ಕ್ರಿಸ್‌ಮಸ್ ಹಿನ್ನೆಲೆ: ಕೆಎಸ್‌ಆರ್‌ಟಿಸಿಯಿಂದ 1000 ಹೆಚ್ಚುವರಿ ಬಸ್ಸುಗಳ ವಿಶೇಷ ವ್ಯವಸ್ಥೆ

Date:

ಕ್ರಿಸ್‌ಮಸ್ ಹಬ್ಬದ ಪ್ರಯುಕ್ತ ಸಾರ್ವಜನಿಕರು ಹಾಗೂ ಪ್ರಯಾಣಿಕರ ಅನುಕೂಲಕ್ಕಾಗಿ 1000 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ ಎಂದು ಕೆಆರ್‌ಟಿಸಿಯು ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 1000 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದ್ದು, ನಂತರ ರಾಜ್ಯದ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ: 26.12.2025 ಹಾಗೂ 28.12.2025 ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದು ನಿಗಮವು ತಿಳಿಸಿದೆ.

ಬಸ್ಸುಗಳ ವಿವರಗಳು ಹೀಗಿದೆ:

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

• ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗೀರ್, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ

• ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ.

• ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಕಲ್ಪಿಸಲಾಗಿದೆ.

• ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೆಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸಬೇಕು.


• ಇ-ಟಿಕೆಟ್ ಬುಕಿಂಗ್‌ ಅನ್ನು www.ksrtc.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ.


• ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತಾರಾಜ್ಯದಲ್ಲಿ ಇರುವ ಗಣಕೀಕೃತ ಬುಕ್ಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.


• ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟು ಕಾಯ್ದಿರಿಸಿದಲ್ಲಿ ಶೇಕಡ 5ರಷ್ಟು ರಿಯಾಯಿತಿ ಹಾಗೂ ಹೋಗುವ & ಬರುವ ಪ್ರಯಾಣದ ಟಿಕೆಟ್‌ ಅನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10ರಷ್ಟು ರಿಯಾಯಿತಿ.


• ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟ್ರ ಹಾಗೂ ಪುದುಚೇರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.


• ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.


• ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...