ಎಸ್‌ ಎಲ್ ಭೈರಪ್ಪ ಪಾರ್ಥಿವ ಶರೀರಕ್ಕೆ ಸಿಎಂ, ಡಿಸಿಎಂ ಅಂತಿಮ ನಮನ; ಸ್ಮಾರಕ ನಿರ್ಮಾಣ ಘೋಷಣೆ

Date:

ಖ್ಯಾತ ಸಾಹಿತಿ ಎಸ್ ಎಲ್ ಭೈರಪ್ಪ ಅವರ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಸಚಿವ ಸಚಿವರಾದ ಶಿವರಾಜ್ ತಂಗಡಗಿ, ಮಧು ಬಂಗಾರಪ್ಪ ಸೇರಿದಂತೆ ವಿವಿಧ ಗಣ್ಯರು ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಗುರುವಾರ ಅಂತಿಮ ನಮನ ಸಲ್ಲಿಸಿದರು.

ಭೈರಪ್ಪ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, “ಭೈರಪ್ಪ ಅವರು ಹೆಚ್ಚಿನ ಸಮಯ ಮೈಸೂರಿನಲ್ಲೇ ಇದ್ದವರು. ಹೀಗಾಗಿ ಅವರ ಸ್ಮಾರಕವನ್ನು ಮೈಸೂರಿನಲ್ಲೇ ನಿರ್ಮಾಣ ಮಾಡಲಾಗುವುದು” ಎಂದು ಸಿದ್ದರಾಮಯ್ಯ ಘೋಷಿಸಿದರು.

“ಅಪಾರ ಓದುಗರನ್ನು ಸಂಪಾದಿಸಿದವರು ಭೈರಪ್ಪನವರು. ಅವರ ನಿಧನದಿಂದ ಸಾರಸ್ವತ ಲೋಕ ಬಹಳ ಬಡವಾಗಿದೆ. ಅವರದ್ದು ಜಗತ್ ಪ್ರಸಿದ್ಧ ಆಗಿರುವಂತಹ ಕಾದಂಬರಿಗಳು. ಅವರ, ಕೆಲವು ಕಾದಂಬರಿಗಳನ್ನು ನಾನು ಓದಿದ್ದೇನೆ. ಅವರ ಕುಟುಂಬದ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ” ಎಂದು ಸಂತಾಪ ಸೂಚಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಭೈರಪ್ಪ ಅವರ ಕಾದಂಬರಿಗಳು ಅನೇಕ ಭಾಷೆಗಳಿಗೆ ಅನುನಾದಗೊಂಡಿವೆ. ಬಹುಶಃ ಕನ್ನಡದ ಇತರ ಯಾವ ಸಾಹಿತಿಯ ಕೃತಿಗಳೂ ಅಷ್ಟೊಂದು ಸಂಖ್ಯೆಯಲ್ಲಿ ಬೇರೆ ಭಾಷೆಗಳಿಗೆ ಅನುವಾದಗೊಂಡಿಲ್ಲ. ಸರಸ್ವತಿ ಸಮ್ಮಾನ್ ಪುರಸ್ಕೃತ ಭೈರಪ್ಪ ಅವರಿಗೆ ಜ್ಞಾನಪೀಠ ಪ್ರಶಸ್ತಿ ಕೂಡ ಸಿಗಬೇಕಿತ್ತು. ಅವರು ಅದಕ್ಕೆ ಅರ್ಹರಾಗಿದ್ದರು” ಎಂದರು.

“ಭೈರಪ್ಪ ಅವರು ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿರುವ ಸಾಹಿತಿ. ವಿಶ್ವದ ಹಲವು ಭಾಷೆಗಳಿಗೆ ಅವರ ಕಾದಂಬರಿ ಅನುವಾದಗೊಂಡಿವೆ. ಅವರ ಕಾದಂಬರಿಗಳು ಸಿನೆಮಾಗಳು ಕೂಡ ಆಗಿವೆ. ಸಂಸ್ಕೃತಿ ಎತ್ತಿ ಹಿಡಿದು ಸಮಾಜಕ್ಕೆ ಮಾರ್ಗದರ್ಶನ ಮಾಡಿದವರು ಭೈರಪ್ಪ” ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

ಇದಕ್ಕೂ ಮುನ್ನ ಅಂತಿಮ ದರ್ಶನ ಪಡೆದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭೈರಪ್ಪ ಅವರ ಸ್ಮಾರಕ ನಿರ್ಮಿಸಬೇಕೆಂದು ಆಗ್ರಹಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...