ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ 20 ಲಕ್ಷ ನಕಲಿ ಕಾರ್ಡ್‌ಗಳ ರದ್ದು: ಸಚಿವ ಸಂತೋಷ್ ಲಾಡ್

Date:

ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ 20 ಲಕ್ಷ ನಕಲಿ ಕಾರ್ಡ್‌ಗಳನ್ನು ರದ್ದುಪಡಿಸಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ.

ವಿಧಾನಸಭೆಯ ಪ್ರಶೋತ್ತರದ ಅವಧಿಯಲ್ಲಿ ಹುಬ್ಬಳ್ಳಿ-ಧಾರವಾಡ ಕೇಂದ್ರೀಯ ಕ್ಷೇತ್ರದ ಶಾಸಕ ಮಹೇಶ್ ತೆಂಗಿನಕಾಯಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, “ಮಂಡಳಿಯಲ್ಲಿ 56 ಲಕ್ಷ ಮಂದಿ ನೋಂದಣಿಯಾಗಿದ್ದರು. ಮನೆಮನೆಗೆ ತೆರಳಿ ತಪಾಸಣೆ ಮಾಡಿದಾಗ 26 ಲಕ್ಷ ನಕಲಿ ಕಾರ್ಡ್‌ಗಳನ್ನು ರದ್ದುಪಡಿಸಲಾಗಿದೆ. ಅದರ ಬಳಿಕ 30 ಲಕ್ಷ ಕಾರ್ಡ್‌ಗಳು ಉಳಿದುಕೊಂಡಿವೆ. ಕಾರ್ಮಿಕರಿಗೆ ಸೌಲಭ್ಯಗಳನ್ನು ನೀಡಲು ನಮ್ಮ ಸರ್ಕಾರದಲ್ಲಿ ಹಣಕಾಸಿನ ಕೊರತೆ ಇಲ್ಲ” ಎಂದು ಸ್ಪಷ್ಟಪಡಿಸಿದರು.

ಶಾಸಕ ಆರಗ ಜ್ಞಾನೇಂದ್ರ ಮಾತನಾಡಿ, “ಕಾರ್ಮಿಕ ಇಲಾಖೆಯಲ್ಲಿ ಸಿಬ್ಬಂದಿ ಹಾಗೂ ಅಧಿಕಾರಿಗಳ ಕೊರತೆಯಿದೆ. ಮಲೆನಾಡು ಭಾಗದಂತಹ ಪ್ರದೇಶಗಳಲ್ಲಿ ಮನೆಮನೆಗೆ ತೆರಳಿ ತಪಾಸಣೆ ನಡೆಸಲು ಕಷ್ಟದ ವಾತಾವರಣವಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ಸ್ಪಷ್ಟನೆ ನೀಡಿದ ಸಚಿವರು, “ಅಂಬೇಡ್ಕರ್ ಸೇವಾ ಕೇಂದ್ರಗಳೆಂದು ತೆರೆಯಲಾಗಿದೆ. 43 ವಾಹನಗಳಲ್ಲಿ ಅಧಿಕಾರಿಗಳು, ಸಿಬ್ಬಂದಿಗಳು ಮನೆಮನೆಗೆ ತೆರಳಿ ಅರ್ಜಿ ಸಲ್ಲಿಸಿದ ಫಲಾನುಭವಿಗಳ ನೈಜತೆಯನ್ನು ಪರಿಶೀಲನೆ ಮಾಡಲಿದ್ದಾರೆ. ಅರ್ಹರ ಸೌಲಭ್ಯಗಳು ವಂಚನೆಯಾಗಬಾರದು. ಹಾಗೆಯೇ ಅನರ್ಹರಿಗೆ ಸೌಲಭ್ಯ ಸಿಗಬಾರದು ಎಂಬುದು ನಮ್ಮ ಸರ್ಕಾರದ ಉದ್ದೇಶ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...