ಕೇಂದ್ರ ಬಜೆಟ್‌ | ಕಲ್ಯಾಣ ಕರ್ನಾಟಕಕ್ಕೆ ₹5,000 ಕೋಟಿ ಅನುದಾನ ನೀಡಲು ಮಲ್ಲಿಕಾರ್ಜುನ ಖರ್ಗೆ ಮನವಿ

Date:

ಕಲ್ಯಾಣ ಕರ್ನಾಟಕ ಭಾಗಕ್ಕೆ ಕೇಂದ್ರ ಬಜೆಟ್‌ನಲ್ಲಿ ₹5,000 ಕೋಟಿ ವಿಶೇಷ ಅನುದಾನ ಒದಗಿಸುವಂತೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಬರೆದ ಪತ್ರಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಉತ್ತರಿಸಿದ್ದಾರೆ. ಪತ್ರ ಸ್ವೀಕರಿಸಿರುವೆ ಎಂದು ಮರಳಿ ಪತ್ರ ಬರೆದಿದ್ದಾರೆ.

ಹೈದರಾಬಾದ್ ಕರ್ನಾಟಕ (ಈಗಿನ ಕಲ್ಯಾಣ ಕರ್ನಾಟಕ ) ಪ್ರದೇಶದ ಅಭಿವೃದ್ದಿಗಾಗಿ ಈ ಸಲ ಕೇಂದ್ರದ ಬಜೆಟ್ ನಲ್ಲಿ ₹5,000 ಕೋಟಿ‌ ವಿಶೇಷ ಅನುದಾನ ಬಿಡುಗಡೆಗೆ ಕ್ರಮವಹಿಸುವಂತೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಜನೆವರಿ 15 ರಂದು ಪತ್ರ ಬರೆದಿದ್ದರು.

ಮಲ್ಲಿಕಾರ್ಜುನ ಖರ್ಗೆ ಅವರ ಪತ್ರದ ಸಾರಾಂಶ ಹೀಗಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಲ್ಯಾಣ ಕರ್ನಾಟಕ ಪ್ರದೇಶ ಶೈಕ್ಷಣಿಕ, ಆರೋಗ್ಯ, ಮೂಲಭೂತ ಸೌಲಭ್ಯ ಇತ್ಯಾದಿ ಕ್ಷೇತ್ರಗಳಲ್ಲಿ ಹಿಂದುಳಿದಿದ್ದು ಈ ಎಲ್ಲ ಕ್ಷೇತ್ರಗಳ ಅಭಿವೃದ್ದಿ ಪಡಿಸಲು ಆರ್ಥಿಕ ಸವಾಲು ಎದುರಿಸುತ್ತಿತ್ತು. ಈ ಹಿನ್ನೆಲೆಯಲ್ಲಿ ಅಂದಿನ ಯುಪಿಎ ಸರ್ಕಾರ ಸಂವಿಧಾನದಕ್ಕೆ ಅಗತ್ಯ ತಿದ್ದುಪಡಿ ತಂದು ಆರ್ಟಿಕಲ್‌ 371 (ಜೆ ) ಜಾರಿಗೊಳಿಸಿ ಈ ಭಾಗದ ಸಮಗ್ರ ಅಭಿವೃದ್ದಿಗೆ ಶ್ರಮವಹಿಸಿತ್ತು.

ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಸಮಸ್ಯೆಗಳನ್ನು ಪರಿಹರಿಸಲು ಸಾಕಷ್ಟು ಪ್ರಯತ್ನಗಳನ್ನು ಮಾಡಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ (ಕೆಕೆಆರ್‌ಡಿಬಿ) ವಾರ್ಷಿಕವಾಗಿ ₹ 5,000 ಕೋಟಿಯನ್ನು ನಿಗದಿಪಡಿಸಿದೆ, 2024-25 ರ ಆರ್ಥಿಕ ವರ್ಷಕ್ಕೆ ಕೂಡಾ ಇದು ಅನ್ವಯವಾಗುತ್ತದೆ. ಇದರ ಜೊತೆಗೆ ಅಭಿವೃದ್ದಿಗೆ ಹಲವಾರು ಯೋಜನೆ ಹಾಕಿಕೊಂಡಿದೆ. ಪರಿಣಾಮ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 17,439 ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡುವುದು, ಬೀದರ್ ಮತ್ತು ರಾಯಚೂರು ನಗರ ಪುರಸಭೆಗಳನ್ನು ನಗರ ಮುನ್ಸಿಪಲ್ ಕಾರ್ಪೊರೇಷನ್‌ಗಳಾಗಿ ಮೇಲ್ದರ್ಜೆಗೇರಿಸುವುದು, 45 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು (PHC) ಸ್ಥಾಪಿಸುವುದು, 31 ಪಿಎಚ್‌ಸಿಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಿಗೆ (ಸಿಎಚ್‌ಸಿ) ಗಳನ್ನಾಗಿ ಹಾಗೂ ಒಂಬತ್ತು ಸಿಎಚ್‌ಸಿಗಳನ್ನು ತಾಲೂಕು ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸುವುದು ಮತ್ತು ಎರಡು ತಾಲೂಕು ಆಸ್ಪತ್ರೆಗಳು ಕ್ರಮವಾಗಿ ಜಿಲ್ಲಾ ಆಸ್ಪತ್ರೆಗಳ ದರ್ಜೆಗೇರಿಸಬೇಕಿದೆ. ಈ ಎಲ್ಲ ಪ್ರಯತ್ನಗಳು ಶ್ಲಾಘನೀಯವಾಗಿದ್ದರೂ, ಇವುಗಳ ಜಾರಿಗಾಗಿ ಈ ಪ್ರದೇಶಕ್ಕೆ ನಿರಂತರ ಆರ್ಥಿಕ ಬೆಂಬಲದ ಅಗತ್ಯವಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ ಬೆಳೆಸಿದ ಮಧ್ಯಮವರ್ಗ; ಮಧ್ಯಮವರ್ಗ ಮುಗಿಸಿದ ಮೋದಿ

ಕರ್ನಾಟಕ ಸರ್ಕಾರ ಕೂಡ ತನ್ನದೇ ಮಾದರಿಯಲ್ಲಿ ಕೇಂದ್ರ ಸರ್ಕಾರದಿಂದ ₹5,000 ಕೋಟಿ ವಿಶೇಷ ಅನುದಾನಕ್ಕೆ ಒತ್ತಾಯಿಸುವ ನಿರ್ಣಯವನ್ನು ಅಂಗೀಕರಿಸಿದೆ. ಪ್ರದೇಶದ ಅಭಿವೃದ್ಧಿಯ ಅಗತ್ಯಗಳನ್ನು ಪರಿಹರಿಸಲು, ಪ್ರಮುಖ ಯೋಜನೆಗಳ ಕಾರ್ಯಗತಗೊಳಲು ಮತ್ತು ಈ ಭಾಗದ ಜನರ ಸಾಮಾಜಿಕ-ಆರ್ಥಿಕ ಪರಿಸ್ಥಿತಿಗಳನ್ನು ಸುಧಾರಿಸಲು ಈ ನಿರ್ಣಾಯಕ ನಿಧಿಯು ಅತ್ಯಗತ್ಯವಾಗಿದೆ.

ಈ ಎಲ್ಲ ಹಿನ್ನೆಲೆಯಲ್ಲಿ, ಮುಂಬರುವ ಕೇಂದ್ರ ಬಜೆಟ್‌ನಲ್ಲಿ ಹೈದರಾಬಾದ್-ಕರ್ನಾಟಕ ( ಕಲ್ಯಾಣ ಕರ್ನಾಟಕ ) ಪ್ರದೇಶದ ಅಭಿವೃದ್ಧಿಗೆ ₹ 5,000 ಕೋಟಿ ವಿಶೇಷ ಅನುದಾನವನ್ನು ಒದಗಿಸುವಂತೆ ಒತ್ತಾಯಿಸಿ, ಈ ಅನುದಾನ ಕಲ್ಯಾಣ ಕರ್ನಾಟಕ‌ ಪ್ರದೇಶದ ಪ್ರಗತಿಯನ್ನು ಗಮನಾರ್ಹವಾಗಿ ವೇಗಗೊಳಿಸುವುದರ ಜೊತೆಗೆ ಹಲವಾರು ನಿರ್ಣಾಯಕ ಅಭಿವೃದ್ಧಿ ಸವಾಲುಗಳನ್ನು ಎದುರಿಸಲು ಸಹಕಾರಿಯಾಗುತ್ತದೆ ಎಂದು ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಪತ್ರದಲ್ಲಿ ವಿವರಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...