ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 2026-27ನೇ ಸಾಲಿನ ಬಜೆಟ್ ಅನ್ನು ಮಂಡಿಸಿದ್ದು, ಇದು ಅವರ 17ನೇ ಬಜೆಟ್ ಆಗಿದೆ. 4,48,004 ಕೋಟಿ ರೂಪಾಯಿಯ ಬಜೆಟ್ ಅನ್ನು ಸಿಎಂ ಮಂಡಿಸಿದ್ದಾರೆ.
2025-26ನೇ ಸಾಲಿನ ಬಜೆಟ್ ಗಾತ್ರ 3,95,307 ಕೋಟಿ ರೂ.ಗಳಷ್ಟಿತ್ತು. ಕಳೆದ ಬಜೆಟ್‌ಗೆ ಹೋಲಿಸಿದರೆ ಈ ಹಣಕಾಸು ವರ್ಷದಲ್ಲಿ ಬಜೆಟ್ ಗಾತ್ರ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ.
ಇದನ್ನು ಓದಿದ್ದೀರಾ? ರಾಜ್ಯ ಬಜೆಟ್ | ಗ್ಯಾರಂಟಿ ಯೋಜನೆಗಳಿಗೆ 1.21 ಲಕ್ಷ ಕೋಟಿ ರೂ. ಖರ್ಚು
ಶಿಕ್ಷಣ ಕ್ಷೇತ್ರಕ್ಕೆ ಅಧಿಕ ಒತ್ತು ನೀಡಲಾಗಿದ್ದು, ಹೆಚ್ಚು ನಿಧಿ ಹಂಚಿಕೆ ಮಾಡಲಾಗಿದೆ. ಉಳಿದಂತೆ ಗ್ಯಾರಂಟಿ ಯೋಜನೆಗಳ ಹಂಚಿಕೆ ಭಾಗವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಅಧಿಕ ಅನುದಾನ ಹಂಚಿಕೆಯಾಗಿದೆ.
ಯಾವ ವಲಯಕ್ಕೆ ಎಷ್ಟು ಅನುದಾನ?
ಶಿಕ್ಷಣ: 47,224 ಕೋಟಿ ರೂ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ: 34,929 ಕೋಟಿ ರೂ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್: 26,559 ಕೋಟಿ ರೂ.
ಕೃಷಿ ಮತ್ತು ತೋಟಗಾರಿಕೆ: 8,373 ಕೋಟಿ ರೂ.
ಕಂದಾಯ: 19,843 ಕೋಟಿ ರೂ.
ಇಂಧನ: 29,947 ಕೋಟಿ ರೂ.
ಲೋಕೋಪಯೋಗಿ ಮತ್ತು ಸಾರಿಗೆ: 23,100 ಕೋಟಿ ರೂ.
ನೀರಾವರಿ: 22,436 ಕೋಟಿ ರೂ.
ಆಹಾರ ಮತ್ತು ನಾಗರಿಕ ಸರಬರಾಜು: 7,942 ಕೋಟಿ ರೂ.
ನಗರಾಭಿವೃದ್ಧಿ ಮತ್ತು ವಸತಿ: 22,203 ಕೋಟಿ ರೂ.
ಸಮಾಜ ಕಲ್ಯಾಣ: 18,612 ಕೋಟಿ ರೂ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ: 17,817 ಕೋಟಿ ರೂ.
ಒಳಾಡಳಿತ (ಗೃಹ): 11,424 ಕೋಟಿ ರೂ.
ಪಶುಸಂಗೋಪನೆ ಮತ್ತು ಮೀನುಗಾರಿಕೆ: 4,084 ಕೋಟಿ ರೂ.
ಇತರೆ ವಲಯಗಳು: 1,72,757 ಕೋಟಿ ರೂ.





