ಪ್ರವಾಹ ಪೀಡಿತ ಕಲಬುರಗಿ ಜಿಲ್ಲೆಯಲ್ಲಿ ಸಿಎಂ ವೈಮಾನಿಕ ಸಮೀಕ್ಷೆ; ಶೀಘ್ರದಲ್ಲೇ ಪ್ಯಾಕೇಜ್‌ ಘೋಷಣೆ

Date:

ಕಲಬುರಗಿ ಜಿಲ್ಲೆಯಲ್ಲಿ ಭೀಕರ ಪ್ರವಾಹದಿಂದ ಉಂಟಾದ ಹಾನಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೈಮಾನಿಕ ಸಮೀಕ್ಷೆಯ ಮೂಲಕ ಪರಿಶೀಲಿಸಿದ ಬಳಿಕ, ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಾಲ್ಕು ಜಿಲ್ಲೆಗಳ ಶಾಸಕರು, ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಸಭೆಯಲ್ಲಿ ಪ್ರವಾಹ ಪೀಡಿತರಿಗೆ ತುರ್ತು ಪರಿಹಾರ, ಬೆಳೆ ಹಾನಿ ಸಮೀಕ್ಷೆ, ಮತ್ತು ದೀರ್ಘಕಾಲೀನ ಪುನರ್ವಸತಿ ಯೋಜನೆಗಳ ಕುರಿತು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಯಿತು.

ಬೆಳೆ ಹಾನಿ ಮತ್ತು ಪರಿಹಾರ
ಸೆಪ್ಟೆಂಬರ್ ಮೊದಲ ವಾರದವರೆಗೆ ಆಗಿರುವ ಬೆಳೆ ಹಾನಿಯ ಜಂಟಿ ಸಮೀಕ್ಷೆ ಮುಗಿದು ಪರಿಹಾರ ವಿತರಣೆಗೆ ಸಿದ್ಧತೆ ನಡೆಯುತ್ತಿರುವಾಗ, ಎರಡನೇ ಸುತ್ತಿನ ಬೆಳೆ ಹಾನಿ ಸಂಭವಿಸಿದೆ. ಈ ಕಾರಣಕ್ಕೆ, ಸೆಪ್ಟೆಂಬರ್ ತಿಂಗಳಿನಲ್ಲಿ ಒಟ್ಟಾರೆಯಾಗಿ ಆಗಿರುವ ಬೆಳೆ ಹಾನಿಯ ಸಮೀಕ್ಷೆಯನ್ನು ವೈಜ್ಞಾನಿಕವಾಗಿ ಮುಗಿಸಿ, ಎಲ್ಲಾ ಸಂತ್ರಸ್ಥರಿಗೆ ಒಟ್ಟಿಗೆ ಪರಿಹಾರ ಒದಗಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಇದರಿಂದ ಕೆಲವರಿಗೆ ಮಾತ್ರ ಪರಿಹಾರ ಸಿಗುತ್ತಿದೆ ಎಂಬ ಗೊಂದಲ ತಪ್ಪಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಪ್ರಸ್ತುತ, ಪ್ರವಾಹದಿಂದ ಕೃಷಿ ಭೂಮಿಗೆ ಕಾಲಿಡಲು ಸಾಧ್ಯವಾಗದ ಪರಿಸ್ಥಿತಿಯಿದ್ದು, ಪ್ರವಾಹ ಇಳಿಮುಖವಾದ ಬಳಿಕ ತುರ್ತು ಜಂಟಿ ಸಮೀಕ್ಷೆ ನಡೆಸಿ ಪರಿಹಾರ ವಿತರಣೆಗೆ ಸರ್ಕಾರ ಸಿದ್ಧವಾಗಿದೆ. ಸಮೀಕ್ಷೆಗಾಗಿ, ಪ್ರವಾಹ ಇಲ್ಲದ ಸಮೀಪದ ಜಿಲ್ಲೆಗಳಿಂದ ಕೃಷಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಪೀಡಿತ ಪ್ರದೇಶಗಳಿಗೆ ನಿಯೋಜಿಸಲು ತೀರ್ಮಾನಿಸಲಾಗಿದೆ. ಅಂದಾಜು 10 ಲಕ್ಷ ಹೆಕ್ಟೇರ್‌ನಲ್ಲಿ ಬೆಳೆ ಹಾನಿಯಾಗಿದ್ದು, ಇದರಲ್ಲಿ 5 ಲಕ್ಷ ಹೆಕ್ಟೇರ್‌ಗೆ ಮಾತ್ರ ಸಮೀಕ್ಷೆ ಮುಗಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರವಾಹದಿಂದ ಮನೆಗಳು, ಸಂಪರ್ಕ ರಸ್ತೆಗಳು, ಸೇತುವೆಗಳು ಮತ್ತು ಬ್ಯಾರೇಜ್‌ಗಳಿಗೆ ಭಾರೀ ಹಾನಿಯಾಗಿದೆ. ಇತಿಹಾಸದಲ್ಲಿ ಕಂಡುಕೇಳರಿಯದ ಈ ಪ್ರವಾಹದಿಂದ ಉಂಟಾದ ಹಾನಿಯ ಸಮಗ್ರ ವರದಿಗಾಗಿ ಸಮೀಕ್ಷೆಯನ್ನು ತ್ವರಿತಗೊಳಿಸಲು ಸೂಚಿಸಲಾಗಿದೆ. ಜನ ಮತ್ತು ಜಾನುವಾರುಗಳ ಪ್ರಾಣಹಾನಿಯ ಬಗ್ಗೆ ಭಾಗಶಃ ಮಾಹಿತಿ ಲಭ್ಯವಿದ್ದು, ಪೂರ್ಣ ವರದಿಗಾಗಿ ಸಮೀಕ್ಷೆಯನ್ನು ಮುಂದುವರಿಸಲಾಗುವುದು ಎಂದು ಸಿಎಂ ತಿಳಿಸಿದರು.

ಶಾಲೆಗಳ ಸುರಕ್ಷತೆ ಮತ್ತು ಆರೋಗ್ಯ
ಪ್ರವಾಹ ಪೀಡಿತ ಗ್ರಾಮಗಳ ಶಾಲೆಗಳ ಸುರಕ್ಷತೆಯನ್ನು ಕಡ್ಡಾಯವಾಗಿ ಪರೀಕ್ಷಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಶಾಲೆಗಳು ಸುರಕ್ಷಿತವಾಗಿಲ್ಲದಿದ್ದರೆ, ಅವುಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಆದೇಶಿಸಲಾಗಿದೆ. ಇದರಲ್ಲಿ ಯಾವುದೇ ನಿರ್ಲಕ್ಷ್ಯ ಸಹಿಸಲಾಗದು ಎಂದು ಮುಖ್ಯಮಂತ್ರಿಗಳು ಖಡಕ್ ಸೂಚನೆ ನೀಡಿದ್ದಾರೆ. ಜೊತೆಗೆ, ಸಾಂಕ್ರಾಮಿಕ ರೋಗಗಳ ತಡೆಗಾಗಿ ಆರೋಗ್ಯ ರಕ್ಷಣೆಗೆ ಒತ್ತು ನೀಡಲಾಗಿದ್ದು, ಶಾಲಾ ಮಕ್ಕಳ ಹಾಸ್ಟೆಲ್‌ಗಳಲ್ಲಿ ಆರೋಗ್ಯ ತಪಾಸಣೆ ಕಡ್ಡಾಯಗೊಳಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ತೇಲುತ್ತಿರುವ ಉತ್ತರ ಕರ್ನಾಟಕ; ಹಾರಾಡುತ್ತಿರುವ ಅಧಿಕಾರಸ್ಥರು

ತಡೆಗೋಡೆ ಮತ್ತು ಪುನರ್ವಸತಿ
ಪ್ರವಾಹದಿಂದ ಮುಂದಿನ ಅನಾಹುತ ತಪ್ಪಿಸಲು ಅಗತ್ಯ ಕಡೆ ತಾತ್ಕಾಲಿಕ ಮತ್ತು ಶಾಶ್ವತ ತಡೆಗೋಡೆಗಳನ್ನು ಕಟ್ಟಲು ಸಿಎಂ ಸೂಚಿಸಿದ್ದಾರೆ. ಪದೇ ಪದೇ ಪ್ರವಾಹಕ್ಕೆ ತುತ್ತಾಗುವ ಗ್ರಾಮಗಳ ಸ್ಥಳಾಂತರಕ್ಕೆ ಸೂಕ್ತ ಯೋಜನೆ ರೂಪಿಸಲು, ಹಿಂದಿನ ಇಲಾಖೆಯ ಅನುಭವಗಳನ್ನು ಪರಿಗಣಿಸಿ ಕ್ರಮ ಕೈಗೊಳ್ಳಲು ನಿರ್ದೇಶಿಸಲಾಗಿದೆ. ಜೊತೆಗೆ, ಪ್ರವಾಹದಿಂದ ಕೃಷಿ ಭೂಮಿಯ ಫಲವತ್ತತೆ ಕಳೆದುಕೊಂಡಿರುವುದರಿಂದ, ಕೆರೆಗಳಿಂದ ಫಲವತ್ತಾದ ಹೂಳನ್ನು ತೆಗೆದು ಭೂಮಿಗೆ ಹಾಕಲು ಗ್ರಾಮೀಣಾಭಿವೃದ್ಧಿ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಹೇಳಿದರು.

ಆರ್ಥಿಕ ಪರಿಹಾರ ಮತ್ತು ಕೇಂದ್ರಕ್ಕೆ ಬೇಡಿಕೆ
ಪರಿಹಾರ ಕಾರ್ಯಗಳಿಗೆ ಹಣಕ್ಕೆ ಕೊರತೆಯಿಲ್ಲವೆಂದು ತಿಳಿಸಿರುವ ಮುಖ್ಯಮಂತ್ರಿಗಳು, PD ಖಾತೆಯಲ್ಲಿ ಸಾಕಷ್ಟು ಹಣ ಸಂಗ್ರಹವಿದೆ ಎಂದಿದ್ದಾರೆ. ಅಂದಾಜು 1,000 ಕೋಟಿ ರೂಪಾಯಿಗಳಷ್ಟು ಪರಿಹಾರ ವಿತರಣೆಗೆ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಜೊತೆಗೆ, ಮಹಾರಾಷ್ಟ್ರ ಸರ್ಕಾರವು ಕೇಂದ್ರಕ್ಕೆ 2,200 ಕೋಟಿ ರೂಪಾಯಿಗಳ ಪರಿಹಾರಕ್ಕಾಗಿ ಮನವಿ ಸಲ್ಲಿಸಿರುವಂತೆ, ಕರ್ನಾಟಕಕ್ಕೂ ಸೂಕ್ತ ಪರಿಹಾರ ಬಿಡುಗಡೆಗೆ ಕೇಂದ್ರವನ್ನು ಒತ್ತಾಯಿಸಲು ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಸಿಎಂ ತಿಳಿಸಿದರು.

ಇತರೆ ಕ್ರಮಗಳು
ಪ್ರವಾಹದಿಂದ ದಾಖಲೆಗಳು ಮತ್ತು ಗುರುತಿನ ಚೀಟಿಗಳು ಹಾಳಾದವರಿಗೆ ಅಭಿಯಾನದ ರೂಪದಲ್ಲಿ ಹೊಸ ದಾಖಲೆಗಳನ್ನು ಒದಗಿಸಲು ಸೂಚನೆ ನೀಡಲಾಗಿದೆ. ಗ್ರಾಮೀಣ ನೀರು ಸರಬರಾಜು ವ್ಯವಸ್ಥೆಯನ್ನು ಪರೀಕ್ಷಿಸಿ, ಅಂತರ್ಜಲ ಕಲುಷಿತಗೊಳ್ಳದಂತೆ ಕ್ರಮ ಕೈಗೊಳ್ಳಲಾಗುವುದು. ಕೃಷಿ ವಿಮೆಯನ್ನು ಸಮರ್ಪಕವಾಗಿ ಒದಗಿಸಲು ವಿಮಾ ಕಂಪನಿಗಳಿಗೆ ಖಡಕ್ ಸೂಚನೆ ನೀಡಲು ಮತ್ತು ಸಂತ್ರಸ್ಥ ರೈತರಿಗೆ ಬ್ಯಾಂಕ್‌ಗಳ ಸಹಾಯಕ್ಕಾಗಿ ಜಿಲ್ಲಾಧಿಕಾರಿಗಳು ಚರ್ಚೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಹೇಳಿದರು.

ಹವಾಮಾನ ಬದಲಾವಣೆಯ ಪರಿಣಾಮ
ಹವಾಮಾನ ಬದಲಾವಣೆಯ ತೀವ್ರ ಪರಿಣಾಮದಿಂದ ರಾಜ್ಯದ ಒಟ್ಟು ಎಂಟು ಜಿಲ್ಲೆಗಳಲ್ಲಿ ಅನಾಹುತಗಳು ಸಂಭವಿಸಿವೆ. SDRF ಮಾನದಂಡದಂತೆ, ಹೆಕ್ಟೇರ್‌ಗೆ 8,500 ರೂ., ತೋಟಗಾರಿಕೆ ಬೆಳೆಗೆ 17,000 ರೂ., ಮತ್ತು ಕೆರೆ ಕೃಷಿಗೆ 22,500 ರೂ. ಪರಿಹಾರವನ್ನು ಸಮೀಕ್ಷೆ ಮುಗಿದ ತಕ್ಷಣ ಬಿಡುಗಡೆಗೊಳಿಸಲು ಕಂದಾಯ ಇಲಾಖೆಗೆ ಸೂಚನೆ ನೀಡಲಾಗಿದೆ. ಶೀಘ್ರದಲ್ಲೇ ಸಮಗ್ರ ಪರಿಹಾರ ಪ್ಯಾಕೇಜ್ ಘೋಷಣೆಯಾಗಲಿದ್ದು, ಸಂತ್ರಸ್ಥರಿಗೆ ತ್ವರಿತ ನೆರವು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...