ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷ ರವಿಕುಮಾರ್ ರಾಜೀನಾಮೆಗೆ ಸಿಎಂ ಸೂಚನೆ

Date:

ಭೋವಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ನಿಗಮದ ಅಧ್ಯಕ್ಷ ರವಿಕುಮಾರ್‌ಗೆ ರಾಜೀನಾಮೆ ನೀಡುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಭೂಮಿ ಮಂಜೂರಾದವರಿಗೆ 25 ಲಕ್ಷ ರೂ. ಸಹಾಯಧನ ಬಿಡುಗಡೆ ಮಾಡಲು ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ 5 ಲಕ್ಷ ರೂ. ಕಮಿಷನ್ ಪಡೆಯುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಲಂಚದ ಆರೋಪ ಕೇಳಿ ಬಂದಿದ್ದರಿಂದ ರವಿಕುಮಾರ್ ಶೀಘ್ರದಲ್ಲಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ದಿಕ್ಕು ತಪ್ಪಿಸುವ ದೃಶ್ಯಮಾಧ್ಯಮಗಳು ಮತ್ತು ಧರ್ಮಯಾತ್ರೆಗಳು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭ್ರಷ್ಟಾಚಾರದ ಆರೋಪ ರವಿಕುಮಾರ್ ತಲೆ ದಂಡಕ್ಕೆ ಕಾರಣವಾಗಿದೆ. ರವಿಕುಮಾರ್ ಮೂಲತಃ ಶಿವಮೊಗ್ಗ ಜಿಲ್ಲೆಯವರು. ಶಿವಮೊಗ್ಗ ಗ್ರಾಮೀಣಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.

ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೋವಿ ಅಭಿವೃದ್ದಿ ನಿಗಮದಲ್ಲಿ ಅಧಿಕಾರಿಗಳು ಭ್ರಷ್ಟಾಚಾರ ನಡೆಸಿದ್ದ ಆರೋಪ ಕೇಳಿ ಬಂದಿತ್ತು. ಅದರ ಬಗ್ಗೆಯೂ ಪೊಲೀಸ್ ಠಾಣೆ, ಸಿಐಡಿಯಲ್ಲಿ ಪ್ರಕರಣ ದಾಖಲಾಗಿ ಪೊಲೀಸರು ತನಿಖೆ ನಡೆಸಿದ್ದರು. ಈಗ ಭೋವಿ ಅಭಿವೃದ್ದಿ ನಿಗಮದ ಅಧ್ಯಕ್ಷರ ವಿರುದ್ಧ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...