ಕ್ಯಾಂಪಸ್ ಚುನಾವಣೆ | ವಿದ್ಯಾರ್ಥಿ ಸಂಘಗಳ ಮರುಸ್ಥಾಪನೆಗೆ SIO ಆಗ್ರಹ

Date:

ಕರ್ನಾಟಕದ ವಿವಿಧ ಕ್ಯಾಂಪಸ್‌ಗಳಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆಗಳ ಕುರಿತು ವಿದ್ಯಾರ್ಥಿಗಳ ಅಭಿಪ್ರಾಯವನ್ನು ಸಂಗ್ರಹಿಸಲು ನಡೆಸಲಾದ ರಾಜ್ಯಮಟ್ಟದ ಸಮೀಕ್ಷೆಯ ವರದಿಯನ್ನು ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (ಎಸ್‌ಐಒ) ಕರ್ನಾಟಕ ರಾಜ್ಯ ಘಟಕ ಇಂದು ಬಿಡುಗಡೆ ಮಾಡಿದೆ. ಗೂಗಲ್ ಫಾರ್ಮ್ಸ್ ಮೂಲಕ ನಡೆಸಲಾದ ಈ ಸಮೀಕ್ಷೆಯು ಉನ್ನತ ಶಿಕ್ಷಣ ಸಂಸ್ಥೆಗಳ ಪ್ರಮುಖ ಪಾಲುದಾರರಾದ ವಿದ್ಯಾರ್ಥಿಗಳ ಅಭಿಪ್ರಾಯವನ್ನು ಮುಂದಿಟ್ಟಿದೆ.

ಸಮೀಕ್ಷೆಯ ವರದಿಯ ಪ್ರಕಾರ, ಬಹುಪಾಲು ಪ್ರತಿಕ್ರಿಯೆಗಳು ಖಾಸಗಿ ಅನುದಾನರಹಿತ ಸಂಸ್ಥೆಗಳಿಂದ ಬಂದಿವೆ. ಇಂತಹ ಸಂಸ್ಥೆಗಳಲ್ಲಿ ಆಡಳಿತ ಮಂಡಳಿಯ ನಿಯಂತ್ರಣ ಹೆಚ್ಚಾಗಿದ್ದು, ವಿದ್ಯಾರ್ಥಿ ಪ್ರಾತಿನಿಧ್ಯವು ರಾಜ್ಯದ ಕಾನೂನು ಚೌಕಟ್ಟಿಗಿಂತ ಹೆಚ್ಚಾಗಿ ಆಂತರಿಕ ನೀತಿಗಳಿಗೆ ಒಳಪಟ್ಟಿದೆ. ಹೆಚ್ಚಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಸಂಘದ ಚುನಾವಣೆಗಳ ಪ್ರಾಮುಖ್ಯತೆಯ ಅರಿವಿದ್ದರೂ, ಅದರ ನಿಯಮಗಳು, ರಚನೆ ಮತ್ತು ಕಾನೂನು ಚೌಕಟ್ಟಿನ ಬಗ್ಗೆ ತಿಳಿವಳಿಕೆ ಸೀಮಿತವಾಗಿದೆ. ಆದ್ದರಿಂದ, ಚುನಾವಣೆಗಳನ್ನು ನಡೆಸುವ ಮೊದಲು ಸೂಕ್ತ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಅಗತ್ಯವಿದೆ ಎಂದು ಎಸ್‌ಐಒ ಕರ್ನಾಟಕ ಒತ್ತಿ ಹೇಳಿದೆ.

ಸಮೀಕ್ಷೆಯ ಪ್ರಮುಖ ಅಂಶಗಳು:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕ್ಯಾಂಪಸ್‌ಗಳಲ್ಲಿ ಪ್ರಜಾಪ್ರಭುತ್ವದ ವಾತಾವರಣವನ್ನು ಕಾಪಾಡಲು ವಿದ್ಯಾರ್ಥಿ ಸಂಘದ ಚುನಾವಣೆಗಳು ಅತ್ಯಗತ್ಯ ಎಂದು ಬಹುಪಾಲು ವಿದ್ಯಾರ್ಥಿಗಳು ನಂಬಿದ್ದಾರೆ.

ವಿದ್ಯಾರ್ಥಿ ಸಂಘಗಳನ್ನು ನಾಯಕತ್ವದ ಬೆಳವಣಿಗೆ, ಉತ್ತರದಾಯಿತ್ವ ಮತ್ತು ವಿದ್ಯಾರ್ಥಿಗಳು ಹಾಗೂ ಆಡಳಿತ ಮಂಡಳಿಯ ನಡುವಿನ ಸಂವಹನ ವೇದಿಕೆಯಾಗಿ ವಿದ್ಯಾರ್ಥಿಗಳು ನೋಡುತ್ತಿದ್ದಾರೆ.

ಚುನಾವಣೆಗಳು ಹಿಂಸಾಚಾರ, ಗೊಂದಲ ಮತ್ತು ಬಾಹ್ಯ ರಾಜಕೀಯ ಹಸ್ತಕ್ಷೇಪದಿಂದ ಮುಕ್ತವಾಗಿರಲು ರಾಜ್ಯ ಸರ್ಕಾರವು ಸ್ಪಷ್ಟ ಮಾರ್ಗಸೂಚಿಗಳನ್ನು ರೂಪಿಸಬೇಕೆಂದು ವಿದ್ಯಾರ್ಥಿಗಳು ಆಶಿಸಿದ್ದಾರೆ.

ಚುನಾವಣಾ ಪ್ರಚಾರದ ವೆಚ್ಚಕ್ಕೆ ಮಿತಿ ಹೇರಬೇಕು ಎಂದು ಬಹುತೇಕರು ಅಭಿಪ್ರಾಯಪಟ್ಟಿದ್ದಾರೆ. ಅನಿಯಂತ್ರಿತ ವೆಚ್ಚವು ಸಂಘರ್ಷಗಳಿಗೆ ಕಾರಣವಾಗಬಹುದು ಮತ್ತು ಶೈಕ್ಷಣಿಕ ವಾತಾವರಣವನ್ನು ಹಾಳುಮಾಡಬಹುದು ಎಂಬ ಆತಂಕವನ್ನು ವಿದ್ಯಾರ್ಥಿಗಳು ವ್ಯಕ್ತಪಡಿಸಿದ್ದಾರೆ.

ಕ್ಯಾಂಪಸ್ ರಾಜಕೀಯವು ಭಾರತಕ್ಕೆ ಸೀತಾರಾಂ ಯೆಚೂರಿ, ಲಾಲೂ ಪ್ರಸಾದ್ ಯಾದವ್, ಅರುಣ್ ಜೇಟ್ಲಿ, ನಿರ್ಮಲಾ ಸೀತಾರಾಮನ್, ಎಂ.ಕೆ. ಸ್ಟಾಲಿನ್ ಮತ್ತು ಮಮತಾ ಬ್ಯಾನರ್ಜಿ ಅವರಂತಹ ದಿಗ್ಗಜ ನಾಯಕರನ್ನು ನೀಡಿದೆ. ಕರ್ನಾಟಕದಲ್ಲೂ ಡಿ.ಕೆ. ಶಿವಕುಮಾರ್, ಬಿ.ಕೆ. ಹರಿಪ್ರಸಾದ್, ಕೆ.ಆರ್. ರಮೇಶ್ ಕುಮಾರ್, ಸಲೀಂ ಅಹಮದ್, ಎನ್.ಎ. ಹ್ಯಾರಿಸ್ ಮತ್ತು ರಿಜ್ವಾನ್ ಅರ್ಷದ್ ಅವರಂತಹ ನಾಯಕರು ಕ್ಯಾಂಪಸ್ ರಾಜಕೀಯದ ಮೂಲಕವೇ ಬೆಳೆದು ಬಂದಿದ್ದಾರೆ.

ಕ್ಯಾಂಪಸ್ ಚುನಾವಣೆಗಳಿಗೆ ಬೆಂಬಲ ಸೂಚಿಸಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯನ್ನು ಎಸ್‌ಐಒ ಕರ್ನಾಟಕದ ರಾಜ್ಯ ಕಾರ್ಯದರ್ಶಿ ಮೊಹಮ್ಮದ್ ಹಯ್ಯಾನ್ ಸ್ವಾಗತಿಸಿದ್ದಾರೆ. “ವಿದ್ಯಾರ್ಥಿಗಳಲ್ಲಿ ರಾಜಕೀಯ ಅರಿವು, ಸಾಮಾಜಿಕ ಜವಾಬ್ದಾರಿ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸಲು ಕ್ಯಾಂಪಸ್ ಚುನಾವಣೆಗಳು ಅತ್ಯಗತ್ಯ,” ಎಂದು ಅವರು ಪುನರುಚ್ಚರಿಸಿದ್ದಾರೆ.

ಎಸ್‌ಐಒ ಕರ್ನಾಟಕದ ನಿಯೋಗವು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವರಾದ ಶರಣಪ್ರಕಾಶ್ ಪಾಟೀಲ್ ಮತ್ತು ಎಂ.ಸಿ. ಸುಧಾಕರ್ ಅವರಿಗೆ ಮನವಿ ಪತ್ರ ಸಲ್ಲಿಸಿದೆ. ಅಲ್ಲದೆ, ವಿದ್ಯಾರ್ಥಿ ಸಂಘಟನೆಯಿಂದಲೇ ನಾಯಕರಾಗಿ ಉದಯಿಸಿದ ಶಾಸಕ ರಿಜ್ವಾನ್ ಅರ್ಷದ್ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಚರ್ಚಿಸಲಾಗಿದೆ.

ಈ ನಿಯೋಗದಲ್ಲಿ ಎಸ್‌ಐಒ ರಾಜ್ಯ ಅಧ್ಯಕ್ಷ ಎಸ್. ಆದಿ ಅಲ್ ಹಸನ್, ರಾಜ್ಯ ಕಾರ್ಯದರ್ಶಿಗಳಾದ ಮೊಹಮ್ಮದ್ ಹಯ್ಯಾನ್ ಮತ್ತು ಅಬೂಬಕರ್ ಸಿದ್ದಿಕ್ ಉಪಸ್ಥಿತರಿದ್ದರು.

ಎಸ್‌ಐಒ ಮುಖ್ಯ ಬೇಡಿಕೆಗಳು:

ಲಿಂಗ್ಡೋ ಸಮಿತಿಯ ಶಿಫಾರಸುಗಳನ್ನು ಇಂದಿನ ಕಾಲಕ್ಕೆ ತಕ್ಕಂತೆ ಆಧುನೀಕರಿಸಬೇಕು. ಆರಂಭದಲ್ಲಿ ಪ್ರಾಯೋಗಿಕವಾಗಿ (Pilot mode) ಚುನಾವಣೆಗಳನ್ನು ನಡೆಸಬೇಕು. ಚುನಾವಣಾ ವೆಚ್ಚಕ್ಕೆ ಮಿತಿ ಮತ್ತು ಅಭ್ಯರ್ಥಿಗಳಿಗೆ ವಯೋಮಿತಿ ನಿಗದಿಪಡಿಸಬೇಕು. ಶಿಕ್ಷಣ ತಜ್ಞರು, ನಾಗರಿಕ ಸಮಾಜ ಮತ್ತು ವಿದ್ಯಾರ್ಥಿ ಸಂಘಟನೆಗಳೊಂದಿಗೆ ಸಮಾಲೋಚನೆ ನಡೆಸಬೇಕು ಎಂದು ಎಸ್ ಐ ಒ ಆಗ್ರಹಿಸಿದೆ.

ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮರುಸ್ಥಾಪಿಸಲು ಸರ್ಕಾರವು ಶೀಘ್ರದಲ್ಲೇ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ನಡೆಸಲಿದೆ ಎಂದು ಎಸ್‌ಐಒ ಕರ್ನಾಟಕ ಭರವಸೆ ವ್ಯಕ್ತಪಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...