ಯುವ ವಕೀಲನ ಮೇಲೆ ಪೊಲೀಸ್ ದೌರ್ಜನ್ಯ | ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡ ಹೈಕೋರ್ಟ್‌

Date:

ಚಿಕ್ಕಮಗಳೂರಿನಲ್ಲಿ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಬಂದ ಯುವ ವಕೀಲನೋರ್ವನನ್ನು ಠಾಣೆಯಲ್ಲಿ ಕೂಡಿಹಾಕಿ ಪೊಲೀಸರು ಮನಸೋ ಇಚ್ಛೆ ಹಲ್ಲೆ ನಡೆಸಿರುವ ಘಟನೆಗೆ ಸಂಬಂಧಿಸಿ ಪಿಎಸ್‌ಐ ಸೇರಿ 6 ಮಂದಿ ಪೊಲೀಸರನ್ನು ಅಮಾನತುಗೊಳಿಸಿರುವ ಬೆನ್ನಲ್ಲೇ, ಕರ್ನಾಟಕ ಹೈಕೋರ್ಟ್‌ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವುದಾಗಿ ‘ಬಾರ್ & ಬೆಂಚ್’ ವರದಿ ಮಾಡಿದೆ.

‘ಚಿಕ್ಕಮಗಳೂರಿನಲ್ಲಿ ವಕೀಲರು ಪೊಲೀಸರು ನಡುವಿನ ಕಲಹದಲ್ಲಿ ವಕೀಲರೊಬ್ಬರ ಮೇಲೆ ಹಲ್ಲೆ ನಡೆಸಲಾಗಿದೆ. ಗಾಯಾಳು ವಕೀಲರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ಕರ್ನಾಟಕ ಹೈಕೋರ್ಟ್‌ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ. ಪ್ರಕರಣದ ವಿಚಾರಣೆಯನ್ನು ಮಧ್ಯಾಹ್ನ 1 ಗಂಟೆಗೆ ಮುಖ್ಯ ನ್ಯಾಯಮೂರ್ತಿ ಪಿ ಬಿ ವರಾಳೆ ಅವರ ನೇತೃತ್ವದ ವಿಭಾಗೀಯ ಪೀಠ ನಡೆಸಲಿದೆ’ ಎಂದು ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಏನಿದು ಘಟನೆ?

ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೆ ಬಂದ ಯುವ ವಕೀಲನೋರ್ವನನ್ನು ಠಾಣೆಯಲ್ಲಿ ಕೂಡಿಹಾಕಿ ಪೊಲೀಸರು ಮನಸೋಇಚ್ಛೆ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಘಟನೆಗೆ ಸಂಬಂಧಿಸಿ ಈಗಾಗಲೇ ಪಿಎಸ್‌ಐ ಸೇರಿ 6 ಮಂದಿ ಪೊಲೀಸರನ್ನು ಅಮಾನತುಗೊಳಿಸಲಾಗಿದೆ.

ಯುವ ವಕೀಲ ಪ್ರೀತಂ ಎಂಬುವವರು ಗುರುವಾರ ರಾತ್ರಿ ಹೆಲ್ಮೆಟ್ ಇಲ್ಲದೆ ಮಾರುಕಟ್ಟೆ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಠಾಣೆಯ ಎದುರು ಅಡ್ಡಗಟ್ಟಿದ ಚಿಕ್ಕಮಗಳೂರು ನಗರ ಪೊಲೀಸರು, ಅವರ ಬೈಕ್‌ನಿಂದ ಕೀ ಕಸಿದುಕೊಂಡಿದ್ದಾರೆ. ಬಳಿಕ ಠಾಣೆಯೊಳಗೆ ಕರೆದುಕೊಂಡು ಹೋಗಿ, ಕೂಡಿ ಹಾಕಿದ್ದಲ್ಲದೇ, ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ.

chikkamagaluru case

ಪೊಲೀಸರ ದೌರ್ಜನ್ಯದಿಂದ ವಕೀಲ ಪ್ರೀತಂ ಅವರ ಎದೆ, ಕೈ ಮತ್ತು ಬೆನ್ನಿಗೆ ಸಾಕಷ್ಟು ಗಾಯಗಳಾಗಿದ್ದು, ಇದು ವಕೀಲ ಸಮೂಹವನ್ನು ಇನ್ನಷ್ಟು ಕೆರಳುವಂತೆ ಮಾಡಿದೆ. ರಾತ್ರಿಯಿಡೀ ಠಾಣೆಯ ಎದುರು ಧರಣಿ ನಡೆಸಿ, ಹಲ್ಲೆ ನಡೆಸಿದ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನು ಓದಿದ್ದೀರಾ? ಚಿಕ್ಕಮಗಳೂರು | ಠಾಣೆಯಲ್ಲಿ ಕೂಡಿಹಾಕಿ ಯುವ ವಕೀಲನಿಗೆ ಥಳಿತ; ಪಿಎಸ್‌ಐ ಸೇರಿ 6 ಮಂದಿ ಅಮಾನತು

ಈ ಬಗ್ಗೆ ಹೇಳಿಕೆ ನೀಡಿದ್ದ ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಅಮಟೆ, ‘ಠಾಣೆಯ ಸಬ್ ಇನ್‌ಸ್ಪೆಕ್ಟರ್, ಸಹಾಯಕ ಸಬ್ ಇನ್‌ಸ್ಪೆಕ್ಟರ್ ಸೇರಿ ಆರು ಪೊಲೀಸರ ವಿರುದ್ಧ ಕೊಲೆ ಯತ್ನದ ಪ್ರಕರಣ ದಾಖಲಿಸಲಾಗಿದೆ. ಅಷ್ಟೂ ಜನರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ. ಇಡೀ ಪ್ರಕರಣದ ಸಂಬಂಧ ತನಿಖೆ ನಡೆಸಿ ವರದಿ ನೀಡಲು ಡಿವೈಎಸ್‌ಪಿಗೆ ಸೂಚನೆ ನೀಡಲಾಗಿದೆ’ ಎಂದು ತಿಳಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...