ಚಾಮರಾಜನಗರ | ಕಾವೇರಿ ನೀರು ಹರಿಸುತ್ತಿರುವುದನ್ನ ಖಂಡಿಸಿ ಹೆದ್ದಾರಿ ತಡೆದು ಪ್ರತಿಭಟನೆ

Date:

ಚಾಮರಾಜನಗರದ ಪೂಣಜನೂರು ಚೆಕ್ ಪೋಸ್ಟ್‌ನಲ್ಲಿ ಸೆ.30, ಶನಿವಾರದಂದು, ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನ ಖಂಡಿಸಿ ಜೆಡಿಎಸ್‌ ಮುಖಂಡರು, ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಹೆದ್ದಾರಿ ತಡೆದು ಪ್ರತಿಭಟಿಸಿದರು.

ಪ್ರತಿಭಟನಾನಿರತರು, ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ತಮಿಳುನಾಡು ಬಸ್ ತಡೆಗೆ ಮತ್ತು ಟೈಯರ್‌ಗೆ ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ಇದನ್ನು ತಡೆದ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ, ನಂತರ ಬಿಡುಗಡೆ ಮಾಡಿದ್ದಾರೆ.

ಚೆಕ್‌ಪೋಸ್ಟ್‌ನಲ್ಲಿ ಸೇರಿದ್ದ ಪ್ರತಿಭಟನಾಕಾರರು, ಹೆದ್ದಾರಿಗೆ ಅಡ್ಡಲಾಗಿ ಕುಳಿತು ವಾಹನ ಸಂಚಾರ ತಡೆದರು. ಈ ವೇಳೆ ತಮ್ಮ ಆಕ್ರೋಶ ಹೊರಹಾಕಿದ ಪ್ರತಿಭಟನಾನಿರತರು, ತಮಿಳುನಾಡು ಸರ್ಕಾರ, ಕೇಂದ್ರ ಮತ್ತು ರಾಜ್ಯ ಸರ್ಕಾರ ಹಾಗೂ ಕಾವೇರಿ ನಿರ್ವಹಣ ಪ್ರಾಧಿಕಾರದ ವಿರುದ್ಧ ಘೋಷಣೆ ಕೂಗಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳದಲ್ಲಿ ಮಾತನಾಡಿದ ಅಲೂರುಮಲ್ಲು,”ರಾಜ್ಯದಲ್ಲಿ ಮಳೆಯ ಭಾವದಿಂದ ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿನ ಮಟ್ಟ ಕಡಿಮೆ ಇದೆ. ಕುಡಿಯುವ ನೀರಿಗೆ ಸಮಸ್ಯೆ ಉಂಟಾಗಿದೆ. ಇಂತಹ ಪರಿಸ್ಥಿತಿಯಲ್ಲೂ ತಮಿಳುನಾಡು ಸರ್ಕಾರ ಮೂರನೇ ಬೆಳೆಗೆ ನೀರು ಕೇಳುತ್ತಿದೆ.

ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ಕೂಡಲೇ ನಿಲ್ಲಿಸಬೇಕು. ಇಲ್ಲವಾದರೆ, ಚಾಮರಾಜನಗರ ಜಿಲ್ಲೆಯ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ನಗರಕ್ಕೆ ಬಂದಾಗ ಕಪ್ಪು ಬಾವುಟ ಪ್ರದರ್ಶನ ಮಾಡಲಾಗುವುದು. ಕಾವೇರಿ ಕೊಳ್ಳದ ಜಲಾಶಯಗಳಿಗೆ ಮುಕ್ತಿಗೆ ಹಾಕಲಾಗುವುದು.

ರಾಜ್ಯ ಸರ್ಕಾರ ತಮಿಳುನಾಡು ಸರ್ಕಾರದ ಒತ್ತಡಕ್ಕೆ ಮಣಿದು, ನೀರು ಬಿಡುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಕಾವೇರಿ ಕೊಳ್ಳದ ಜಲಾಶಯಗಳಲ್ಲಿರುವ ನೀರಿನ ವಸ್ತುಸ್ಥಿತಿಯನ್ನು ಸುಪ್ರೀಂಕೋರ್ಟ್ ಮತ್ತು ಪ್ರಾಧಿಕಾರಕ್ಕೆ ಮನವರಿಕೆ ಮಾಡಿಕೊಡಲು ವಿಫಲರಾಗಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರೊಂದಿಗೆ ಒಳ ಒಪ್ಪಂದ ಮಾಡಿಕೊಂಡು, ಮುಂಬರುವ ಲೋಕಸಭಾ ಚುನಾವಣೆಯ ದೃಷ್ಟಿಯಿಂದ, ತಮಿಳುನಾಡಿಗೆ ನೀರು ಬಿಟ್ಟು ರಾಜ್ಯ ಜನತೆಗೆ ಅನ್ಯಾಯ ಮಾಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ರಾಜ್ಯ ಸರ್ಕಾರಕ್ಕೆ ಜನತೆ ತಕ್ಕ ಪಾಠ ಕಲಿಸಲಿದೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಜೆಡಿಎಸ್ ಮುಖಂಡ ಆಲೂರು ಮಲ್ಲು, ಜೆ.ಎಂ. ಶಂಕರ್, ಹೊಂಗನೂರು ರಾಜು, ಬಸವನಪುರ ಮಂಜು, ಕರ್ನಾಟಕ ರಕ್ಷಣಾ ಪಡೆ ಜಿಲ್ಲಾಧ್ಯಕ್ಷ ಆರ್. ನಾರಾಯಣ್, ಜನಸೇನ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಂ.ಎನ್. ಹರೀಶ್ ಕುಮಾರ್, ಕದಂಬ ಸೇನೆಯ ಅಂಬರೀಶ್, ಹೊನ್ನಹಳ್ಳಿ ಬಸವಣ್ಣ, ಸುರೇಶ್ ಬಾಬು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...