ಚಿತ್ತಾಪುರ ಪಥಸಂಚಲನ ಪ್ರಕರಣ: ಅ.28ರಂದು ಶಾಂತಿ ಸಭೆ ನಡೆಸಲು ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

Date:

ಚಿತ್ತಾಪುರ ಪಥಸಂಚಲನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ಹೈಕೋರ್ಟ್ ಕಾರ್ಯಕ್ರಮ ಸಂಘಟಕರ ಜೊತೆ ಅಕ್ಟೋಬರ್‌ 28ರಂದು ಶಾಂತಿ ಸಭೆ ನಡೆಸಲು ಸರ್ಕಾರಕ್ಕೆ ನಿರ್ದೇಶಿಸಿದೆ.

ಎಲ್ಲರೂ ಸಹಕಾರ ನೀಡಬೇಕು ಎಂದು ನ್ಯಾಯಮೂರ್ತಿ ಎಂಜಿಎಸ್‌ ಕಮಲ್‌ ಅವರ ಏಕಸದಸ್ಯ ಪೀಠ ನಿರ್ದೇಶಿಸಿದೆ. ಸಭೆಯ ತೀರ್ಮಾನವನ್ನು ಅಕ್ಟೋಬರ್‌ 30ರ ಮಧ್ಯಾಹ್ನ 2.30ಕ್ಕೆ ತಿಳಿಸಲು ಸೂಚಿಸಿರುವ ನ್ಯಾಯಾಲಯ ವಿಚಾರಣೆ ಮುಂದೂಡಿದೆ.

ಆರೆಸ್ಸೆಸ್ ಗೆ ನೂರು ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಹಾಗೂ ವಿಜಯದಶಮಿ ಉತ್ಸವದ ಭಾಗವಾಗಿ ಆಯೋಜಿಸಲಾಗುತ್ತಿರುವ ಪಥಸಂಚಲನಕ್ಕೆ ಅನುಮತಿ‌ ಕೋರಿ ಸಲ್ಲಿಸಿರುವ ಮನವಿ ಪರಿಗಣಿಸಲು ಸರ್ಕಾರಕ್ಕೆ‌ ನಿರ್ದೇಶಿಸುವಂತೆ ಕೋರಿ ಆರೆಸ್ಸೆಸ್ ಕಲಬುರಗಿ ಜಿಲ್ಲಾ ಸಂಚಾಲಕ ಅಶೋಕ್ ಪಾಟೀಲ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ಜಿ.ಎಸ್. ಕಮಲ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರದ ಪರ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಹಾಗೂ ಅರ್ಜಿದಾರರ ಪರ ಹಿರಿಯ ವಕೀಲ ಅರುಣ್ ಶ್ಯಾಮ್ ಅವರ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಪಥಸಂಚಲಕ್ಕೆ ಅನುಮತಿ ಕೋರಿ ಅರ್ಜಿದಾರರು ಸಲ್ಲಿಸಿರುವ ಮನವಿ ಕುರಿತು ನಿರ್ಧಾರ ಕೈಗೊಳ್ಳಲು ಸರ್ಕಾರ ಇದೇ 28ರಂದು ಆಯೋಜಕರೊಂದಿಗೆ ಸಭೆ ನಡೆಸಬೇಕು. ಸಭೆಯ ತೀರ್ಮಾನವನ್ನು ಅಕ್ಟೋಬರ್‌ 30ರ ಮಧ್ಯಾಹ್ನ 2.30ಕ್ಕೆ ನ್ಯಾಯಾಲಯಕ್ಕೆ ತಿಳಿಸಬೇಕು ಎಂದು ಸೂಚಿಸಿತು.

ಶಾಂತಿ ಸಭೆಯನ್ನು ಎಲ್ಲಿ ನಡೆಸಲಾಗುತ್ತದೆ ಎಂಬ ಮಾಹಿತಿಯನ್ನು ಶನಿವಾರ ಅರ್ಜಿದಾರರಿಗೆ ತಿಳಿಸಬೇಕು ಎಂದು ಸರ್ಕಾರಕ್ಕೆ ನಿರ್ದೇಶಿಸಿದ ನ್ಯಾಯಪೀಠ, ಆದಷ್ಟು ಬೇಗ ಇದಕ್ಕೆ ಪರಿಹಾರ ಕಂಡುಕೊಳ್ಳಬೇಕು. ಇದನ್ನು ಹೆಚ್ಚು ಎಳೆಯದಿರುವುದು ಒಳಿತು ಎಂದು ಮೌಖಿಕವಾಗಿ ತಿಳಿಸಿ, ವಿಚಾರಣೆಯನ್ನು ಅಕ್ಟೋಬರ್ 30ಕ್ಕೆ ಮುಂದೂಡಿತು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕೆಲಸಗಾರ ಕಂದಾಯ ಸಚಿವರು ಭಕ್ತರ ಕ್ಯೂ ಕಾಯಲು ನಿಲ್ಲುವುದು ತರವಲ್ಲ

ಕೋರ್ಟ್‌ನಲ್ಲಿ ನಡೆದ ವಾದ – ಪ್ರತಿವಾದ

ಸರ್ಕಾರದ ಪರ ವಕೀಲ ಎಜಿ ಶಶಿಕಿರಣ್ ಶೆಟ್ಟಿ:
ಜಿಲ್ಲಾಧಿಕಾರಿ ತಮ್ಮ ವರದಿಯಲ್ಲಿ 2 ಅಭಿಪ್ರಾಯಗಳನ್ನು ನೀಡಿದ್ದಾರೆ. ಜನರಿಗೆ ತೊಂದರೆಯಾಗುವ ಬಗ್ಗೆ ಕಲಬುರಗಿ ಎಸ್‌ಪಿ ವರದಿ ನೀಡಿದ್ದಾರೆ. ಪಥಸಂಚಲನದ ಮಾರ್ಗದಲ್ಲಿ ಸಂಚಾರ ದಟ್ಟಣೆಯಾಗುವ ಸಾಧ್ಯತೆಯಿದೆ. ಹೀಗಾಗಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಯಿದೆ. ಪರಿಸ್ಥಿತಿ ಸಾಮಾನ್ಯವಾದ ನಂತರ ಪಥಸಂಚಲನ ಸೂಕ್ತ. ಕೆಲ ವಾರಗಳ ಬಳಿಕ ಪಥಸಂಚಲನ ನಡೆಸುವುದು ಸೂಕ್ತವೆಂದು ವರದಿಯಿದೆ. ಇದರಿಂದ ಯಾವುದೇ ಸಂಘಟನೆಗಳಿಗೂ ಅನುಮತಿ ನೀಡದಂತೆ ವರದಿಯಿದೆ ಎಂದು ಸರ್ಕಾರದ ಪರ ವಕೀಲ ಎಜಿ (ಅಡ್ವೊಕೇಟ್ ಜನರಲ್) ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು.

ಎಜಿ ಶಶಿಕಿರಣ್ ಶೆಟ್ಟಿ: ನಾವು ಅರ್ಜಿದಾರರ ಮನವಿಯನ್ನು ತಿರಸ್ಕರಿಸಿಲ್ಲ, ಬಾಕಿಯಿರಿಸಿದ್ದೇವೆ.

ಹೈಕೋರ್ಟ್: ಹಾಗಿದ್ದರೆ ಯಾವಾಗ ತೀರ್ಮಾನ ಕೈಗೊಳ್ಳುತ್ತೀರಿ?

ಎಜಿ ಶಶಿಕಿರಣ್ ಶೆಟ್ಟಿ: ಶಾಂತಿ ಸಭೆ ನಡೆಸಿ ಕ್ರಮ ಕೈಗೊಳ್ಳಲಾಗುವುದು. ಎರಡು ವಾರಗಳ ಬಳಿಕ ವಿಚಾರಣೆ ನಡೆಸಬೇಕೆಂದು ಮನವಿ.

ಹೈಕೋರ್ಟ್: ನಿಮ್ಮ ಆಡಳಿತ ಸಾಮರ್ಥ್ಯ ಸಾಬೀತಿಗೆ ಇದು ಸಕಾಲ. ಎಲ್ಲರಿಗೂ ಸಮಾಧಾನಕರವಾಗುವಂತೆ ಸಮಸ್ಯೆ ಬಗೆಹರಿಸಿ

ಹೈಕೋರ್ಟ್: ಸಮಸ್ಯೆ ಬಗೆಹರಿಯುವ ಮಾರ್ಗದ ಬಗ್ಗೆ ವರದಿಯಲ್ಲಿ ಸ್ಪಷ್ಟತೆಯಿಲ್ಲ

ಎಜಿ ಶಶಿಕಿರಣ್ ಶೆಟ್ಟಿ: 8 ಬೇರೆ ಸಂಘಟನೆಗಳೂ ಪಥಸಂಚಲನಕ್ಕೆ ಅನುಮತಿ ಕೋರಿದ್ದರೂ ಪರಿಗಣಿಸಿಲ್ಲ. ಪಥಸಂಚಲನದ ಬಗ್ಗೆ ಒಂದೊಂದು ರೀತಿಯ ಹೇಳಿಕೆ ನೀಡಿದ್ದಾರೆ. ಹೀಗಾಗಿ 2 ವಾರಗಳಲ್ಲಿ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುತ್ತೇವೆ.

RSS ಪರ ವಕೀಲ: ನವೆಂಬರ್ 2ರಂದು ಪಥಸಂಚಲನಕ್ಕೆ ನಾವು ಒಪ್ಪಿದ್ದೆವು. ಈಗ ಪಥಸಂಚಲನಕ್ಕೆ ಅಡ್ಡಿ ಸೃಷ್ಟಿಸಲಾಗುತ್ತಿದೆ. ರಾಜ್ಯ ಸರ್ಕಾರಕ್ಕೆ ಸಾಧ್ಯವಾಗದಿದ್ದರೆ ಕೇಂದ್ರದ ಪಡೆ ನಿಯೋಜಿಸಲಿ. ಪಥಸಂಚಲನ ನಡೆಸುವುದು ಮೂಲಭೂತ ಹಕ್ಕಾಗಿದೆ.

ಹೈಕೋರ್ಟ್: ಶಾಂತಿ ಸಮಿತಿ ಸಭೆ ಯಾವತ್ತು ಕರೆಯುತ್ತೀರಿ? ಅ.28ರಂದು ಶಾಂತಿ ಸಭೆ ನಡೆಸಿ ಅ.30ರಂದು ವರದಿ ಸಲ್ಲಿಸಿ

RSS ಪರ ವಕೀಲ: ನಾಳೆ ಶಾಂತಿ ಸಭೆ ಕರೆಯಲು ಅನುಮತಿಸಬೇಕು.

ಎಜಿ ಶಶಿಕಿರಣ್ ಶೆಟ್ಟಿ: ಸಭೆ ಯಾವಾಗ ಕರೆಯಬೇಕೆಂದು ಅರ್ಜಿದಾರರು ಆದೇಶಿಸುವಂತಿಲ್ಲ. ಚಿತ್ತಾಪುರದಲ್ಲಿ ಪ್ರತಿದಿನ ಏನೆಲ್ಲಾ ಆಗುತ್ತಿದೆ ಎಂಬುದನ್ನು ದಿನಂಪ್ರತಿ ಮಾಧ್ಯಮಗಳಲ್ಲಿ ನೋಡುತಿದ್ದೇವೆ. ಎಲ್ಲವನ್ನೂ ಪರಿಹರಿಸಲಾಗುವುದು. ಅರ್ಜಿದಾರರು ಸಹಕಾರ ನೀಡಬೇಕು.

RSS ಪರ ವಕೀಲ: ನಾವು ಎಲ್ಲ ರೀತಿಯ ಸಹಕಾರ ನೀಡಲು ಸಿದ್ಧರಿದ್ದೇವೆ.

ಹೈಕೋರ್ಟ್: ಸಂಘಟನೆಗಳೊಂದಿಗೆ ಅ.28 ರಂದು ಶಾಂತಿ ಸಭೆ ನಡೆಸಬೇಕು. ಚಿತ್ತಾಪುರದಲ್ಲಿನ ಪರಿಸ್ಥಿತಿ ಪರಿಗಣಿಸಿ ನಿರ್ಧಾರ ಕೈಗೊಳ್ಳಬೇಕು. ಸಭೆಯ ನಿರ್ಧಾರವನ್ನು ಅ.30 ರಂದು ತಿಳಿಸಿ

ಹೈಕೋರ್ಟ್ ಸಭೆಯ ಸಮಯವನ್ನು ಒಂದು ದಿನದಲ್ಲಿ ಅರ್ಜಿದಾರರಿಗೆ ತಿಳಿಸಿ. ವಿಚಾರವನ್ನು ಹೆಚ್ಚು ಅಲಂಬಿಸಬೇಡಿ. ಬೇಗ ಸಮಸ್ಯೆ ಬಗೆಹರಿಯುವುದು ಎಲ್ಲರಿಗೂ ಒಳ್ಳೆಯದು ಎಂದು ಹೇಳಿ ವಿಚಾರಣೆಯನ್ನು ಅ.30ಕ್ಕೆ ಮುಂದೂಡಿತು.

ಕೋರ್ಟ್ ಸೂಚನೆಯಂತೆ ಸರ್ಕಾರ ಅಕ್ಟೋಬರ್ 28ರಂದು ಸಭೆ ನಡೆಸಿ ಚಿತ್ತಾಪುರದಲ್ಲಿ ಸ್ಥಿತಿಗತಿ ಬಗ್ಗೆ ಅಕ್ಟೋಬರ್ 30ರೊಳಗೆ ವರದಿ ನೀಡಬೇಕಿದೆ. ಬಳಿಕ ಕೋರ್ಟ್, ಈ ವರದಿ ಆಧಾರದ ಮೇಲೆ ಆದೇಶ ನೀಡಲಿದೆ. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...