ಬಜೆಟ್‌ 2025 | ರೈತ ಸಂಘದ ಮುಖಂಡರೊಂದಿಗೆ ಪೂರ್ವಭಾವಿ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ

Date:

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಸಂಘದ ಮುಖಂಡರೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿದರು.

ರೈತರನ್ನು ಉದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, “ಅತಿ ಹೆಚ್ಚು ಉದ್ಯೋಗ ಅವಲಂಬನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆದ್ಯತೆ. ಹಂತ ಹಂತವಾಗಿ ಬೇಡಿಕೆ ಈಡೇರಿಸುತ್ತಲೇ ಇದ್ದೇವೆ. ನಾನು ಸದಾ ರೈತ ಸಮುದಾಯದ ಪರವಾಗಿ ಇರುವೆ” ಎಂದು ತಿಳಿಸಿದರು.

ಸಭೆಯ ಪ್ರಾರಂಭಕ್ಕೂ ಮುನ್ನ ಸಭೆಯಲ್ಲಿ ಭಾಗವಹಿಸಿದ್ದ ವಿವಿಧ ರೈತ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಇದೇ ವೇಳೆ ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್‌ಗಳ ಬಲವಂತದ ವಸೂಲಿಗೆ ಕಡಿವಾಣ ಹಾಕಿದ್ದಕ್ಕಾಗಿ ರೈತ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...