ಪ್ರಿಯಾಂಕ್ ಖರ್ಗೆ ಅಮೆರಿಕ ಪ್ರವಾಸಕ್ಕೆ ಕೇಂದ್ರ ಸರ್ಕಾರ ನಿರ್ಬಂಧ, ವಿವರಣೆ ಕೇಳಿದ ಸಚಿವರು

Date:

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಕೇಂದ್ರ ಸರ್ಕಾರ ಅಮೆರಿಕ ಪ್ರವಾಸಕ್ಕೆ ನಿರ್ಬಂಧಿಸಿದೆ.

ಪ್ರಿಯಾಂಕ್ ಖರ್ಗೆ ಅವರು ಪ್ಯಾರಿಸ್ ಪ್ರವಾಸ ಮುಗಿಸಿ ಇನ್ನೇನು ಅಮೆರಿಕಗೆ ತೆರಳಿ ಬಳಿಕ ಬಯೋ ಇಂಟರ್ ನ್ಯಾಷನಲ್ ಕನ್ವಷನ್ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿತ್ತು. ಆದರೆ, ಕೇಂದ್ರ ಸರ್ಕಾರ ಖರ್ಗೆ ಅವರ ಯುಎಸ್ ಪ್ರವಾಸಕ್ಕೆ ಅನುಮತಿ ನಿರಾಕರಣೆ ಮಾಡಿದೆ.

ಇದರಿಂದ ಹಲವು ಕಾರ್ಯಕ್ರಮಗಳಲ್ಲಿ ಭಾಗಿಯಾಗಬೇಕಿದ್ದ ಪ್ರಿಯಾಂಕ್ ಖರ್ಗೆಗೆ ನಿರಾಸೆಯಾಗಿದ್ದು, ಕ್ಲಿಯರೆನ್ಸ್ ನೀಡದ ಬಗ್ಗೆ ವಿವರಣೆ ನೀಡುವಂತೆ ಪ್ರಿಯಾಂಕ್ ಖರ್ಗೆ​ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. ಗಮನಾರ್ಹ ಸಂಗತಿ ಎಂದರೆ ಸಚಿವರ ಜೊತೆ ತೆರಳಿದ್ದ ಐಎಎಸ್ ಅಧಿಕಾರಿಗಳಿಗೆ ಯುಎಸ್​ಗೆ ತೆರಳಲು ಅನುಮತಿ ಸಿಕ್ಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸದ್ಯ ಪ್ಯಾರಿಸ್‌ನಲ್ಲಿ ಇರುವ ಪ್ರಿಯಾಂಕ್ ಖರ್ಗೆ ಅವರು ವಿವಿಧ ಅಧಿಕೃತ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದು, ಬಳಿಕ ಅಮೆರಿಕದಲ್ಲಿ ನಡೆಯುತ್ತಿರುವ ಬಯೋ ಇಂಟರ್ ನ್ಯಾಷನಲ್ ಕನ್ವಷನ್ ಕಾರ್ಯಕ್ರಮಕ್ಕೆ ಹೋಗಬೇಕಿತ್ತು. ಆದರೆ ಅಮೆರಿಕಗೆ ತೆರಳಲು ಕ್ಲಿಯರೆನ್ಸ್ ಸಿಗದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಅವರಿಗೆ ಅನುಮತಿ ನಿರಾಕರಣೆ ಮಾಡಿದ್ದು ಅಚ್ಚರಿಗೆ ಕಾರಣವಾಗಿದೆ. ಪ್ಯಾರಿಸ್‌ ಏರ್‌ ಶೋನಲ್ಲಿ ಭಾಗಿಯಾಗಿದ್ದ ಪ್ರಿಯಾಂಕ್ ಖರ್ಗೆ ಗುರುವಾರ ಬೆಂಗಳೂರಿಗೆ ಮರಳಲಿದ್ದಾರೆ. ಕರ್ನಾಟಕಕ್ಕೆ ಬಂದ ಬಳಿಕ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...