100 ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ

Date:

  • ಹೊಸದಾಗಿ 21 ತಾಲೂಕು ಬರಪೀಡಿತ ಎಂದು ಘೋಷಿಸಲು ಸಭೆ ಒಪ್ಪಿಗೆ
  • ಸಭೆಯ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದ ಸಚಿವ ಎಚ್‌ ಕೆ ಪಾಟೀಲ

2008-09ರಲ್ಲಿ ಗ್ರಾಮ ನ್ಯಾಯಾಲಯ ಸ್ಥಾಪನೆ ಬಗ್ಗೆ ಕಾನೂನು ತರಲಾಗಿತ್ತು. ಅದರಂತೆ 100 ಗ್ರಾಮ ನ್ಯಾಯಾಲಯಗಳ ಸ್ಥಾಪನೆಗೆ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ ಮೂಲಕ ಅನುಮತಿ ನೀಡಿದೆ ಎಂದು ಕಾನೂನು ಸಚಿವ ಎಚ್​ ​ಕೆ ಪಾಟೀಲ್ ತಿಳಿಸಿದರು.

ಸಚಿವ ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಸಭೆಯಲ್ಲಿ ಚರ್ಚೆಯಾದ ವಿಷಯಗಳು ಮತ್ತು ಕೈಗೊಳ್ಳಲಾದ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದರು.

“ಒಟ್ಟು ಕೃಷಿ ತೋಟಗಾರಿಕೆ ನಷ್ಟ 33,770 ಕೋಟಿ ರೂಪಾಯಿ ಆಗಿದ್ದು, ನಾವು ಕೃಷಿ ತೋಟಗಾರಿಕೆ ನಷ್ಟಕ್ಕೆ 4,414 ಕೋಟಿ ಪರಿಹಾರಕ್ಕೆ ಬೇಡಿಕೆ ಇಟ್ಟಿದ್ದೇವೆ. 5,326 ಕೋಟಿ ರೂಪಾಯಿ ಒಟ್ಟು ನಷ್ಟ ಪರಿಹಾರಕ್ಕೆ ಬೇಡಿಕೆ ಇಟ್ಟಿದ್ದೇವೆ. ರಾಜ್ಯ ಮಂತ್ರಿಗಳು ಕೇಂದ್ರ ಮಂತ್ರಿಗಳನ್ನು ಭೇಟಿ ಮಾಡುವುದಕ್ಕೆ ಪದೇ ಪದೇ ಸಮಯ ಕೇಳುತ್ತಿದ್ದಾರೆ” ಎಂದು ಸಚಿವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅನ್ನಭಾಗ್ಯ ಮುಂದುವರಿಸಲು ನಿರ್ಧಾರ

ಅಹಾರ ಇಲಾಖೆಯಿಂದ ಅಕ್ಕಿ ಒದಗಿಸುವ ವ್ಯವಸ್ಥೆ ಬಗ್ಗೆ ಚರ್ಚೆಯಾಗಿದೆ. ಈಗ ಇರುವ ಪದ್ಧತಿಯನ್ನೇ ಮುಂದುವರೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಐದು ಕೆಜಿ ಅಕ್ಕಿ ಕೊಡಬೇಕಾ ಅಥವಾ ನೀಡಲಾಗುತ್ತಿರುವ ಹಣ ಮುಂದುವರಿಸಬೇಕಾ ಎಂಬ ಚರ್ಚೆಯಾಗಿದೆ. ಸದ್ಯದ ಪದ್ದತಿಯನ್ನೇ ಮುಂದುವರಿಸಲು ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ” ಎಂದು ಸಚಿವರು ವಿವರಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಲದ ಗುಂಡಿಗೆ ಮನುಷ್ಯರನ್ನು ಇಳಿಸುವುದು ‘ವಿಶ್ವಗುರು’ವಿಗೆ ಶೋಭೆಯಲ್ಲ

ಹೊಸದಾಗಿ 21 ತಾಲೂಕು ಬರಪೀಡಿತ

ನೈರುತ್ಯ ಮುಂಗಾರಿನಲ್ಲಿ ಮಳೆ ಕೊರತೆಯಿಂದ ಬರಗಾಲ ಘೋಷಣೆ ಮಾಡಲಾಗಿದೆ. 195 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡಿದ್ದೆವು. ಇದರ ಜೊತೆಗೆ 21 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಮಾಡಲಾಗಿದೆ. ಹೊಸದಾಗಿ 21 ತಾಲೂಕು ಬರಪೀಡಿತ ಎಂದು ಘೋಷಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಹೇಳಿದರು.

ಬರಲಿದೆ ರಾಜ್ಯ ಅನಿಲ ನೀತಿ

“ವಾಹನಗಳ ಸಿಎನ್​ಜಿ, ಗೃಹ ಬಳಕೆಯ ಪಿಎನ್​ಜಿ ಬಳಕೆಗೆ ರಾಜ್ಯ ಅನಿಲ ನೀತಿ ರೂಪಿಸಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಸಿಟಿ ಗ್ಯಾಸ್ ​​​​ಡಿಸ್ಟ್ರಿಬ್ಯೂಷನ್ ನೆಟ್​​ವರ್ಕ್ ​ಪಾಲಿಸಿಗೆ ಅನುಮೋದನೆ ನೀಡಲಾಗಿದೆ” ಎಂದು ಎಚ್‌ ಕೆ ಪಾಟೀಲ್‌ ಹೇಳಿದರು.

ಸಚಿವ ಸಂಪುಟದ ಇನ್ನಿತರ ನಿರ್ಧಾರಗಳು

  • ಲಿಂಗತ್ವ ಅಲ್ಪಸಂಖ್ಯಾತರಿಗೂ ಗೃಹಲಕ್ಷ್ಮೀ ಯೋಜನೆ ವಿಸ್ತರಣೆ
  • ಪೊಲೀಸ್ ತರಬೇತಿ ಶಾಲೆಗಳ ಬಲವರ್ಧನೆಗೆ ಅಗತ್ಯ ಸಾಮಗ್ರಿ ಒದಗಿಸಲು 20 ಕೋಟಿ ರೂ. ಆಡಳಿತಾತ್ಮಕ ಅನುಮೋದನೆ
  • ಬೆಳಗಾವಿಯ ಸುವರ್ಣಸೌಧದಲ್ಲೇ ಅಧಿವೇಶನ ನಡೆಸುವ ಬಗ್ಗೆ ಚರ್ಚೆ, ಅಧಿವೇಶನದ ದಿನಾಂಕ ನಿಗದಿ ಮಾಡುವ ಅಧಿಕಾರ ಸಿಎಂ ವಿವೇಚನೆಗೆ
  • ಕೃಷಿ ಇಲಾಖೆಯಿಂದ ರಸಗೊಬ್ಬರ ದಾಸ್ತಾನಿಗೆ 200 ಕೋಟಿ ರೂ. ಬಂಡವಾಳ ಸಾಲ ತೆಗೆದುಕೊಳ್ಳಲು ಸರ್ಕಾರಿ ಖಾತರಿಗೆ ಅನುಮತಿ
  • ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ 192 ಕೋಟಿ ರೂ. ಅನುದಾನದಲ್ಲಿ 450 ಆಸನಗಳ ಬೋಧನಾ ವ್ಯವಸ್ಥೆ ಕಲ್ಪಿಸಲು ಸಚಿವ ಸಂಪುಟ ಸಭೆ ಒಪ್ಪಿಗೆ.
  • ಸಾರಿಗೆ ಇಲಾಖೆಯಲ್ಲಿ ಹುಬ್ಬಳ್ಳಿಯ ಗೋಕುಲ ರಸ್ತೆಯ ಬಸ್‌ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ತೀರ್ಮಾನ ಹಾಗೂ ಧಾರವಾಡದ ಹಳೆಯ ಸಾರಿಗೆ ಬಸ್‌ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸಲು ಆಡಳಿತಾತ್ಮಕ ಅನುಮೋದನೆ.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...