ಬಾಲ್ಯ ವಿವಾಹ | ಕರ್ನಾಟಕಕ್ಕೆ ಅಗ್ರ ಸ್ಥಾನ; NFHS ವರದಿ ಹೇಳುತ್ತಿರುವುದೇನು?

Date:

ಕಳೆದ ಐದು ವರ್ಷಗಳಲ್ಲಿ ದೇಶದಲ್ಲಿಯೇ ಅತಿ ಹೆಚ್ಚು ಬಾಲ್ಯ ವಿವಾಹಗಳು ಕರ್ನಾಟಕದಲ್ಲಿ ನಡೆದಿವೆ. ಅದರಲ್ಲೂ, ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ತವರು ಜಿಲ್ಲೆ ಬೆಳಗಾವಿಯಲ್ಲಿ 2023ರ ಏಪ್ರಿಲ್ ಮತ್ತು ಆಗಸ್ಟ್‌ ನಡುವೆ (ಐದು ತಿಂಗಳು) 12 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿವೆ.

ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (ಎನ್‌ಎಫ್‌ಎಚ್‌ಎಸ್‌-5) ಮತ್ತು ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ಬಾಲ್ಯವಿವಾಹದ ಅಂಕಿಅಂಶಗಳನ್ನು ಬಿಡುಗಡೆ ಮಾಡಿದೆ. ಕಳೆದ ಐದು ವರ್ಷಗಳಲ್ಲಿ (2018-2022) ದೇಶದಲ್ಲಿ 3,524 ಬಾಲ್ಯವಿವಾಹ ಪ್ರಕರಣಗಳು ದಾಖಲಾಗಿವೆ.

ಬಾಲ್ಯ ವಿವಾಹವನ್ನು ತಡೆಯಲು ಬಾಲ್ಯ ವಿವಾಹ ನಿಷೇಧ ಕಾಯಿದೆ-2006 ಜಾರಿಯಲ್ಲಿದೆ. 2030ರ ವೇಳೆಗೆ ಭಾರತವನ್ನು ಬಾಲ್ಯವಿವಾಹ ಮುಕ್ತಗೊಳಿಸುವ ಗುರಿಯನ್ನು ಹೊಂದಲಾಗಿದೆ. ಆದರೂ, ಬಾಲ್ಯವಿವಾಹಗಳಿಗೆ ಕಡಿವಾಡ ಹಾಕುವುದು ಸವಾಲಾಗಿದ್ದು, ಬಾಲ್ಯವಿವಾಹ ಪ್ರಕರಣಗಳು ದಾಖಲಾಗುತ್ತಲೇ ಇವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಲ್ಯ ವಿವಾಹದ ಅಂಕಿಅಂಶಗಳಲ್ಲಿ ಕರ್ನಾಟಕವು ಅಗ್ರ ಸ್ಥಾನ ಪಡೆದುಕೊಂಡಿದೆ. ಕಳೆದ ಐದು ವರ್ಷಗಳಲ್ಲಿ ಕರ್ನಾಟಕದಲ್ಲಿ 706 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿವೆ. ನಂತರದ ಸ್ಥಾನದಲ್ಲಿ, ಅಸ್ಸಾಂನಲ್ಲಿ 554, ತಮಿಳುನಾಡಿನಲ್ಲಿ 414, ಪಶ್ಚಿಮ ಬಂಗಾಳದಲ್ಲಿ 390, ಮಹಾರಾಷ್ಟ್ರದಲ್ಲಿ 185 ಬಾಲ್ಯ ವಿವಾಹಗಳು ವರದಿಯಾಗಿವೆ.

ಕರ್ನಾಟಕದಲ್ಲಿ 2018 – 2022ರ ನಡುವೆ ಉಡುಪಿ ಜಿಲ್ಲೆಯಲ್ಲಿ ಮಾತ್ರ ಯಾವುದೇ ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿಲ್ಲ ಎಂದು ವರದಿ ಹೇಳಿದೆ. ಆದರೆ, 2023ರಲ್ಲಿ ಉಡುಪಿ ಜಿಲ್ಲೆಯ ಶಿರೂರಿನಲ್ಲಿ ಒಂದು ಬಾಲ್ಯವಿವಾಹ ನಡೆದಿದೆ. ಜಿಲ್ಲೆಯಲ್ಲಿ ಪೊಲೀಸರು ನಾಲ್ಕು ಬಾಲ್ಯವಿವಾಹಗಳನ್ನು ತಡೆಯಲಾಗಿದೆ.

ಅರುಣಾಚಲ ಪ್ರದೇಶ, ಗೋವಾ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ಲಡಾಖ್, ಲಕ್ಷದ್ವೀಪ, ಅಂಡಮಾನ್ ಮತ್ತು ನಿಕೋಬಾರ್‌ಗಳಲ್ಲಿ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ವರದಿಯಾಗಿದೆ.

ಬಡತನ, ಶಿಕ್ಷಣದ ಕೊರತೆ, ಮೂಢನಂಬಿಕೆಗಳು ಮತ್ತು ತಪ್ಪು ಕಲ್ಪನೆಗಳು ಬಾಲ್ಯ ವಿವಾಹಗಳಿಗೆ ಪ್ರಮುಖ ಕಾರಣಗಳಾಗಿವೆ ಎಂದು ಹೇಳಲಾಗಿದೆ. ಜನರಲ್ಲಿ ಜಾಗೃತಿ ಮೂಡಿಸಿ ಹೆಣ್ಣು ಮಕ್ಕಳ ಶಿಕ್ಷಣ ಮತ್ತು ಆರ್ಥಿಕ ಸ್ವಾವಲಂಬನೆಗೆ ಒತ್ತು ನೀಡಬೇಕು ಎಂದು ಅಭಿಪ್ರಾಯಗಳ ವ್ಯಕ್ತವಾಗಿವೆ.

ಬಾಲ್ಯ ವಿವಾಹದ ಮೇಲೆ ಗ್ರಾಮ ಪಂಚಾಯತಿಗಳು ನಿಗಾ ವಹಿಸಬೇಕು. ಬಾಲ್ಯ ವಿವಾಹ ನಡೆಸಲು ಮುಂದಾಗುವ ಕುಟುಂಬಗಳಿಗೆ ಸರ್ಕಾರ ಸೌಲಭ್ಯಗಳನ್ನು ನಿಲ್ಲಿಸಬೇಕು. ಬಾಲ್ಯ ವಿವಾಹ ಅಪರಾಧಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂಬ ಆಗ್ರಹಗಳು ಕೇಳಿಬಂದಿವೆ.

2011ರ ಜನಗಣತಿಯ ಪ್ರಕಾರ ದೇಶದಲ್ಲಿ 1.53 ಕೋಟಿ ಬಾಲಕಿಯರು 18 ವರ್ಷ ತುಂಬುವ ಮುನ್ನವೇ ವಿವಾಹವಾಗಿದ್ದಾರೆ. ಉತ್ತರ ಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿ 40% ಮಹಿಳೆಯರು 18 ವರ್ಷಕ್ಕಿಂತ ಮುಂಚೆಯೇ ವಿವಾಹವಾಗಿದ್ದಾರೆ. ಆದರೆ, 2006ರ ನಂತರ ಬಾಲ್ಯವಿವಾಹಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...