ಹಾಸನದಲ್ಲಿ ದಲಿತರ ಮೇಲೆ ಜಾತಿ ದೌರ್ಜನ್ಯ, ಹಲ್ಲೆ: ಆರೋಪಿಗಳ ಬಂಧನಕ್ಕೆ ಡಿಎಚ್‌ಎಸ್ ಆಗ್ರಹ

Date:

ಹಾಸನ ತಾಲ್ಲೂಕು ಕಟ್ಟಾಯ ಹೋಬಳಿಯ ಚನ್ನಂಗಿಹಳ್ಳಿ ಗ್ರಾಮದಲ್ಲಿ ದಲಿತ ಸಮುದಾಯದ ಇಬ್ಬರು ಮಹಿಳೆಯರು ಮತ್ತು ಯುವಕನ ಮೇಲೆ ಜಾತಿ ದೌರ್ಜನ್ಯವೆಸಗಿ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ

ಚನ್ನಂಗಿಹಳ್ಳಿ ಗ್ರಾಮದ ದಲಿತ ಸಮುದಾಯದ ಮಹಿಳೆಯರಾದ ಕಮಲಮ್ಮ, ರಾಜಮ್ಮ ಹಾಗೂ ಯುವಕ ಕಿರಣ್ ಕುಮಾರ್ ಮೇಲೆ ಜುಲೈ 22 ರಂದು ಸಂಜೆ ಜಾತಿ ದೌರ್ಜನ್ಯದ ಜೊತೆ ದೈಹಿಕವಾಗಿ ಹಲ್ಲೆ ನಡೆಸಲಾಗಿದೆ. ಹಲ್ಲೆ ನಡೆಸಿದ ಆರೋಪಿಗಳಾದ ಅಣ್ಣೇಗೌಡ ಮತ್ತು ಆತನ ಮಗ ಹರೀಶ್ ವಿರುದ್ಧ ಗೊರೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಕಮಲಮ್ಮ ಅವರು ಗ್ರಾಮದ ನಂಜೇಗೌಡ ಎಂಬುವವರ ಜಮೀನನ್ನು ಪಾಲಿಗೆ ಪಡೆದಿದ್ದು, ಜುಲೈ 22ರ ಸಂಜೆ 4.30ರ ಸುಮಾರಿಗೆ ದನ ಮೇಯಿಸಲು ಜಮೀನಿಗೆ ತೆರಳಿದ್ದರು. ಈ ವೇಳೆ ಜಮೀನಿನಲ್ಲಿ ಸೌದೆ ಹಾಕಿದ್ದ ಅಣ್ಣೇಗೌಡನನ್ನು ಸೌದೆ ಎತ್ತಿಕೊಳ್ಳಲು ಕೇಳಿದಾಗ, ಆತ ಕಮಲಮ್ಮನ ಮೇಲೆ ದಾಳಿ ಮಾಡಿ, ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ. ಇದನ್ನು ವಿರೋಧಿಸಿದ ಕಮಲಮ್ಮ ಅವರನ್ನು ದೊಣ್ಣೆಯಿಂದ ಹೊಡೆದು ಗಾಯಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಉಪರಾಷ್ಟ್ರಪತಿ ಚುನಾವಣೆ; ಆತ್ಮಸಾಕ್ಷಿ ಮತಕ್ಕೆ ಗೆಲುವಾಗಲಿ

ಈ ಘಟನೆಯನ್ನು ತಿಳಿದು ಪ್ರಶ್ನಿಸಲು ಅಣ್ಣೇಗೌಡನ ಮನೆಗೆ ತೆರಳಿದ ಕಮಲಮ್ಮನ ತಂಗಿ ರಾಜಮ್ಮನಿಗೂ ಜಾತಿ ನಿಂದನೆ ನಡೆಸಿ ದೈಹಿಕವಾಗಿ ಹಲ್ಲೆ ನಡೆಸಲಾಗಿದೆ. ರಾಜಮ್ಮನನ್ನು ರಕ್ಷಿಸಲು ಮುಂದಾದ ಕಮಲಮ್ಮನ ಮಗ ಕಿರಣ್ ಕುಮಾರ್ ಮೇಲೂ ಅಣ್ಣೇಗೌಡ ಮತ್ತು ಹರೀಶ್ ಅಮಾನುಷವಾಗಿ ದಾಳಿ ಮಾಡಿದ್ದಾರೆ. ಗಾಯಗೊಂಡ ಕಮಲಮ್ಮ ಅವರನ್ನು ಅದೇ ದಿನ ಸಂಜೆ 7 ಗಂಟೆ ಸುಮಾರಿಗೆ ಹಾಸನದ ಹಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.

ಮರುದಿನ ರಾಜಮ್ಮ ಅವರು ಗೊರೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಜುಲೈ 24ರಂದು ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಆರೋಪಿಗಳ ಬಂಧನಕ್ಕೆ ದಲಿತ ಹಕ್ಕುಗಳ ಸಮಿತಿ-ಕರ್ನಾಟಕ ಪ್ರತಿಭಟನೆ

ದಲಿತ ಹಕ್ಕುಗಳ ಸಮಿತಿ-ಕರ್ನಾಟಕ (ಡಿಎಚ್‌ಎಸ್) ಹಾಸನ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದು, ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂದು ಒತ್ತಾಯಿಸಿದೆ. ನೊಂದ ದಲಿತ ಮಹಿಳೆಯರು, ಯುವಕ ಮತ್ತು ಕುಟುಂಬಕ್ಕೆ ರಕ್ಷಣೆ ಹಾಗೂ ಪರಿಹಾರ ನೀಡಬೇಕು ಎಂದು ಡಿಎಚ್‌ಎಸ್ ಮುಖಂಡರು ಒತ್ತಾಯಿಸಿದ್ದಾರೆ.

ಹಾಸನದಲ್ಲಿ ದಿನೇ ದಿನೇ ದಲಿತರ ಮೇಲೆ ನಡೆಯುತ್ತಿರುವ ಹಲ್ಲೆ, ಜಾತಿ ದೌರ್ಜನ್ಯಗಳನ್ನು ತಡೆಗಟ್ಟಲು ಅಧಿಕಾರಿಗಳು ಮತ್ತು ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಬೇಕು .ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳುಬೇಕಿದೆ. ನೊಂದ ಮಹಿಳೆಯರು ಮತ್ತು ಯುವಕರಿಗೆ ರಕ್ಷಣೆ ಮತ್ತು ಸೂಕ್ತ ಪರಿಹಾರ ಒದಗಿಸುವುದರ ಜೊತೆ ಹಾಸನ ಜಿಲ್ಲೆಯಲ್ಲಿ ಜಾತಿ ಆಧಾರಿತ ದೌರ್ಜನ್ಯವನ್ನು ತಡೆಗಟ್ಟಲು ವಿಶೇಷ ಕ್ರಮ ಕೈಗೊಳ್ಳಬೇಕೆಂದು ಡಿಎಚ್‌ಎಸ್ ಒತ್ತಾಯಿಸಿದೆ.

hasana dalit assult
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...