ಕಾಡಿನಂಚಿನ ಪ್ರದೇಶದಲ್ಲಿ ಕ್ಯಾಮೆರಾ ಅಳವಡಿಕೆ, ಹುಲಿ ಸಂಚಾರದ ಮೇಲೆ 24*7 ನಿಗಾ: ಈಶ್ವರ ಖಂಡ್ರೆ

Date:

ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯಲ್ಲಿ ಹುಲಿಗಳು ಪದೇಪದೆ ದಾಳಿ ಮಾಡುತ್ತಿರುವ ಹಿನ್ನೆಲೆಯಲ್ಲಿ ಕಾಡಿನಂಚಿನ ಪ್ರದೇಶದಲ್ಲಿ ಕ್ಯಾಮರಾ ಅಳವಡಿಸಿ, ಹುಲಿಗಳ ಸಂಚಾರದ ಮೇಲೆ 24*7 ನಿಗಾ ಇಟ್ಟು, ಸ್ಥಳೀಯರಿಗೆ ಸಕಾಲಿಕ ಮಾಹಿತಿ ನೀಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ.

ಅರಣ್ಯ ಭವನದಲ್ಲಿ ಬುಧವಾರ ಮಾನವ-ವನ್ಯಜೀವಿ ಸಂಘರ್ಷ ಕುರಿತಂತೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾಥಣಾಡಿದ ಅವರು, “ರೈತರು ತಮ್ಮ ಹೊಲ, ಗದ್ದೆ, ತೋಟದಲ್ಲಿ ಕೆಲಸಕ್ಕೆ ಬರುತ್ತಾರೆ. ಈ ವೇಳೆ ವನ್ಯಜೀವಿಗಳು ದಾಳಿ ಮಾಡುತ್ತಿವೆ. ಹೀಗಾಗಿ ಜನ ವಸತಿ, ರೈತರ ಜಮೀನಿನ ಬಳಿ ಕ್ಯಾಮರಾ ಅಳವಡಿಸಿ ನಿಗಾ ಇಟ್ಟು ಮುನ್ನೆಚ್ಚರಿಕೆ ನೀಡಿದರೆ ಜೀವಹಾನಿ, ಬೆಳೆ ಹಾನಿ ತಪ್ಪಿಸಿ. ಮಾನವ-ವನ್ಯಜೀವಿ ಸಮಸ್ಯೆಗೆ ಅಲ್ಪಾವಧಿ ಮತ್ತು ದೀರ್ಘಕಾಲೀನ ಪರಿಹಾರ ಕ್ರಮಗಳನ್ನು ರೂಪಿಸಿ. ಥರ್ಮಲ್ ಕ್ಯಾಮರಾಗಳ ನೆರವಿನಿಂದ ನಿಗಾ ಇಡುವುದರ ಜೊತೆಗೆ ಗಸ್ತು ಹೆಚ್ಚಳ ಮಾಡಿ” ಎಂದು ಸೂಚನೆ ನೀಡಿದರು.

“ಬಂಡೀಪುರ ಮತ್ತು ನಾಗರಹೊಳೆಯ ಕಾಡಿನಂಚಿನಲ್ಲಿ ಇರುವ ಗ್ರಾಮಗಳ ಪೈಕಿ ಯಾವ ಗ್ರಾಮದಲ್ಲಿ ಹೆಚ್ಚು ಸಂಘರ್ಷ ಇದೆ ಎಂಬುದನ್ನು ಗುರುತಿಸಿ, 5-6 ಕಿಲೋ ಮೀಟರ್ ದೂರದಲ್ಲಿ ಒಂದು ಅರಣ್ಯ ಗಸ್ತು ಶಿಬಿರ ಸ್ಥಾಪಿಸಿ, ಸ್ಥಳೀಯ ಯುವಕರನ್ನೂ ನೇಮಿಸಿಕೊಂಡು ನಿಗಾ ಇಡಲು ಕ್ರಮ ಕೈಗೊಳ್ಳಿ. ಇದು ಸಮರೋಪಾದಿಯಲ್ಲಿ ಆಗಬೇಕು. ಯಾವುದೇ ಗ್ರಾಮದ ಬಳಿ ಹುಲಿ ಜಾನುವಾರುಗಳ ಮೇಲೆ ದಾಳಿ ಮಾಡಿದರೆ ಕೂಡಲೇ ಅಲ್ಲಿಗೆ ಆನೆಗಳ ಸಹಿತ ರಕ್ಷಣಾ ತಂಡ ರವಾನಿಸಿ ಕಾರ್ಯಾಚರಣೆ ನಡೆಸಬೇಕು. ಹುಲಿಗಳು ಗಾಯಗೊಂಡಿದ್ದರೆ ಅಥವಾ ವಯಸ್ಸಾಗಿದ್ದರೆ ಅಂತಹ ಹುಲಿಗಳನ್ನು ಸೆರೆ ಹಿಡಿಯಲು ಕ್ರಮ ವಹಿಸಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾನವ-ವನ್ಯಜೀವಿ ಸಂಘರ್ಷ ಇರುವ ಕಾನನ ಪ್ರದೇಶಕ್ಕೆ ಹಿರಿಯ ಅಧಿಕಾರಿಗಳನ್ನು ನೋಡಲ್ ಅಧಿಕಾರಿಯಾಗಿ ನಿಯೋಜಿಸಿ, ಅವರು ಸ್ಥಳದಲ್ಲಿ ಮೊಕ್ಕಾಂಹೂಡಿ ಸಮಸ್ಯೆ ಪರಿಹರಿಸಬೇಕು. ಹೆಚ್ಚುತ್ತಿರುವ ವನ್ಯಜೀವಿಗಳಿಗೆ ಅನುಗುಣವಾಗಿ ಕಾನನ ಪ್ರದೇಶ ಇದೆಯೇ. ಈ ವನ್ಯಜೀವಿಧಾಮಗಳ ಪರಿಸರ ಧಾರಣಾ ಸಾಮರ್ಥ್ಯದ ಬಗ್ಗೆ ಅಧ್ಯಯನ ಮಾಡಿ ವರದಿ ನೀಡಲು ತಜ್ಞರ ತಂಡವನ್ನು ರಚಿಸಿ, ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬರುವುದಕ್ಕೆ ಕಾರಣವೇನು ಎಂಬ ಬಗ್ಗೆ ಸಮಿತಿ ಅಧ್ಯಯನ ವರದಿ ನೀಡಬೇಕು. ಆ ವರದಿ ಆಧರಿಸಿ ನಾವು ಮುಂದಿನ ಕ್ರಮ ಕೈಗೊಳ್ಳಲು ಅನುಕೂಲವಾಗುತ್ತದೆ” ಎಂದು ಸಚಿವರು ತಿಳಿಸಿದರು.

ಸನ್ನಾ, ಲಂಟನಾ ತೆರವಿಗೆ ಸೂಚನೆ

“ಸನ್ನಾ ಮತ್ತು ಲಂಟನಾ ಕಳೆ ವ್ಯಾಪಕವಾಗಿ ಅರಣ್ಯದಲ್ಲಿ ಬೆಳೆದಿದ್ದು, ಇದರಿಂದ ಸಸ್ಯಹಾರಿ ಪ್ರಾಣಿಗಳಿಗೆ ಹುಲ್ಲು ಸಿಗದಂತಾಗಿದೆ. ಇದರಿಂದ ಆನೆಗಳು ಹೊರಬರುತ್ತಿವೆ. ಕಾಡಿನ ಸ್ವರೂಪವನ್ನೇ ನಾಶ ಮಾಡುತ್ತಿರುವ ಲಂಟನಾ, ಸನ್ನಾ ತೆರವಿಗೆ ವೈಜ್ಞಾನಿಕವಾಗಿ ಕ್ರಮ ಕೈಗೊಳ್ಳಿ, ಬೇರೆ ರಾಜ್ಯಗಳು ಸನ್ನಾ, ಲಂಟನಾ ತೆರವಿಗೆ ಕೈಗೊಂಡಿರುವ ಕ್ರಮಗಳ ಅಧ್ಯಯನ ಮಾಡಿ, ಉತ್ತಮ ರೂಢಿ ಅಳವಡಿಸಿಕೊಳ್ಳಿ” ಎಂದರು.

ಸಭೆಯಲ್ಲಿ ಪ್ರಧಾನಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕ ಪಿ.ಸಿ. ರೇ ಹಾಗೂ ಉನ್ನತಾಧಿಕಾರಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...