ಸಿಎಂ ಬದಲಾವಣೆ ಹೇಳಿಕೆ | ಶಾಸಕ ಶಿವಗಂಗಾಗೆ ನೋಟಿಸ್: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

Date:

ಹಲವು ಎಚ್ಚರಿಕೆಗಳ ನಡುವೆಯೂ ಮುಖ್ಯಮಂತ್ರಿ ಅಧಿಕಾರ ಹಸ್ತಾಂತರದ ಬಗ್ಗೆ ಹೇಳಿಕೆ ಮುಂದುವರೆಸಿರುವ ಶಾಸಕ ಬಸವರಾಜು ವಿ ಶಿವಗಂಗಾ ಅವರಿಗೆ ನೋಟಿಸ್ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.

“ಸಿಎಂ ಅಧಿಕಾರ ಮತ್ತಿತರ ವಿಚಾರಗಳ ಬಗ್ಗೆ ಯಾರೂ ಮಾತಾಡಬಾರದು. ಶಾಸಕರು ಪಕ್ಷದ ಶಿಸ್ತು ಪಾಲಿಸಬೇಕು. ಚೌಕಟ್ಟು ಮೀರಬಾರದು. ಅನಗತ್ಯ ಹೇಳಿಕೆಗಳನ್ನು ಕೊಟ್ಟು ಗೊಂದಲ ಮೂಡಿಸಬಾರದು ಎಂದು ಈ ಹಿಂದೆಯೇ ಕಟ್ಟುನಿಟ್ಟಾಗಿ ಸೂಚನೆ ನೀಡಲಾಗಿದೆ. ಆದರೂ ಶಿವಗಂಗಾ ಅವರು ಮತ್ತೇ ಹೇಳಿಕೆ ನೀಡಿರುವುದು ಪಕ್ಷದ ಶಿಸ್ತಿನ ಉಲ್ಲಂಘನೆ ಆಗುತ್ತದೆ. ಹೀಗಾಗಿ ಅವರಿಗೆ ನೋಟಿಸ್ ನೀಡಲಾಗುವುದು” ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಚನ್ನಗಿರಿ ವಿಧಾನಸಭೆ ಕ್ಷೇತ್ರದ ಶಾಸಕ ಬಸವರಾಜು ವಿ ಶಿವಗಂಗಾ ಅವರು ದಾವಣಗೆರೆಯಲ್ಲಿ ಇಂದು ಸಿಎಂ ಅಧಿಕಾರ ಕುರಿತು ಹೇಳಿಕೆ ನೀಡಿದರು. “ರಕ್ತದಲ್ಲಿ ಬೇಕಾದರೆ ಬರೆದು ಕೊಡ್ತೀನಿ, ಡಿಸೆಂಬರ್ ಒಳಗೆ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ, ಅದರಲ್ಲೂ ಡಿಸೆಂಬರ್ ನೊಳಗೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ” ಎಂದಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...