ತೊಗರಿ, ಕಡಲೆ ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ: ಸಚಿವ ಶಿವಾನಂದ ಪಾಟೀಲ

Date:

ರಾಜ್ಯ ಸರ್ಕಾರದ ಮನವಿ ಮೇರೆಗೆ ತೊಗರಿ ಮತ್ತು ಕಡಲೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ಪ್ರತಿ ಕ್ವಿಂಟಲ್‌ಗೆ ತೊಗರಿಗೆ 7,550 ರೂ. ಹಾಗೂ ಕಡಲೆಗೆ 5,650 ರೂ. ನಿಗದಿಪಡಿಸಲಾಗಿದೆ. ರಾಜ್ಯದಲ್ಲಿ ತೊಗರಿ ಬೆಳೆಯನ್ನು 15.02 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಲಾಗುತ್ತಿದ್ದು, ಅಂದಾಜು 11.96 ಲಕ್ಷ ಮೆಟ್ರಿಕ್‌ಟನ್‌ ಉತ್ಪಾದನೆಯನ್ನು ನಿರೀಕ್ಷಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.

“ಕಲಬುರಗಿ, ಯಾದಗಿರಿ, ಬೀದರ್‌, ರಾಯಚೂರು, ವಿಜಯಪುರ, ಕೊಪ್ಪಳ ಬೆಳಗಾವಿ, ಬಳ್ಳಾರಿ, ವಿಜಯನಗರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಖರೀದಿ ಕೇಂದ್ರ ಆರಂಭಿಸಲಾಗುವುದು. ರಾಜ್ಯ ಸರ್ಕಾರದ ಕೋರಿಕೆಯ ಮೇರೆಗೆ ಕೇಂದ್ರ ಸರ್ಕಾರವು 3,06,150 ಮೆಟ್ರಿಕ್‌ ಟನ್‌ ಖರೀದಿಗೆ ಅನುಮತಿ ನೀಡಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹವಾಮಾನ ವೈಪರೀತ್ಯ, ಸಾಮೂಹಿಕ ವಲಸೆ ಮತ್ತು ಅಭಿವೃದ್ಧಿ ಮಂತ್ರ

“ಪ್ರಸ್ತುತ ಕಡಲೆಯನ್ನು 10.03 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಯಲಾಗುತ್ತಿದ್ದು, ಅಂದಾಜು 6.63 ಲಕ್ಷ ಮೆಟ್ರಿಕ್‌ಟನ್‌ ಉತ್ಪಾದನೆಯನ್ನು ನಿರೀಕ್ಷಿಸಲಾಗಿದೆ. ಧಾರವಾಡ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಗದಗ, ಬೆಳಗಾವಿ, ವಿಜಯಪುರ ಕಲಬುರಗಿ, ಯಾದಗಿರಿ, ಬೀದರ್‌, ಬಾಗಲಕೋಟೆ, ದಾವಣಗೆರೆ, ಚಿಕ್ಕಮಗಳೂರು ಮತ್ತು ರಾಯಚೂರು ಜಿಲ್ಲೆಗಳಲ್ಲಿ ಖರೀದಿ ಕೇಂದ್ರ ಆರಂಭಿಸಲಾಗುವುದು” ಎಂದು ತಿಳಿಸಿದ್ದಾರೆ.

“ಬೆಂಬಲ ಬೆಲೆಯಲ್ಲಿ 96,498 ಮೆಟ್ರಿಕ್‌ ಟನ್‌ ಕಡಲೆ ಖರೀದಿ ಮಾಡಲಾಗುವುದು. ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಖರೀದಿಗೆ ಅನುಮತಿ ನೀಡುತ್ತಿದ್ದಂತೆ ನೋಂದಣಿ ಮತ್ತು ಖರೀದಿ ಕೇಂದ್ರ ಆರಂಭಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ” ಎಂದು ಸಚಿವರು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...