ಎಲ್‌ಪಿಜಿ ಅಭಾವವನ್ನು ನೀಗಿಸಲು ಹೊರದೇಶದಿಂದ ಅನಿಲ ಪೂರೈಕೆಯಂತಹ ಪರ್ಯಾಯ ಮಾರ್ಗಕ್ಕೆ ಒತ್ತಾಯಿಸಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯಿಸುತ್ತಾ ಎಲ್‌ಪಿಜಿ ಪೂರೈಕೆಯಲ್ಲಿ ವ್ಯತ್ಯಯವಾಗಿರುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
ಇದನ್ನು ಓದಿದ್ದೀರಾ? ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯಲ್ಲಿ 24 ರೂ. ಇಳಿಕೆ
“ವಿಧಾನಮಂಡಲದಲ್ಲಿ ಸರ್ಕಾರದ ವತಿಯಿಂದ ಈ ಬಗ್ಗೆ ಈಗಾಗಲೇ ಉತ್ತರ ನೀಡಲಾಗಿದೆ. ಆಹಾರಕ್ಕಾಗಿ ಹೋಟೆಲ್‌ಗಳ ಮೇಲೆ ಅವಲಂಬಿತರಾಗುವ ಜನಸಂಖ್ಯೆ ಸಾಕಷ್ಟಿದೆ. ಹೋಟೆಲ್ ವ್ಯವಸ್ಥೆ ಸ್ಥಗಿತಗೊಂಡರೆ, ಜನಜೀವನ ಅಸ್ತವ್ಯಸ್ಥವಾಗುತ್ತದೆ” ಎಂದರು.
“ಕೇಂದ್ರ ಸಚಿವ ಹರದೀಪ್‌ಸಿಂಗ್ ಪುರಿಯವರು ಎಲ್‌ಪಿಜಿ ಪೂರೈಕೆಯಲ್ಲಿ ತೊಂದರೆಯಾಗದಂತೆ ನಿರ್ವಹಿಸುವ ಬಗ್ಗೆ ಭರವಸೆ ನೀಡಿದ್ದಾರೆ” ಎಂದೂ ತಿಳಿಸಿದರು.
ಇನ್ನು ಕರ್ನಾಟಕದಲ್ಲಿ ಮಾತ್ರ ಎಲ್‌ಪಿಜಿ ಪೂರೈಕೆ ದೊಡ್ಡ ಸಮಸ್ಯೆಯಾಗಿದೆ ಎಂಬ ಬಿಜೆಪಿಯ ನಾಯಕರ ಟೀಕೆಗೆ ಪ್ರತಿಕ್ರಿಯಿಸಿದ ಸಿಎಂ, “ರಾಜ್ಯ ಬಿಜೆಪಿಯವರು ಮಾತನಾಡುವ ಬದಲು, ಎಲ್‌ಪಿಜಿ ಹೆಚ್ಚಿನ ಸರಬರಾಜಿಗೆ ಕ್ರಮ ವಹಿಸಲಿ” ಎಂದರು.





