ರಾತ್ರೋರಾತ್ರಿ ಪಾಕಿಸ್ತಾನದಲ್ಲಿ ವರ್ಲ್ಡ್ ಫೇಮಸ್ ಆದ ಸಿಎಂ ಸಿದ್ದರಾಮಯ್ಯ: ಆರ್‌ ಅಶೋಕ್‌ ಲೇವಡಿ

Date:

ಪಾಕಿಸ್ತಾನದ ವಿರುದ್ಧ ಯುದ್ಧ ಸಾರುವ ಅಗತ್ಯವಿಲ್ಲ. ಕಾಶ್ಮೀರದ ಪ್ರದೇಶದಲ್ಲಿ ಭದ್ರತಾ ಕ್ರಮಗಳನ್ನು ಬಿಗಿಗೊಳಿಸು ಕ್ರಮ ಕೈಗೊಳ್ಳಬೇಕು ಎಂದಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆ‌ರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

“ಪಾಕಿಸ್ತಾನ ರತ್ನ ಸಿಎಂ ಸಿದ್ದರಾಮಯ್ಯ ಅವರೇ, ತಮ್ಮ ಬಾಲಿಶ, ಅಸಂಬದ್ಧ ಹೇಳಿಕೆಗಳಿಂದ ಈಗ ರಾತ್ರೋರಾತ್ರಿ ಪಾಕಿಸ್ತಾನದಲ್ಲಿ ವರ್ಲ್ಡ್ ಫೇಮಸ್ ಆಗಿಬಿಟ್ಟಿದ್ದೀರಿ. ತಮಗೆ ಅಭಿನಂದನೆಗಳು. ಮುಂದೆಂದಾದರೂ ತಾವು ಪಾಕಿಸ್ತಾನಕ್ಕೆ ಭೇಟಿ ಕೊಟ್ಟರೆ ತಮಗೆ ರಾಜಾತಿಥ್ಯ ಗ್ಯಾರಂಟಿ” ಎಂದು ಲೇವಡಿ ಮಾಡಿದ್ದಾರೆ.

ಸಿದ್ದರಾಮಯ್ಯ ಅವರ ಹೇಳಿಕೆಗಳು ಪಾಕಿಸ್ತಾನದ ಸುದ್ದಿ ವಾಹಿನಿಗಳಲ್ಲಿ ಬಿತ್ತರಿಸಿದ್ದವು. ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಅಶೋಕ್ ಟೀಕಿಸಿದ್ದಾರೆ.

“ಪಾಕಿಸ್ತಾನದ ಪರ ವಕಾಲತ್ತು ವಹಿಸಿದ ಮಹಾನ್ ಶಾಂತಿದೂತ ಎಂದು ಪಾಕಿಸ್ತಾನ ಸರ್ಕಾರ ತಮಗೆ ಅಲ್ಲಿನ ಅತ್ಯುನ್ನತ ನಾಗರೀಕ ಪ್ರಶಸ್ತಿಯಾದ ನಿಶಾನ್-ಎ-ಪಾಕಿಸ್ತಾನ ಪ್ರಶಸ್ತಿ ಕೊಟ್ಟು ಸನ್ಮಾನ ಮಾಡಿದರೂ ಅಚ್ಚರಿಯಿಲ್ಲ” ಎಂದು ವ್ಯಂಗ್ಯವಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದೇಶ ಅತ್ಯಂತ ಸೂಕ್ಷ್ಮ ಪರಿಸ್ಥಿತಿ ಎದುರಿಸುತ್ತಿರುವಾಗ, ಗಡಿಯಲ್ಲಿ ಯುದ್ಧದ ಕಾರ್ಮೋಡ ಕವಿದಿರುವಾಗ ಈ ರೀತಿ ಶತ್ರುರಾಷ್ಟ್ರದ ಕೈಗೊಂಬೆಯಂತೆ ವರ್ತಿಸುತ್ತದ್ದೀರಲ್ಲ, ನಿಮ್ಮಂತಹವರು ಸಾರ್ವಜನಿಕ ಬದುಕಿನಲ್ಲಿ ಇರುವುದೇ ನಮ್ಮ ದೇಶದ ಅತ್ಯಂತ ದೊಡ್ಡ ದುರಂತ” ಎಂದಿದ್ದದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...