ತುಮಕೂರು | ಕರ್ನಾಟಕ ಕ್ರೀಡಾಕೂಟಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅದ್ದೂರಿ ಚಾಲನೆ

Date:

 ತುಮಕೂರಿನಲ್ಲಿ ಜನವರಿ 16 ರಿಂದ 22ರವರೆಗೆ ನಡೆಯಲಿರುವ ಹಿರಿಯ ಒಲಿಂಪಿಕ್ಸ್ ಎಂದು ಕರೆಯಲಾಗುವ ಕರ್ನಾಟಕ ಕ್ರೀಡಾಕೂಟ 2025-26ಕ್ಕೆ ವರ್ಣರಂಜಿತ ಅದ್ದೂರಿ ಚಾಲನೆ ನೀಡಲಾಯಿತು. 

 ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ತುಮಕೂರು ಜಿಲ್ಲಾಡಳಿತದ ಸಹಯೋಗದಲ್ಲಿ ನಡೆಯಲಾಗುತ್ತಿರುವ ರಾಜ್ಯ ಮಟ್ಟದ ಈ ಕ್ರೀಡಾಕೂಟಕ್ಕೆ ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭಾರಂಭದ ಘೋಷಣೆ ಮಾಡುವ ಮೂಲಕ ಚಾಲನೆ ನೀಡಿದರು. 

1002684912

 ಕಳೆದ 1 ತಿಂಗಳಿನಿಂದ ಕರ್ನಾಟಕ ಕ್ರೀಡಾಕೂಟದ ಸಿದ್ಧತೆಗಳನ್ನು ನಡೆಸಿದ್ದ ತುಮಕೂರು ಜಿಲ್ಲಾಡಳಿತ 1 ವಾರಗಳ ಕಾಲ ನಡೆಯುವ ಕ್ರೀಡಾಕೂಟಕ್ಕಾಗಿ ಸಕಲ ಸಿದ್ಧತೆಗಳನ್ನು ನಡೆಸಿತು. ಸುಮಾರು 27 ಕ್ರೀಡೆಗಳು ಈ ಕ್ರೀಡಾಕೂಟದಲ್ಲಿ ನಡೆಯುತ್ತಿದ್ದು, 4,500ಕ್ಕೂ ಹೆಚ್ಚು ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿದ್ದು, ರಾಷ್ಟ್ರೀರ, ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಈ ಕ್ರೀಡಾಕೂಟದಲ್ಲಿ ಭಾಗಿಯಾಗಿರುವುದು ವಿಶೇಷ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
1002684916

 ತುಮಕೂರಿನ ಮಹಾತ್ಮಗಾಂಧಿ ಕ್ರೀಡಾಂಗಣ, ಸರ್ಕಾರಿ ಜ್ಯೂನಿಯರ್ ಕಾಲೇಜು ಮೈದಾನ ಸೇರಿದಂತೆ ವಿವಿಧ ಕ್ರೀಡೆಗಳಿಗಾಗಿ ನಗರದ ವಿವಿಧ ಅಂಕಣಗಳನ್ನು ಸಜ್ಜುಗೊಳಿಸಲಾಗಿದ್ದು, ಶುಕ್ರವಾರದಿಂದಲೇ ಫುಟ್‌ಬಾಲ್, ಟೇಕ್ವಾಂಡೋ, ಕತ್ತಿವರಸೆ ಸೇರಿದಂತೆ ವಿವಿಧ ಕ್ರೀಡೆಗಳ ಮೂಲಕ ಕ್ರೀಡಾಕೂಟ ಆರಂಭವಾಗಿದೆ.  

 ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುವ ಕ್ರೀಡಾಪಟುಗಳ ಸ್ವಾಗತಕ್ಕೆ ತುಮಕೂರು ನಗರ ಮಧುವಣಗಿತ್ತಿಯಂತೆ ಸಿಂಗಾರಗೊಂಡು ಗಮನ ಸೆಳೆಯುತ್ತಿದೆ. ರಾಜ ಬೀದಿಗಳು, ವೃತ್ತಗಳಲ್ಲಿ ವಿಶೇಷ ದೀಪಾಲಂಕಾರ, ವರ್ಣರಂಜಿತ ಬಾವುಟಗಳು, ಗಣ್ಯರಿಗೆ ಸ್ವಾಗತ ಕಮಾನುಗಳು ಹೀಗೆ ತುಮಕೂರು ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣಗೊಂಡಿದ್ದು ವಿಶೇಷ ಗಮನ ಸೆಳೆಯಿತು. 

1002684915

 ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಉದ್ಘಾಟನಾ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಮೂಲೆಗಳಿಂದ ಆಗಮಿಸಿದ ಕ್ರೀಡಾಪಟುಗಳು ಮಾನ್ಯ ಮುಖ್ಯಮಂತ್ರಿಗಳಿಗೆ ಗೌರವ ವಂದನೆ ಸಲ್ಲಿಸಿದರು. ಅಲ್ಲದೆ, ರಾಷ್ಟ್ರ ಮಟ್ಟದ ಕ್ರೀಡಾಪಟುಗಳು ಕ್ರೀಡಾ ಜ್ಯೋತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಸ್ತಾಂತರಿಸುವ ಮೂಲಕ ಕರ್ನಾಟಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

1002684911

 ಅಲ್ಲದೆ, ಕ್ರೀಡಾಪಟುಗಳಿಗೆ ಅಂತಾರಾಷ್ಟಿçÃಯ ಕ್ರೀಡಾಪಟು ಕೃಷಿಕ್ ಅವರು ಕ್ರೀಡಾ ಪ್ರತಿಜ್ಞಾವಿಧಿ ಬೋಧಿಸಿದರು. ಕರ್ನಾಟಕದ ವಿವಿಧ ಜಾನಪದ ಕಲಾತಂಡಗಳು ಪಥಸಂಚಲನೆಯಲ್ಲಿ ಕ್ರೀಡಾಪಟುಗಳನ್ನು ಹಿಂಬಾಲಿಸಿದ್ದು ಪ್ರೇಕ್ಷಕರ ಗಮನ ಸೆಳೆಯಿತು. 

 ಶನಿವಾರದಿಂದ ಮುಂದಿನ ಗುರುವಾರದವರೆಗೆ ತುಮಕೂರು ನಗರದಲ್ಲಿ ಕರ್ನಾಟಕ ಕ್ರೀಡಾಕೂಟದ ವಿವಿಧ ಕ್ರೀಡಾ ಸ್ಪರ್ಧೆಗಳು ನಡೆಯಲಿದ್ದು, ಜನವರಿ 22ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಸಮಾರೋಪ ಭಾಷಣ ಮಾಡಲಿದ್ದಾರೆ. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...