ಕೋವಿಡ್ ಭ್ರಷ್ಟಾಚಾರ ಕುರಿತ ವರದಿ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಕ್ರಮ: ಸಿದ್ದರಾಮಯ್ಯ

Date:

ಕೋವಿಡ್ ಸಂದರ್ಭದಲ್ಲಿ ಆಗಿರುವ ಭ್ರಷ್ಟಾಚಾರ ಕುರಿತ ವರದಿ ಸಲ್ಲಿಕೆಯಾಗಿದ್ದು ಈ ಬಗ್ಗೆ ಗುರುವಾರ ಸಚಿವ ಸಂಪುಟ ಸಭೆ ಕರೆಯಲಾಗಿದೆ. ಅಂದು ವರದಿ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು (ಸೆ.3) ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ಸಂಸದ ಸುಧಾಕರ್ ಅವರು ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಏಕೆ ಮುಟ್ಟಿ ನೋಡಿಕೊಳ್ಳುತ್ತಾರೆ” ಎಂದು ಪ್ರಶ್ನಿಸಿದರು.

“ವರದಿಯಲ್ಲಿ ಏನಿದೆ ಎಂದು ನನಗೆ ತಿಳಿದಿಲ್ಲ. ತಪ್ಪು ಮಾಡಿರುವುದರಿಂದ ಚಡಪಡಿಸುತ್ತಿದ್ದಾರೆ. ಸುಳ್ಳು ವರದಿ ತರಸಿಕೊಂಡಿದ್ದಾರೆ ಎಂದು ಹೇಳಿಕೆ ನೀಡಲು ವರದಿ ಬಹಿರಂಗವಾಗಿಲ್ಲ. ಆದರೂ ಈ ರೀತಿ ಹೇಳಿಕೆ ನೀಡುತ್ತಾರೆ ಎಂದರೆ ಮನಸ್ಥಿತಿ ಏನಾಗಿದೆ ತಿಳಿಯುತ್ತದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏಳು ಸಾವಿರ ಕೋಟಿ ರೂಪಾಯಿ ಭ್ರಷ್ಟಾಚಾರ ಆಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, “ವರದಿ ಬಗ್ಗೆ ನನಗೆ ತಿಳಿದಿಲ್ಲ, ಸಚಿವ ಸಂಪುಟದಲ್ಲಿ ಚರ್ಚಿಸಿ ತೀರ್ಮಾನ ಮಾಡಲಾಗುವುದು” ಎಂದರು.

“ಸರ್ಕಾರ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವನ್ನು ರಚಿಸಿದ್ದು, ಇದಕ್ಕೆ ರಾಜಮಾತೆ ಪ್ರಮೋದಾದೇವಿಯವರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ಆಗಸ್ಟ್ 22 ರಂದು ತಡೆಯಾಜ್ಞೆ ತೆರವುಗೊಂಡಿದೆ. ನ್ಯಾಯಾಲಯದ ತೀರ್ಮಾನವಾದಂತೆ ಕ್ರಮ ತೆಗೆದುಕೊಳ್ಳಲಾಗಿದೆ” ಎಂದು ತಿಳಿಸಿದರು.

ತಪ್ಪು ಮಾಡಿದವರ ಮೇಲೆ ಕ್ರಮ

ಮುಡಾ ಹಿಂದಿನ ಆಯುಕ್ತ ದಿನೇಶ್ ಕುಮಾರ್ ಅವರನ್ನು ಸರ್ಕಾರ ಅಮಾನತು ಮಾಡಿರುವ ಬಗ್ಗೆ ಮಾತನಾಡಿ, “ನಗರಾಭಿವೃದ್ಧಿ ಇಲಾಖೆ ಅಮಾನತು ಮಾಡಿದೆ. ಇಬ್ಬರೂ ಆಯುಕ್ತರ ಮೇಲೆ ಆರೋಪ ಕೇಳಿಬಂದಿತ್ತು. ಒಬ್ಬರನ್ನು ಮಾತ್ರ ಅಮಾನತು ಮಾಡಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿ ಆಯೋಗ ರಚಿಸಲಾಗಿದ್ದು, ಅವರ ವರದಿ ಪ್ರಕಾರ ಯಾರು ತಪ್ಪು ಮಾಡಿದ್ದರೂ ಅವರ ಮೇಲೆ ಕ್ರಮ ವಹಿಸಲಾಗುವುದು” ಎಂದರು.

2009ರ ಹಿಂದಿನ ಬಡಾವಣೆಗಳಿಗೆ 50:50 ಅನುಪಾತ ಅನ್ವಯವಾಗುವುದಿಲ್ಲವಾದರೂ ಅನ್ವಯ ಮಾಡಿದ್ದಾರೆ ಎಂದು ಅಮಾನತು ಆದೇಶದಲ್ಲಿ ಇದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, “ಈ ಬಗ್ಗೆ ನನಗೆ ಮಾಹಿತಿ ಇಲ್ಲ” ಎಂದರು.

ಅಂಗನವಾಡಿ ಕಾರ್ಯಕರ್ತೆಯರಿಗೆ ವೇತನ ವಿಳಂಬ: ಪರಿಶೀಲನೆ

“ಅಂಗನವಾಡಿ ಕಾರ್ಯಕರ್ತೆಯರಿಗೆ ಮೂರು ತಿಂಗಳಿನಿಂದ ಸಂಬಳ ದೊರೆತಿಲ್ಲದಿರುವ ಬಗ್ಗೆ ಮಾತನಾಡಿ, “ಸಂಬಳ ನೀಡಲಾಗಿದೆ. ಈ ಬಗ್ಗೆ ಪರಿಶೀಲಿಸಲಾಗುವುದು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...