ಎಂಟು ಮಹತ್ವದ ವಿಧೇಯಕಕ್ಕೆ ಸಚಿವ ಸಂಪುಟ ಒಪ್ಪಿಗೆ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಎಂಟು ಮಹತ್ವದ ವಿಧೇಯಕಕ್ಕೆ ಸಂಪುಟ ಒಪ್ಪಿಗೆ ನೀಡಿದೆ.

ದ್ವೇಷ ಭಾಷಣ ಪ್ರತಿಬಂಧಕ ವಿಧೇಯಕ, ಬಯಲುಸೀಮೆ ತಿದ್ದುಪಡಿ ವಿಧೇಯಕ, ಮಲೆನಾಡು ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಧಾರ್ಮಿಕ ದತ್ತಿ ವಿಧೇಯಕ, ಜಾನುವಾರು ಹತ್ಯೆ ಪ್ರತಿಬಂಧಕ ಹತ್ಯೆ ಸಂರಕ್ಷಣೆ ವಿಧೇಯಕ, ಸಾಮಾಜಿಕ‌ಬಹಿಷ್ಕಾರ ನಿಷೇಧ ವಿಧೇಯಕ, ಘಾಟಿ ಸುಬ್ರಮಣ್ಯ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ, ಚಾಮುಂಡೇಶ್ವರಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಮತ್ತು ಇತರೆ ಕಾನೂನುಗಳ (ತಿದ್ದುಪಡಿ) ವಿಧೇಯಕ ಹಾಗೂ ಕರ್ನಾಟಕ ರಾಜ್ಯ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ವಿಧೇಯಕಕ್ಕೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.

ಸಚಿವ ಸಂಪುಟ ಸಭೆ ಬಳಿಕ ಕಾನೂನು ಸಚಿವ ಹೆಚ್‌ ಕೆ ಪಾಟೀಲ್‌ ಅವರು ಸುದ್ದಿಗಾರರ ಜೊತೆ ಮಾತನಾಡಿ, “ಎಂಟು ಮಹತ್ವದ ವಿಧೇಯಕಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ದ್ವೇಷ ಭಾಷಣ, ಸೈದ್ಧಾಂತಿಕ ನಿಲುವುಗಳ ಬಗ್ಗೆ ಸ್ಪಷ್ಟವಾಗಿ ತಿಳಿಸಲಾಗಿದೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇವನಹಳ್ಳಿಯಲ್ಲಿ 1777 ಎಕರೆ ಭೂಮಿ ಅಕ್ವೈರ್ ಮಾಡಿದ್ದೆವು. ರೈತರ ಪ್ರತಿಭಟನೆಯಿಂದ ಕೈಬಿಡಲಾಗಿತ್ತು. ಚನ್ನರಾಯಪಟ್ಟಣ ಹೋಬಳಿ 13 ಗ್ರಾಮಗಳಲ್ಲಿ ಭೂಸ್ವಾಧೀನದಿಂದ ಕೈಬಿಡಲಾಗಿದೆ” ಎಂದು ಸಚಿವರು ತಿಳಸಿದರು.

“ಹೆಬ್ಬಾಳದಿಂದ ಮೇಖ್ರಿ ಯವರೆಗೆ ಅವಳಿ ಸುರಂಗ ರಸ್ತೆ ನಿರ್ಮಾಣಕ್ಕೆ ಪೂರಕವಾಗಿ ಎಲಿವೇಟೆಡ್ ಕಾಮಗಾರಿಗಳ ನಿರ್ಮಾಣ ಮಾಡಲು 2215 ಕೋಟಿ ಅಂದಾಜು ವೆಚ್ಚಕ್ಕೆ ಅನುಮೋದನೆ ನೀಡಲಾಗಿದೆ” ಎಂದರು.

“ಶಾಲಾ ಶಿಕ್ಷಕರಿಗೆ ಟಿಇಟಿ ಪ್ರಮಾಣ ಪತ್ರ ಕಡ್ಡಾಯವಿಲ್ಲ. 1 ರಿಂದ 5ನೇ ತರಗತಿ ಶಿಕ್ಷಕರಿಗೆ ಅನ್ವಯವಿಲ್ಲ. ಅಗತ್ಯ ವಿಷಯಗಳಲ್ಲಿ ಪರಿಣತಿ ಹೊಂದಿದ್ದರೆ ಸಾಕು. ಟಿಇಟಿ ಪ್ರಮಾಣ ಪತ್ರ ಕಡ್ಡಾಯ ಬೇಕಿಲ್ಲ. 800 ಸರ್ಕಾರಿ ಶಾಲೆಗಳ ಉನ್ನತೀಕರಣ ಮಾಡಲಗುವುದು. ಕರ್ನಾಟಕ ಪಬ್ಲಿಕ್ ಶಾಲೆಗಳನ್ನಾಗಿ ಮಾಡಲು ಅವಕಾಶ ನೀಡಲಾಗಿದೆ. ಇದಕ್ಕೆ ಪರಿಷ್ಕೃತ ಡಿಪಿಆರ್ ತಯಾರಿಸುವಂತೆ ಸೂಚನೆ ನೀಡಲಾಗಿದೆ” ಎಂದು ತಿಳಿಸಿದರು.

ಸಚಿವ ಸಂಪುಟ ಪ್ರಮುಖ ನಿರ್ಣಯಗಳು

ಬೆಂಗಳೂರು ಅರಮನೆ ಮೈದಾನದಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ “ಇನ್ವೆಸ್ಟ್ ಕರ್ನಾಟಕ 2025″ದ ಪರಿಷ್ಕೃತ ವೆಚ್ಚ ರೂ.100.70 ಕೋಟಿಗಳಿಗೆ ಘಟನೋತ್ತರ ಅನುಮೋದನೆ

“ಕೇಂದ್ರ ಪುರಸ್ಕೃತ ಯೋಜನೆಯಾದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಗಣಕೀಕರಣ ಯೋಜನೆಯಲ್ಲಿ 5491 ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ (ಪ್ಯಾಕ್ಸ್‌ಗಳ) ಗಣಕೀಕರಣವನ್ನು Satra Service and Solutions Pvt. Ltd. (System Integrators) 4453 ಪ್ಯಾಕ್ಸ್ ಗಳಿಗೆ ರೂ.57ಮೊತ್ತದಲ್ಲಿ ಹಾಗೂ ಮೆ. Choice Consultancy Services Pvt 0 1038 ಪ್ಯಾಕ್ಸ್‌ಗಳನ್ನು ರೂ.13.49 ಕೋಟಿಗಳ Artificial ಹಂಚಿಕೆ ಮಾಡಲು ಆಡಳಿತಾತ್ಮಕ ಅನುಮೋದನೆ

ಅಖಿಲ ಭಾರತ ಸೇವೆಗಳಿಗೆ ಸೇರಿದ ಅಧಿಕಾರಿಗಳಿಗೆ ನಾಗರಿಕ ಸೇವಾ ಮಂಡಳಿ (CSB) ಯನ್ನು ರಚನೆ ನಿರ್ಧಾರ.

ಡಾ. ನವೀನ್ ಕುಮಾರ್ ಜಿ., ನಿವೃತ್ತ ವೈದ್ಯಾಧಿಕಾರಿ, ರಾಜ್ಯಪಾಲರ ಸಚಿವಾಲಯದಲ್ಲಿ ಗುತ್ತಿಗೆ ಅವಧಿಯನ್ನು 1 ವರ್ಷ ಸೇವೆಯನ್ನು ಮುಂದುವರೆಸಿರುವ ಆದೇಶಕ್ಕೆ ಘಟನೋತ್ತರ ಅನುಮೋದನೆ.

ಮೂಲಸೌಲಭ್ಯ ಅಭಿವೃದ್ಧಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ “ಕರ್ನಾಟಕ ಒಳನಾಡು ನೌಕೆ ನಿಯಮಗಳು, 2025″ಕ್ಕೆ ಅನುಮೋದನೆ

ರಾಜೀವ್‌ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲ ಯದ ವತಿಯಿಂದ ಕಲಬುರಗಿ, ಗದಗ, ದಾವಣೆಗೆರೆ, ಮಂಗಳೂರು, ಭೀಮನಕುಪ್ಪೆ (ಬೆಂಗಳೂರಿನ ಕೆಂಗೇರಿ ಹತ್ತಿರ)ಮತ್ತು ಮೈಸೂರಿನಲ್ಲಿ ಅತ್ಯಾಧುನಿಕ ಪ್ರಯೋಗಾಲ ಯಗಳನ್ನು ಕೌಶಲ್ಯ ರೂ.452.89 ಕೋಟಿಗಳ ಅಂದಾಜು ಮೊತ್ತದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ.

ರಾಷ್ಟ್ರೀಯ ಆರೋಗ್ಯ ಅಭಿಯಾನ PM-ABHIM ಯೋಜನೆಯಡಿ ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀನದಲ್ಲಿ ಜಿಲ್ಲಾಸ್ಪತ್ರೆ ಆವರಣದಲ್ಲಿ Critical Care Block ನಿರ್ಮಾಣ ಕಾಮಗಾರಿಗಳನ್ನು ರೂ.28.69 ಕೋಟಿಗಳ ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ 19 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ಸ್ವಂತ ಕಟ್ಟಡ ನಿರ್ಮಾಣವನ್ನು ರೂ.304.00 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ‌ ಅನುಮೋದನೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...