ಎಐಸಿಸಿ ಅಧ್ಯಕ್ಷರನ್ನು ಭೇಟಿಯಾದ ಸಿಎಂ, ಗರಿಗೆದರಿದ ಸಚಿವ ಸಂಪುಟ ಪುನಾರಚನೆ ಕಸರತ್ತು

Date:

ಬಿಹಾರ ಚುನಾವಣೆಯ ಫಲಿತಾಂಶ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ಗರಿಗೆದರಿವೆ. ಶನಿವಾರವಷ್ಟೇ ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಮತ್ತು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದರು.

ಇಂದು (ನ.17) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರತ್ಯೇಕವಾಗಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ. ಇಲ್ಲಿಗೆ ಬಹುತೇಕ ಸಚಿವ ಸಂಪುಟ ಪುನಾರಚನೆ ಆಗುವ ಲಕ್ಷಣಗಳು ಗೋಚರಿಸುತ್ತಿವೆ.

ಮಲ್ಲಿಕಾರ್ಜುನ ಖರ್ಗೆ ಭೇಟಿಗೂ ಮುನ್ನ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ನವೆಂಬರ್‌ 20ಕ್ಕೆ ನಮ್ಮ ಸರ್ಕಾರ ಎರಡೂವರೆ ವರ್ಷ ಪೂರೈಸಲಿದೆ. ಎಲ್ಲ ಶಾಸಕರಿಗೂ ಸಚಿವರಾಗಬೇಕು ಎನ್ನುವ ಬಯಕೆ ಇರುತ್ತದೆ. ಎಲ್ಲರೂ ಸಮರ್ಥರಿದ್ದಾರೆ” ಎನ್ನುವ ಮೂಲಕ ಸಂಪುಟ ಪುನಾರಚನೆಯ ಸುಳಿವನ್ನು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಚಿವ ಸಂಪುಟದಲ್ಲಿ ಯಾರನ್ನು ತೆಗೆಯಬೇಕು, ಯಾರನ್ನು ಉಳಿಸಿಕೊಳ್ಳಬೇಕು ಹಾಗೂ ಹೊಸದಾಗಿ ಯಾವ ಶಾಸಕರಗೆ ಸಚಿವ ಸ್ಥಾನ ನೀಡಬೇಕು ಎಂಬುದರ ಬಗ್ಗೆ ಮೊದಲ ಸುತ್ತಿನ ಮಾತುಕತೆ ಇದಾಗಿದೆ ಎನ್ನುವ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.

ರಾಹುಲ್‌ ಗಾಂಧಿ ಅವರ ಜೊತೆ ಸಿದ್ದರಾಮಯ್ಯ ಕ್ಲೋಸ್‌ ಡೋರ್‌ ಮೀಟಿಂಗ್‌ ನಡೆಸಿದ ವೇಳೆಯಲ್ಲಿಯೇ ಸಂಪುಟ ಪುನಾರಚನೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ನೀಡಿದ್ದರು ಎನ್ನುವ ಮಾಹಿತಿ ಲಭ್ಯವಾಗಿತ್ತು. ಮತ್ತೊಮ್ಮೆ ದೆಹಲಿಗೆ ಬಂದು ಎಐಸಿಸಿ ಅಧ್ಯಕ್ಷರ ಜೊತೆ ಚರ್ಚಿಸಿ, ಬಳಿಕ ಸಂಪುಟ ಪುನಾರಚನೆ ಮಾಡಿ ಅಂತ ರಾಹುಲ್ ಗಾಂಧಿ ಸೂಚನೆ ನೀಡಿದ್ದರು ಎನ್ನಲಾಗಿದೆ. ಆ ಪ್ರಕಾರ ಇಂದು ಸಿದ್ದರಾಮಯ್ಯ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದಾರೆ.

ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾದ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಶನಿವಾರದಿಂದ ದೆಹಲಿಯಲ್ಲೇ ಬೀಡು ಬಿಟ್ಟಿದ್ದಾರೆ. ಸಚಿವ ಸಂಪುಟ ಪುನಾರಚನೆ ತಡೆದು, ತಾವೇ ಮುಖ್ಯಮಂತ್ರಿಯಾಗಬೇಕು ಎನ್ನುವ ಇಂಗಿತವನ್ನು ಹೈಕಮಾಂಡ್‌ ಬಳಿ ಬಲವಾಗಿ ಪ್ರತಿಪಾದಿಸುವ ಸಾಧ್ಯತೆ ಇದೆ. ಆದರೆ ಬಿಹಾರ ಫಲಿತಾಂಶ ಗಮನಿಸಿದರೆ ಹೈಕಾಂಡ್‌ ಸಿದ್ದರಾಮಯ್ಯ ಅವರನ್ನು ಕೆಳಗಿಸುವ ಯೋಚನೆಯನ್ನು ಕನಸಿನಲ್ಲಿಯೂ ಮಾಡಲ್ಲ ಎನ್ನುತ್ತವೆ ಮೂಲಗಳು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...