ಬರ ಪರಿಹಾರ | ಕೈಗೊಂಡ ಕ್ರಮಗಳ ಬಗ್ಗೆ ನ. 15ರೊಳಗೆ ವರದಿ ನೀಡಲು ಸಚಿವರಿಗೆ ಸಿಎಂ ಸೂಚನೆ

Date:

  • ‘ಜಿಲ್ಲಾ ಉಸ್ತುವಾರಿ ಸಚಿವರು ಪ್ರತಿ ತಾಲೂಕಿಗೂ ಭೇಟಿ ನೀಡಬೇಕು’
  • ‘ವೈಫಲ್ಯಗಳಾಗದಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ’ 

ಬರಪೀಡಿತ ಜಿಲ್ಲೆಗಳಲ್ಲಿ ಸಂಚರಿಸಿ, ಬರ ಪರಿಹಾರಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರು ಮುಂದಿನ ಎರಡು ವಾರಗಳಲ್ಲಿ, ತಮ್ಮ ಉಸ್ತುವಾರಿ ಜಿಲ್ಲೆಯ ಪ್ರತಿ ತಾಲೂಕುಗಳಿಗೆ ಭೇಟಿ ನೀಡಿ, ಕುಡಿಯುವ ನೀರು, ಮೇವು, ಉದ್ಯೋಗ, ಬೆಳೆಹಾನಿ, ಮುಂತಾದವುಗಳ ಸ್ಥಿತಿಗತಿಗಳ ಕುರಿತು ಪರಿಶೀಲಿಸಬೇಕು. ಪರಿಸ್ಥಿತಿಯನ್ನು ಅವಲೋಕಿಸಿ ಅಗತ್ಯ ಮಾಹಿತಿ ಸಂಗ್ರಹಿಸಬೇಕು” ಎಂದು ಹೇಳಿದ್ದಾರೆ.

“ಸ್ಥಳೀಯ ಶಾಸಕರೊಂದಿಗೆ ಗೋಶಾಲೆ, ಮೇವು ಬ್ಯಾಂಕ್, ಕುಡಿಯುವ ನೀರು, ಉದ್ಯೋಗ ಸೃಷ್ಟಿ ಮುಂತಾದ ಪರಿಹಾರ ಕ್ರಮಗಳ ಬಗ್ಗೆ ಸಮಾಲೋಚಿಸಿ, ಅಗತ್ಯವಿರುವ ಕಡೆ ಭೇಟಿ ಪರಿಶೀಲಿಸಿ. ಬರ ನಿರ್ವಹಣೆ ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಯಾವುದೇ ರೀತಿಯ ವೈಫಲ್ಯಗಳಾಗದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಬೇಕು” ಎಂದು ಸೂಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕಾಂಗ್ರೆಸ್‌ನಲ್ಲಿ ಸದ್ಯಕ್ಕೆ ಸಿಎಂ ಕುರ್ಚಿ ಖಾಲಿಯಿಲ್ಲ: ಎಚ್‌ ಕೆ ಪಾಟೀಲ್

ಬರ ಪರಿಸ್ಥಿತಿಯ ಸಂಪೂರ್ಣ ವಸ್ತುಸ್ಥಿತಿ ಹಾಗೂ ಜಿಲ್ಲೆಗಳಲ್ಲಿ ಕೈಗೊಳ್ಳಲಾದ ಬರ ನಿರ್ವಹಣೆ ಕಾರ್ಯಕ್ರಮಗಳ ಬಗ್ಗೆ, ಪ್ರತಿ ತಾಲ್ಲೂಕುಗಳಲ್ಲಿ ಮಾಧ್ಯಮಗಳಿಗೆ ವಿವರಿಸಿ, ನವೆಂಬರ್‌ 15 ರೊಳಗೆ ವರದಿ ನೀಡಲು ಸಿದ್ದರಾಮಯ್ಯ ಕೋರಿದ್ದಾರೆ.

“ರಾಜ್ಯದ 236 ತಾಲೂಕುಗಳ ಪೈಕಿ ಇದುವರೆಗೆ 216 ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗಿದೆ. ಬರದ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಕುಡಿಯುವ ನೀರು, ಮೇವು, ಕೃಷಿ ಕೈಗಾರಿಕೆಗಳಿಗೆ ನೀರು, ಜನ ಬೆಳೆಹಾನಿ, ಜನರ ಉದ್ಯೋಗದ ಸ್ಥಿತಿ ಬರ ಪರಿಹಾರ ವಿತರಣೆ ಮುಂತಾದ ಬರ ನಿರ್ವಹಣೆ ಕಾರ್ಯಕ್ರಮಗಳನ್ನು ಕೈಗೊಳ್ಳುವ ಕುರಿತು ಸಚಿವ ಸಂಪುಟ ಸಭೆಗಳಲ್ಲಿ ಚರ್ಚಿಸಲಾಗಿದೆ. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೂ ಹಲವು ಬಾರಿ ನಿರ್ದೇಶನಗಳನ್ನು ನೀಡಲಾಗಿದೆ” ನಡವಳಿ ಪತ್ರದಲ್ಲಿ ಸಿಎಂ ವಿವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...