ಚಿತ್ರದುರ್ಗ | ದಲಿತರ ಬೀದಿಯಲ್ಲಿ ಮೂಲ ಸೌಕರ್ಯ ಮರೀಚಿಕೆ; ಜನಪ್ರತಿನಿಧಿಗಳ ನಿರ್ಲಕ್ಷ್ಯ

Date:

ಕೇವಲ 25-30ರಿಂದ ಮನೆಗಳಿದ್ದು, 150 ಮಂದಿ ವಾಸಿಸುತ್ತಿರುವ ಹಿಂದುಳಿದ ವರ್ಗ ಮತ್ತು ಪರಿಶಿಷ್ಟ ಜಾತಿಯ ಜನರೇ ವಾಸ ಮಾಡುವ ಈ ಊರು ಮೂಲಸೌಕರ್ಯಗಳಿಂದ ವಂಚಿತವಾಗಿದೆ. ಗ್ರಾಮ ಪಂಚಾಯಿತಿ ಸದಸ್ಯರು, ಅಧಿಕಾರಿಗಳೂ ಕೂಡ ಈ ಊರಿನ ಸಮಸ್ಯೆಗಳನ್ನು ಬಂದು ನೋಡುತ್ತಿಲ್ಲ, ಜನರ ಕಷ್ಟ ಕೇಳಿಸಿಕೊಳ್ಳುತ್ತಿಲ್ಲ. ಕೇವಲ ಎರಡೇ ಬೀದಿಗಳು ಇರುವ ಈ ಊರಿನಲ್ಲಿ ರಸ್ತೆಯ ಒಂದು ಬದಿ ಚರಂಡಿ ಇದೆ. ಅದೂ ಕೂಡ ಹೂಳು ತುಂಬಿದ್ದು, ರಸ್ತೆಯ ಮೇಲೆಲ್ಲ ನೀರು ಹರಿಯುವ ಪರಿಸ್ಥಿತಿ ಇದೆ.

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಅಡನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮದ್ದೇನಹಟ್ಟಿ ಗ್ರಾಮದ ನಿವಾಸಿಗಳು ಇಂತಹ ಪರಿಸ್ಥಿತಿ ಎದುರಿಸುತ್ತಿದ್ದಾರೆ.

ಈ ಊರಿನಲ್ಲಿ ಸುಮಾರು 25ರಿಂದ 30 ಹಿಂದುಳಿದ ವರ್ಗದ ಮತ್ತು ಪರಿಶಿಷ್ಟ ಜಾತಿಯ ಕುಟುಂಬಗಳು ವಾಸ ಮಾಡುತ್ತಿದ್ದು, ಇದು ತಾಲೂಕಿನ ಅಡನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುತ್ತದೆ. ಪಂಚಾಯಿತಿ ಕೇಂದ್ರ ಈ ಊರಿನಿಂದ ಕೇವಲ ಒಂದುವರೆ ಕಿಲೋಮೀಟರ್ ದೂರ ಇದ್ದರೂ ಕೂಡ ಅಲ್ಲಿನ ಅಧಿಕಾರಿಗಳು ಜನಪ್ರತಿನಿಧಿಗಳು ಈ ಸಮಸ್ಯೆಯನ್ನು ಬಗೆಹರಿಸಲು ಮನಸ್ಸು ಮಾಡಿಲ್ಲ ಎಂಬುದು ಇಲ್ಲಿನ ಸಮಸ್ಯೆಗಳ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಊರಿನಲ್ಲಿ ಇರುವುದು ಕೇವಲ ಎರಡೇ ರಸ್ತೆಗಳಾದರೂ ಆ ರಸ್ತೆಗಳು ಕೂಡ ಸರಿಯಾದ ಡಾಂಬರು ಅಥವಾ ಸಿಮೆಂಟ್ ಇಲ್ಲದೆ ಅಲ್ಲಲ್ಲಿ ಅಗೆದು ಗುಂಡಿಗಳಾಗಿದ್ದು, ಚರಂಡಿಯ ನೀರು ರಸ್ತೆಯ ತುಂಬೆಲ್ಲ ಹರಿಯುತ್ತಿದೆ. ಮಕ್ಕಳು, ವೃದ್ದರು ಸೇರಿದಂತೆ ಸ್ಥಳೀಯರೆಲ್ಲರೂ ಕೊಳಚೆ ತುಳಿದು ಓಡಾಡುವಂತಾಗಿದೆ. ಕುಡಿಯುವ ನೀರು ಪೂರೈಕೆ ಯೋಜನೆ ಅಡಿ ನಲ್ಲಿಗಳಿಗೆ ಪೈಪ್‌ ಸಂಪರ್ಕ ಕಲ್ಪಿಸಲು ಇತ್ತೀಚೆಗೆ ರಸ್ತೆಯನ್ನು ಅಗೆದಿದ್ದು ಸಂಪೂರ್ಣ ಹಾಳಾಗಿ ಹೋಗಿದೆ. ಅಲ್ಲಿಯೇ ಚರಂಡಿಯ ನೀರು ಹರಿದು ರಸ್ತೆಯ ಮೇಲೆಲ್ಲಾ ನಿಂತಿದ್ದು ಹಾಗೂ ಚರಂಡಿಯ ಕೊಳಚೆ ನೀರು ಊರಿನಿಂದ ಹೊರಗೆ ಹೋಗಲು ಸರಿಯಾದ ಮಾರ್ಗವಿಲ್ಲದೆ ಚರಂಡಿ ಮೇಲೆ ಹರಿದು ಸೊಳ್ಳೆಗಳು ಹರಡುವಂತಿದೆ.

ಬೀದಿಗಳಲ್ಲಿ ಅನೈರ್ಮಲ್ಯ

ಗ್ರಾಮದಲ್ಲಿ ಇತ್ತೀಚೆಗೆ ಸುಸಜ್ಜಿತವಾದ ಅಂಗನವಾಡಿ ಕೇಂದ್ರ ನಿರ್ಮಾಣವಾಗಿದ್ದು, ಕೇಂದ್ರದ ಸುತ್ತಮುತ್ತಲೂ ಗಿಡಗಂಟೆಗಳು ಬೆಳೆದಿವೆ. ಅದರ ಹಿಂದೆ ಒಂದು ದೊಡ್ಡ ಗುಂಡಿ ಇದ್ದು, ಗ್ರಾಮದ ಮಳೆ ನೀರು ಇತರ ಚರಂಡಿ ನೀರು ಕೂಡ ತುಂಬಿಕೊಂಡಿದೆ. ಅದರಿಂದ ಹೊರಸೂಸುವ ದುರ್ವಾಸನೆಯಲ್ಲಿ ಮಕ್ಕಳು ಕಲಿಯುವಂತಾಗಿದೆ. ಜೊತೆಗೆ ಅಂಗನವಾಡಿ ಕೇಂದ್ರದ ಸುತ್ತಮುತ್ತ ಗಿಡಗಂಟಿಗಳಲ್ಲಿ ಕ್ರಿಮಿಕೀಟ ಮತ್ತು ಹಾವು ಚೇಳುಗಳಂತಹ ವಿಷ ಜಂತುಗಳಿದ್ದು, ಮಕ್ಕಳ ಸುರಕ್ಷತೆಯ ಸಂದಿಗ್ಧ ಪರಿಸ್ಥಿತಿಯಲ್ಲಿ ಜನರು ಭಯಭೀತಿಯಿಂದ ಕಾಲ ಕಳೆಯುವಂತಾಗಿದೆ.

ಮತ್ತೊಂದು ಭಾಗದಲ್ಲಿ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆ ಇದ್ದು, ಎರಡು ವರ್ಷಗಳ ಹಿಂದೆ ಕೇವಲ ನಾಲ್ಕು ಮಕ್ಕಳು ಇದ್ದರೆನ್ನುವ ಕಾರಣಕ್ಕೆ ಶಾಲೆಯನ್ನು ಮುಚ್ಚಿ ಶಿಕ್ಷಕರನ್ನು ಬೇರೆಡೆ ವರ್ಗ ಮಾಡಿದ್ದು, ಶಾಲೆಯ ಕಟ್ಟಡ ಕೂಡ ಉಪಯೋಗಕ್ಕೆ ಬರದ ಕೊಂಪೆಯಾಗಿದೆ.

ಈ ಬಗ್ಗೆ ಇಲ್ಲಿನ ಸ್ಥಳೀಯ ನಿವಾಸಿ ತಿಪ್ಪೇಸ್ವಾಮಿ ಅವರು ಈ ದಿನ.ಕಾಮ್‌ನೊಂದಿಗೆ ಮಾತನಾಡಿ, “ಗ್ರಾಮದಲ್ಲಿ ಕೇವಲ ಎರಡೇ ಬೀದಿಗಳಿದ್ದರೂ ಕೂಡ ಈ ಗ್ರಾಮಕ್ಕೆ ಯಾವುದೇ ಮೂಲಸೌಕರ್ಯವನ್ನು ಮಾಡಿಕೊಟ್ಟಿಲ್ಲ. ಈ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇತರೆ ಗ್ರಾಮಗಳಲ್ಲಿ ಬಲಾಢ್ಯರು ವಾಸಿಸುತ್ತಿದ್ದು, ಅವರ ಗ್ರಾಮಗಳಲ್ಲಿ ನೀರಿನ ಸಂಪರ್ಕ ಒಳಚರಂಡಿ ವ್ಯವಸ್ಥೆ ಮತ್ತು ರಸ್ತೆಗಳು ಸುಸಜ್ಜಿತವಾಗಿವೆ. ಕೇವಲ 100ರಿಂದ 150 ಮಂದಿ ವಾಸಿಸುವ ಈ ಗ್ರಾಮಕ್ಕೆ ಯಾವುದೇ ಮೂಲಸೌಕರ್ಯವನ್ನು ಕಲ್ಪಿಸಿಲ್ಲ” ಎಂದು ಆರೋಪಿಸಿದರು.

“ಹತ್ತು ವರ್ಷಗಳ ಹಿಂದೆ ಕಾಂಕ್ರೀಟ್ ರಸ್ತೆಯನ್ನು ಹಾಕಿಸಿದ್ದರು. ಹಿಂದಿನ ವರ್ಷ ಕುಡಿಯುವ ನೀರಿನ ಯೋಜನೆಗೆ ರಸ್ತೆಯಲ್ಲಿ ಪೈಪ್ ಲೈನ್ ಹಾಕಲು ರಸ್ತೆಯನ್ನು ಅಗೆದಿದ್ದು, ಈವರೆಗೂ ಸರಿಪಡಿಸಿಲ್ಲ. ಹಾಗಾಗಿ ರಸ್ತೆ ಹಾಳಾಗಿದೆ. ಚರಂಡಿಗೆ ಹೂಳು ತುಂಬಿಕೊಂಡು 2ರಿಂದ 3 ವರ್ಷಗಳಾದರೂ ಅದನ್ನು ತೆಗೆಸುವ ವ್ಯವಸ್ಥೆಯನ್ನು ಗ್ರಾಮ ಪಂಚಾಯಿತಿಯವರು ಮಾಡಿಲ್ಲ. ನೀರು ಮುಂದಕ್ಕೆ ಸರಾಗವಾಗಿ ಹರಿಯಲಾರದೆ ರಸ್ತೆ ಮೇಲೆಲ್ಲಾ ಹರಿಯುತ್ತದೆ. ಕುಡಿಯುವ ನೀರಿಗೆ ಸೇರುತ್ತಿದೆ. ಇದನ್ನು ತಕ್ಷಣ ಅಧಿಕಾರಿಗಳು ಗಮನಿಸಿ ಸರಿಪಡಿಸಬೇಕು. ಚರಂಡಿ ಹೂಳು ತೆಗೆಸಿ ಜನರ ಆರೋಗ್ಯ ಕಾಪಾಡಬೇಕಿದೆ” ಎಂದು ಒತ್ತಾಯಿಸಿದರು.

ಇದನ್ನೂ ಓದಿದ್ದೀರಾ? ದಕ್ಷಿಣ ಕನ್ನಡ | ಅಲೆಮಾರಿ ಶಿಳ್ಳೆಕ್ಯಾತ ಕುಟುಂಬಗಳಿಗೆ ಶಾಶ್ವತ ಸೂರು ಕಲ್ಪಿಸಲು ಡಿವೈಎಫ್ಐ ಒತ್ತಾಯ

“ಚಿತ್ರದುರ್ಗ ಜಿಲ್ಲೆಯಲ್ಲಿ ಕಲುಷಿತ ನೀರಿನಿಂದ ಕೇವಲ ಎರಡ್ಮೂರು ತಿಂಗಳಲ್ಲಿ 5ರಿಂದ 6 ಕಾಲರಾ ಪ್ರಕರಣಗಳು ದಾಖಲಾಗಿದ್ದು, ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತು, ಪ್ರಕರಣಗಳು ಹೆಚ್ಚಾಗದಂತೆ ಮುನ್ನೆಚ್ಚರಿಕೆ ವಹಿಸಿ, ಅಗತ್ಯ ಕ್ರಮ ಕೈಗೊಳ್ಳಬೇಕು” ಎಂದು ಸ್ಥಳೀಯರು ಆಗ್ರಹಿಸಿದರು.

WhatsApp Image 2025 11 17 at 5.21.38 PM
ವಿನಾಯಕ್ ಚಿಕ್ಕಂದವಾಡಿ
+ posts

ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ವಿನಾಯಕ್ ಚಿಕ್ಕಂದವಾಡಿ
ವಿನಾಯಕ್ ಚಿಕ್ಕಂದವಾಡಿ
ದಾವಣಗೆರೆ, ಚಿತ್ರದುರ್ಗ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...