ಸಂಡೂರಿನಲ್ಲಿ ಕೌಶಲ್ಯ ವಿಶ್ವವಿದ್ಯಾಲಯ ಸ್ಥಾಪನೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

Date:

ನೂತನ ಕೌಶಲ್ಯ ವಿಶ್ವವಿದ್ಯಾಲಯವನ್ನು ಸಂಡೂರಿನಲ್ಲಿ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಬೆಂಗಳೂರಿನಲ್ಲಿ ಮಂಗಳವಾರ ‘ಬೆಂಗಳೂರು ಕೌಶಲ್ಯ ಶೃಂಗಸಭೆ’ ಉದ್ಘಾಟಿಸಿ ಮಾತನಾಡಿದರು.

“ಕರ್ನಾಟಕ ಇಂದು ಒಂದು ವಿಶಿಷ್ಟ ಜನಸಂಖ್ಯೆಯ ಹೊರಳು ಹಾದಿಯಲ್ಲಿದೆ. ನಮ್ಮ ಜನಸಂಖ್ಯೆಯ ಶೇ. 60 ಕ್ಕಿಂತ ಹೆಚ್ಚು ಜನರು 35 ವಯೋಮಾನದೊಳಗಿದ್ದಾರೆ. ಮುಂದಿನ ದಶಕದಲ್ಲಿ ಸುಮಾರು 1.2 ಕೋಟಿ ಯುವಕರು ಕಾರ್ಯಪಡೆಯನ್ನು ಪ್ರವೇಶಿಸುತ್ತಾರೆ. ಈ ಯುವಪೀಳಿಗೆಯನ್ನು ಸರಿಯಾದ ಕೌಶಲ್ಯ, ಮನಸ್ಥಿತಿ ಮತ್ತು ಆತ್ಮವಿಶ್ವಾಸದಿಂದ ಸಜ್ಜುಗೊಳಿಸಿದರೆ ಇದು ಅಸಾಧಾರಣ ಅವಕಾಶ. ಉದ್ಯಾನ ನಗರಿ ಎನ್ನುವ ಹೆಗ್ಗಳಿಕೆಯಿಂದ ಸ್ಟಾರ್ಟ್ಅಪ್ ರಾಜಧಾನಿಯಾಗಿ ರೂಪಾಂತರಗೊಂಡಿರುವ ಬೆಂಗಳೂರು ನಗರ ಈಗ ಭಾರತದ ಕೌಶಲ್ಯ ರಾಜಧಾನಿಯಾಗಿರುವುದು ಹೆಮ್ಮೆಯ ವಿಷಯ”ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕರ್ನಾಟಕ ಕೌಶಲ್ಯಾಭಿವೃದ್ಧಿ ನೀತಿ 2025-32

“ಕಳೆದ ವರ್ಷದ ಆಯವ್ಯಯದಲ್ಲಿ ಘೋಷಿಸಲಾಗಿದ್ದ ಕರ್ನಾಟಕ ಕೌಶಲ್ಯಾಭಿವೃದ್ಧಿ ನೀತಿ 2025-32 ನ್ನು ಇಂದು ಬೆಂಗಳೂರು ಸ್ಕಿಲ್ ಸಮಿಟ್ 2025 ಕಾರ್ಯಕ್ರಮದ ಮೂಲಕ ಕಾರ್ಯರೂಪಕ್ಕೆ ತರಲಾಗುತ್ತಿದೆ. ಈ 7 ವರ್ಷದ ಕಾರ್ಯತಂತ್ರದ ನೀಲನಕ್ಷೆಗೆ 4,432 ಕೋಟಿ ರೂ. ಅನುದಾನದ ಬೆಂಬಲ ನೀಡಲಾಗಿದ್ದು , ಕರ್ನಾಟಕವನ್ನು ಕೌಶಲ್ಯಭರಿತ ಹಾಗೂ ಭವಿಷ್ಯದ ಸವಾಲುಗಳಿಗೆ ಸನ್ನದ್ಧರಾಗಿಸುವುದು ಹಾಗೂ ಕಾರ್ಮಿಕ ಶಕ್ತಿಯ ಜಾಗತಿಕ ಕೇಂದ್ರವನ್ನಾಗಿ ರೂಪಿಸುವುದು ನಮ್ಮ ಉದ್ದೇಶ. 2032 ಕ್ಕೆ ಸುಮಾರು 30 ಲಕ್ಷ ಯುವಕರಿಗೆ ಕೌಶಲ್ಯ ತರಬೇತಿ, ಐಟಿಐ ಗಳಲ್ಲಿ ಮಹಿಳೆಯರ ಪ್ರವೇಶವನ್ನು ಶೇ. 33 ಕ್ಕೆ ಹೆಚ್ಚಳ ಹಾಗೂ ಐಎಂಸಿಕೆ(International Migration Centre-Karnataka) ದ ಮೂಲಕ ಜಾಗತಿಕ ಉದ್ಯೋಗಾವಕಾಶಗಳ ವೃದ್ಧಿಯನ್ನು ಸಾಧಿಸುವ ಗುರಿಯನ್ನು ಹೊಂದಿದೆ” ಎಂದು ತಿಳಿಸಿದರು.

ಜಾಗತಿಕ ಮಟ್ಟಕ್ಕೆ ಕಾರ್ಮಿಕ ಶಕ್ತಿ

“ಜಾಗತಿಕ ಮಟ್ಟಕ್ಕೆ ಕಾರ್ಮಿಕ ಶಕ್ತಿಯನ್ನು ಸಿದ್ಧಪಡಿಸಲು ಕರ್ನಾಟಕ ಸ್ಕಿಲ್ ಒಲಂಪಿಕ್ಸ್ ಎಂಬ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ. ಕೌಶಲ್ಯ ಸ್ಪರ್ಧೆಯಲ್ಲಿ 48 ಪದಕಗಳನ್ನು ಪಡೆದು ಭಾರತದಲ್ಲಿ ಕರ್ನಾಟಕ ಎರಡನೇ ಸ್ಥಾನವನ್ನು ಪಡೆದಿದೆ ಹಾಗೂ 4 ಅಂತರಾಷ್ಟ್ರೀಯ ಪದಕಗಳನ್ನು ತನ್ನದಾಗಿಸಿಕೊಂಡಿದೆ. ಐಟಿಐಗಳು ಹಾಗೂ ಜಿಟಿಟಿಸಿಗಳ ಮೂಲಕ ಸುಮಾರು 33,212 ಯುವಕರಿಗೆ ತರಬೇತಿಯನ್ನು ನೀಡಲಾಗಿದ್ದು,. ಶಾಲಾ ಮಕ್ಕಳಿಗೆ ‘ನನ್ನ ವೃತ್ತಿ , ನನ್ನ ಆಯ್ಕೆ’ ಕಾರ್ಯಕ್ರಮದಡಿ, 35000 ಮಕ್ಕಳಿಗೆ ತರಬೇತಿ ನೀಡಲಾಗಿದೆ. ಈ ವರ್ಷ ಯೋಜನೆಯನ್ನು 500 ಶಾಲೆಗಳಿಗೆ ವಿಸ್ತರಿಸಿ 2.3 ಲಕ್ಷ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಗುರಿಯಿದೆ” ಎಂದು ಹೇಳಿದರು.

ಕರ್ನಾಟಕವನ್ನು ವಿಶ್ವದಲ್ಲೇ ಕೌಶಲ್ಯಗಳಿಗೆ ಹೆಸರಾದ ರಾಜ್ಯವನ್ನಾಗಿಸುವ ಗುರಿ

“ಬೆಂಗಳೂರು ಕೌಶಲ್ಯ ಶೃಂಗಸಭೆ ಕರ್ನಾಟಕದ ಕೌಶಲ್ಯ ಪಯಣದಲ್ಲಿ ಒಂದು ಮೈಲಿಗಲ್ಲು. ಕರ್ನಾಟಕವನ್ನು ವಿಶ್ವದಲ್ಲೇ ಕೌಶಲ್ಯಗಳಿಗೆ ಹೆಸರಾದ ರಾಜ್ಯವನ್ನಾಗಿಸುವುದು ನಮ್ಮ ಗುರಿ. ಇಎಸ್ ಡಿಎಂಎಐ/ಎಂಎಲ್ ಏರೋಸ್ಪೇಸ್, ಹಸಿರು ಇಂಧನ, ಒಳಗೊಳ್ಳುವಿಕೆ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಉದ್ಯೋಗಕ್ಕೆ ತಯಾರಾಗಿರುವ ಕಾರ್ಮಿಕಪಡೆಯನ್ನು ಸಿದ್ದಮಾಡುವತ್ತ ಗಮನವನ್ನು ಕೇಂದ್ರೀಕೃತಗೊಳಿಸಿದೆ” ಎಂದರು.

2032ರ ಹೊತ್ತಿಗೆ ಕರ್ನಾಟಕವನ್ನು ಒಂದು ಟ್ರಿಲಿಯನ್ ಡಾಲರ್ ಆರ್ಥಿಕತೆಯ ರಾಜ್ಯವಾಗಿಸಬೇಕು

“2032ರ ಹೊತ್ತಿಗೆ ಕರ್ನಾಟಕವನ್ನು ಒಂದು ಟ್ರಿಲಿಯನ್ ಡಾಲರ್ ಆರ್ಥಿಕತೆಯ ರಾಜ್ಯವನ್ನಾಗಿಸುವುದು ನಮ್ಮ ಗುರಿ. ಈ ಗುರಿಯನ್ನು ಸಾಧಿಸಲು ನಮಗಿರುವ ಪ್ರಬಲ ಅಸ್ತ್ರವೆಂದರೆ ನಮ್ಮ ಜನ – ಕೌಶಲ್ಯಭರಿತ, ಭವಿಷ್ಯಕ್ಕೆ ತಯಾರಾದ ಹಾಗೂ ನಾವೀನ್ಯತೆವುಳ್ಳ ಕಾರ್ಮಿಕಶಕ್ತಿ” ಎಂದು ಹೇಳಿದರು.

ಕೌಶಲ್ಯಾಭಿವೃದ್ಧಿಯಲ್ಲಿ ಕರ್ನಾಟಕ ಸದಾ ಮುಂಚೂಣಿಯಲ್ಲಿರುವ ರಾಜ್ಯ

“ಕೌಶಲ್ಯಾಭಿವೃದ್ಧಿಯಲ್ಲಿ ಕರ್ನಾಟಕ ಸದಾ ಮುಂಚೂಣಿಯಲ್ಲಿರುವ ರಾಜ್ಯವಾಗಿದ್ದು, ದೇಶದಲ್ಲಿ ಪ್ರತ್ಯೇಕವಾಗಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯನ್ನು ಪ್ರಾರಂಭಿಸಿದ ರಾಜ್ಯಗಳಲ್ಲಿ ಒಂದಾಗಿದೆ. ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯ ಮೂಲಕ ಕೌಶಲ್ಯವನ್ನು ರಾಜ್ಯದ ಮೂಲೆ ಮೂಲೆಗೂ ಕೊಂಡೊಯ್ದಿದ್ದೇವೆ. 5 ಲಕ್ಷ ಯುವಜನರನ್ನು ತಲುಪುವ ಗುರಿ ಹೊಂದಿದ್ದರೂ ನಾವು ಅದಕ್ಕೂ ಹೆಚ್ಚು ಜನರನ್ನು ತಲುಪಿದ್ದೇವೆ. ಯುವಯುಗ ಯೋಜನೆಯಡಿ ಸುಧಾರಿತ ಡಿಜಿಟಲ್ ಕೌಶಲ್ಯವನ್ನು 1.10 ಲಕ್ಷ ಜನರಿಗೆ ಒದಗಿಸುವ ಮೂಲಕ ಕರ್ನಾಟಕ ಕೈಗಾರಿಕಾ ಕ್ರಾಂತಿಯನ್ನು 4 ನೇ ಸ್ಥಾನದಲ್ಲಿದೆ” ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಜಾಗತಿಕ ಆರ್ಥಿಕತೆಗೆ ತಕ್ಕಂತೆ ರಾಜ್ಯದ ಕೌಶಲ್ಯ ದೃಷ್ಟಿಯ ಪರಿವರ್ತನೆ

“ಕಳೆದ ಎರಡು ವರ್ಷಗಳಲ್ಲಿ ರಾಜ್ಯಾದ್ಯಂತ 34 ಮೆಗಾ ಉದ್ಯೋಗ ಮೇಳಗಳನ್ನು ಹಮ್ಮಿಕೊಂಡಿದ್ದು 1.43 ಲಕ್ಷ ಉದ್ಯೋಕಾಂಕ್ಷಿಗಳು ಭಾಗವಹಿಸಿದ್ದಾರೆ. 27, 123 ಜನರಿಗೆ ಉದ್ಯೋಗಾವಕಾಶಗಳು ಲಭಿಸಿವೆ. ಬದಲಾಗುತ್ತಿರುವ ಜಾಗತಿಕ ಆರ್ಥಿಕತೆಗೆ ತಕ್ಕಂತೆ ರಾಜ್ಯದ ಕೌಶಲ್ಯ ದೃಷ್ಟಿಯನ್ನು ಪರಿವರ್ತಿಸಲಾಗಿದೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...