ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಶುಭ ಕೋರಿದ ಸಿಎಂ ಸಿದ್ದರಾಮಯ್ಯ

Date:

2026 ನೇ ಮಾರ್ಚ್ 18 ರಿಂದ ಎಸ್.ಎಸ್.ಎಲ್.ಸಿ ಪರೀಕ್ಷೆ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿಗಳು ಸದನದಲ್ಲಿ ಶುಭಾಶಯ ಕೋರಿದರು.

ಪ್ರಸ್ತುತ ಸಾಲಿನಲ್ಲಿ 8,65,968 ಮಕ್ಕಳು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಗಳನ್ನು ತರಲಾಗಿದ್ದು, ಮೂರು ಹಂತದಲ್ಲಿ ಪರೀಕ್ಷೆಗಳು ನಡೆಯುತ್ತವೆ. ಒಂದು ವೇಳೆ ಮೊದಲ ಹಂತದ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಾಗ್ಯೂ ಎರಡನೇ ಹಂತ, ಮೂರನೇ ಹಂತದಲ್ಲಿ ಪರೀಕ್ಷೆಗೆ ಅವಕಾಶ ಇರುವುದರಿಂದ ಯಾವುದೇ ವಿದ್ಯಾರ್ಥಿಗಳು ಆತಂಕಗೊಳ್ಳದೆ ಪರೀಕ್ಷೆಯನ್ನು ಎದುರಿಸುವಂತೆ ತಿಳಿಸಿ ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಧೈರ್ಯವಾಗಿ ಪರೀಕ್ಷೆ ಬರೆಯಲು ತಿಳಿಸಿದರು.

ಇದನ್ನು ಓದಿದ್ದೀರಾ? ಪೆಟ್ರೋಲ್-ಡೀಸೆಲ್ ಧಾರಾಳ; ಭಾರತದಲ್ಲಿ ಅಡುಗೆ ಅನಿಲಕ್ಕೆ ಹಾಹಾಕಾರ ಎದ್ದಿರುವುದೇಕೆ? ​

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿದ್ಯಾರ್ಥಿಗಳಿಗೆ ಶುಭಾಶಯ – ಶಿಕ್ಷಣ ಮಂತ್ರಿ ಮಧುಬಂಗಾರಪ್ಪ

ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಶಿಕ್ಷಣ ಮಂತ್ರಿ ಮಧು ಬಂಗಾರಪ್ಪ ಶುಭಾಶಯ ಕೋರಿ ಈ ಹಿಂದೆ ಮಕ್ಕಳು ಒತ್ತಡದಿಂದ ಪರೀಕ್ಷೆಗೆ ಹಾಜರಾಗುತ್ತಿದ್ದರು. ಈಗ ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಸುಧಾರಣೆಗಳನ್ನು ಜಾರಿಗೆ ತರಲಾಗಿದೆ. ಮೂರು ಹಂತದಲ್ಲಿ ಪರೀಕ್ಷೆಗಳು ನಡೆಸುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಯಾವುದೇ ಆತಂಕ ಪಡದೆ ಪರೀಕ್ಷೆಗೆ ಹಾಜರಾಗಲು ತಿಳಿಸಿ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿದರು.

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಶುಭಾಶಯ

ವಿರೋಧ ಪಕ್ಷದ ನಾಯಕ ಆರ್. ಅಶೋಕ್ ರವರು ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಶುಭಾಶಯ ಕೋರಿ ಪೋಷಕರು ಮಕ್ಕಳಿಗೆ ಮಾನಸಿಕ ಹಿಂಸೆ ನೀಡಬಾರದು ಎಂದು ಕಿವಿಮಾತು ಹೇಳಿದರು. ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಆಗುತ್ತಿದೆ ಎಂದು ಸುದ್ದಿಗಳು ಬರುತ್ತಿವೆ. ಈ ಬಗ್ಗೆ ಶಿಕ್ಷಣ ಸಚಿವರು ಸುದ್ದಿ ಗೋಷ್ಠಿ ನಡೆಸಿ ಈ ಬಗ್ಗೆ ಎಚ್ಚರಿಕೆ ನೀಡುವಂತೆ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಹೆಚ್ಚಳ

ಹಣದುಬ್ಬರಕ್ಕೆ ಅನುಗುಣವಾಗಿ ನಡೆಯುವ ವಾರ್ಷಿಕ ದರ ಪರಿಷ್ಕರಣೆಯ ಭಾಗವಾಗಿ ಏಪ್ರಿಲ್ 1ರಿಂದ...

ಮಧ್ಯಪ್ರಾಚ್ಯ ಸಂಘರ್ಷ | ಕದನ ವಿರಾಮ ಎಂದ ಟ್ರಂಪ್; ಮಾತುಕತೆ ನಡೆದಿಲ್ಲವೆಂದ ಇರಾನ್

ಮಧ್ಯಪ್ರಾಚ್ಯದಲ್ಲಿ ಉಲ್ಬಣಗೊಳ್ಳುತ್ತಿರುವ ಸಂಘರ್ಷವನ್ನು ಕೊನೆಗಾಣಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ನಾನಾ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...