆ. ಹೆಚ್ಚೆಚ್ಚು ಜನರನ್ನು ತಲುಪುತ್ತದೆ ಎನ್ನುವ ಕಾರಣಕ್ಕಾಗಿ ಆಯಾ ಭಾಷೆಯ ಪತ್ರಿಕೆಗಳಲ್ಲಿ ಅದೇ ಭಾಷೆಯ ಜಾಹೀರಾತು ನೀಡುವುದು ಹಿಂದಿನಿಂದ ನಡೆದುಕೊಂಡು ಬಂದ ಪದ್ಧತಿ. ಇದರಿಂದ ಪತ್ರಿಕೆಯ ಓದುಗರಿಗೆ ಜಾಹೀರಾತಿನ ವಿಚಾರ ಅರ್ಥವಾಗಿ, ಜಾಹೀರಾತು ನೀಡಿದ ಉದ್ದೇಶವೂ ಈಡೇರುತ್ತದೆ’ ಎಂದು ಸಿದ್ದರಾಮಯ್ಯ ಉಲ್ಲೇಖಿಸಿದ್ದಾರೆ.

‘ಬಿಜೆಪಿ ನಾಯಕರು ಒಂದಲ್ಲ, ಎರಡಲ್ಲ ಹತ್ತಾರು ಬಾರಿ ಉರ್ದು ಜಾಹೀರಾತುಗಳನ್ನು ನೀಡಿದ್ದಾರೆ, ಆಗ ಅವರಿಗೆ ಅದು ತುಷ್ಟೀಕರಣ ಅನ್ನಿಸಲಿಲ್ಲ. ಈಗ ನಮ್ಮ ಸರಕಾರ ನೀಡಿರುವ ಉರ್ದು ಜಾಹೀರಾತು ಕಂಡೊಡನೆ ಅವರೊಳಗಿನ ಕನ್ನಡಪ್ರೇಮ ಇದ್ದಕ್ಕಿದ್ದಂತೆ ಎದ್ದುನಿಂತಿದೆ. ನಿಮ್ಮ ಈ ‘ಹಿಪೋಕ್ರಸಿ’ ಗೋಸುಂಬೆಯನ್ನೇ ನಾಚಿಸುವಂತಿದೆ’ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...