ಚನ್ನರಾಯಪಟ್ಟಣ ರೈತ ಹೋರಾಟ, ಜು.2ಕ್ಕೆ ಉಪವಾಸ ಪ್ರತಿಭಟನೆ

Date:

ಜುಲೈ 2 ರಂದು ನಂದಿಬೆಟ್ಟದಲ್ಲಿ ನಡೆಯುತ್ತಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ದೇವನಹಳ್ಳಿ ಭೂಸ್ವಾಧೀನದ ಸಮಸ್ಯೆ ವಿಶೇಷ ಅಜೆಂಡಾ ಆಗಬೇಕು. ಮತ್ತು ದೇವನಹಳ್ಳಿಯ ಮೂಲಕವೇ ಬೆಟ್ಟಕ್ಕೆ ಹೋದವರು ಭೂಸ್ವಾಧೀನಮಾಡುವುದಿಲ್ಲವೆಂಬ ನಿರ್ಣಯ ಮಾಡಿಯೇ ವಾಪಸ್ಸಾಗಬೇಕು ಎಂದು ಚನ್ನರಾಯಪಟ್ಟಣ ರೈತ ಹೋರಾಟ ಸಮಿತಿ ಆಗ್ರಹಿಸಿದೆ.

ಜುಲೈ 2 ರಂದು ನಡೆವ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ತಮ್ಮ ಪರವಾದ ನಿರ್ಣಯಕ್ಕೆ ಬರಲು ನೈತಿಕ ಬೆಂಬಲ ತುಂಬುವ ಸಲುವಾಗಿ ಚನ್ನರಾಯಪಟ್ಟಣದ 13 ಹಳ್ಳಿಗಳ ಸಂತ್ರಸ್ತರು “ನಮ್ಮ ಬದುಕು ಈ ಮಣ್ಣಿನಲ್ಲಿದೆ, ಈ ಮಣ್ಣಿನ ಮಕ್ಕಳ ಬವಿಷ್ಯ ನಿಮ್ಮ ಕೈಯಲ್ಲಿದೆ” ಎಂದು ನಾಡ ಕಚೇರಿ ಮುಂಭಾಗದ ಧರಣಿ ಸ್ಥಳದಲ್ಲಿ ಉಪವಾಸ ಕೂರುತ್ತಿದ್ದೇವ ಎಂದು ರೈತ ಹೋರಾಟ ಸಮಿತಿ ತಿಳಿಸಿದೆ.

ಪ್ರತಿಭಟನೆಯಲ್ಲಿ ಹಿರಿಯ ಗಾಂಧಿವಾದಿ ಸಂತೋಷ್ ಕೌಲಗಿಯವರು ರೈತರಿಗೆ ಮಿಡಿವ ನಾಡಿನ ಜನರ ಪ್ರತಿನಿದಿಯಾಗಿ ನಮ್ಮ ಜೊತೆ ಉಪವಾಸ ಕೂರಲಿದ್ದಾರೆ ಎಂದು ರೈತ ಹೋರಾಟ ಸಮಿತಿ ಪ್ರಕಟಣೆಯಲ್ಲಿ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ದೇವನಹಳ್ಳಿ ಚಲೋದ ನಂತರ ನಡೆದ ಬೆಳವಣಿಗೆಯಲ್ಲಿ ಸರ್ಕಾರವು ರೈತರೊಂದಿಗೆ ಹಾಗೂ ಹೋರಾಟಗಾರರೊಂದಿಗೆ ಅತ್ಯಂತ ದಾರುಣವಾಗಿ ವರ್ತಿಸಿದ ಪರಿಣಾಮ ಇಡೀ ರಾಜ್ಯಕ್ಕೆ ರಾಜ್ಯವೇ “ನಿಮ್ಮ ಜೊತೆಗೆ ನಾವಿದ್ದೇವೆ” ಎಂದು ಜೊತೆಗೆ ನಿಂತುಬಿಟ್ಟವು. ಪ್ರಗತಿಪರ ಚಿಂತಕರು,ನಟರೂ,ಸಾಹಿತಿಗಳು, ಕಲವಿದರೂ ಸೇರಿದಂತೆ ಎಲ್ಲರೂ ಸರ್ಕಾರದ ಮೇಲೆ ಒತ್ತಡ ತಂದ ಪರಿಣಾಮ ಜುಲೈ 4ರಂದು ಸರ್ಕಾರ ರೈತಮುಖಂಡರ, ಹೋರಾಟಗಾರರ ಸಭೆ ಕರೆದಿದೆ ಎಂದು ತಿಳಿಸಿದೆ.

ಜುಲೈ 4ರಂದು ನಡೆಯುವ ಸಭೆಯಲ್ಲಿ ರೈತ ನಿಯೋಗದ ಮತ್ತು ಸಂಯುಕ್ತ ಹೋರಾಟ ಕರ್ನಾಟಕದ ಮುಖಂಡರ ಸಭೆ ಕರೆದು, ಸಮಸ್ಯೆಯ ಕುರಿತು ಚರ್ಚಿಸಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ,ರೈತರನ್ನು ಬೆಂಬಲಿಸಿ ಫ್ರೀಡಂ ಪಾರ್ಕಿನಲ್ಲಿ ಬೃಹತ್‌ “ನಾಡ ಉಳಿಸಿ ಸಮಾವೇಶ”ವನ್ನು ಸಂಘಟಿಸಲಾಗುತ್ತಿದೆ. ಆದ್ದರಿಂದ ಬೆಂಗಳೂರು ಗ್ರಾಮಾಂತರಜಿಲ್ಲೆಯ ಎಲ್ಲ ಸಮಾನ ಮನಸ್ಕರು ದೊಡ್ಡ ಸಂಖ್ಯೆಯಲ್ಲಿ ಈ ಸಮಾವೇಶದಲ್ಲಿ ಭಾಗವಹಿಸಿ ಎಂದು ಮನವಿ ಸಮಿತಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...